ಗೋವಾದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ಸಿನಿಂದ ರಾಜ್ಯಪಾಲರ ಭೇಟಿ
ಪಣಜಿ, ಮೇ 18: ಕಾಂಗ್ರೆಸ್ ನ ಗೋವಾ ಉಸ್ತುವಾರಿ ಚೆಲ್ಲಾ ಕುಮಾರ್ ಅವರು ಗೋವಾದಲ್ಲೂ ಕಾಂಗ್ರೆಸ್ ಗೆ ಸರ್ಕಾರ ರಚಿಸಲು ಅನುಮತಿ ನೀಡುವಂತೆ ಕೋರುವುದಕ್ಕಾಗಿ ಇಂದು ಗೋವಾ ಗವರ್ನರ್ ಮೃದುಲಾ ಸಿನ್ಹಾ ಅವರನ್ನು ಭೇಟಿಯಾಗಿದ್ದಾರೆ.
ತಮಗೆ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಪಗತ್ರ ಮುಖೇನ ರಾಜ್ಯಪಾಲರಿಗೆ ಕೋರಿದ್ದಾರೆ.
ಕರ್ನಾಟಕದಲ್ಲಿ ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚಿಸಲು ಕರ್ನಾಟಕ ರಾಜ್ಯಪಾಲ ವಾಜುಭಾಯ್ ವಾಲಾ ಅವಕಾಶ ಮಾಡಿಕೊಟ್ಟಿದ್ದಾರೆ. ಗೋವಾದ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಜಯಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನ ಗೆದ್ದಿದ್ದ ಬಿಜೆಪಿ ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಿತ್ತು.

ಕರ್ನಾಟಕದಲ್ಲಿ ಅವಕಾಶ ನೀಡುವುದಾದರೆ ನಮಗೂ ಕೊಡಬೇಕು. ನಾವು ಸರ್ಕಾರ ರಚಿಸುತ್ತೇವೆ. ನಮಗೂ ವಿಶ್ವಾಸ ಮತ ಯಾಚಿಸಲು ಅವಕಾಶ ನೀಡಬೇಕು ಎಂದು ಗೋವಾ ಕಾಂಗ್ರೆಸ್ಸಿಗರು ಒತ್ತಾಯಿಸುತ್ತಿದ್ದಾರೆ.












Click it and Unblock the Notifications