ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಲೆ ಏರಿಕೆಯಿಂದ ಕೆರಳಿದ ಕಾಂಗ್ರೆಸ್; ಸಿಲಿಂಡರ್, ಬೈಕ್‌ಗಳಿಗೆ ಪೂಜೆ

|
Google Oneindia Kannada News

ನವದೆಹಲಿ, ಮಾರ್ಚ್ 31: ಭಾರತದಲ್ಲಿ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಮುಖಿ ಆಗಿ ಏರುತ್ತಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ಕಾಂಗ್ರೆಸ್ ದೇಶವ್ಯಾಪಿ ಪ್ರತಿಭಟನೆ ನಡೆಸಿದೆ.

ದೇಶದಲ್ಲಿ ಇಂಧನ ಬೆಲೆ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿನೂತನ ಪ್ರತಿಭಟನೆಗೆ ಕರೆ ನೀಡಲಾಗಿದೆ. ದೆಹಲಿಯ ವಿಜಯ್ ಚೌಕ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ರಾಜ್ಯವ್ಯಾಪಿ ಪ್ರತಿಭಟನೆಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ರಾಜ್ಯವ್ಯಾಪಿ ಪ್ರತಿಭಟನೆ

ದ್ವಿಚಕ್ರ ವಾಹನವೊಂದಕ್ಕೆ ಹೂವಿನ ಹಾರವನ್ನು ಹಾಕಿ ಪೂಜೆ ಸಲ್ಲಿಸಲಾಯಿತು. ಇದರ ಜೊತೆಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ ಹಾರವನ್ನು ಹಾಕಿ ಪೂಜೆ ಸಲ್ಲಿಸುವ ಮೂಲಕ ಬೆಲೆ ಏರಿಕೆಯನ್ನು ಅಣಕ ಮಾಡಲಾಯಿತು.

Congress MP Rahul Gandhi along with party leaders hold protest against fuel price hike across india

ದೆಹಲಿಯಲ್ಲಿ ರಾಹುಲ್ ಗಾಂಧಿ ಸಿಲಿಂಡರ್ ಪೂಜೆ:

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ವಿಜಯ್ ಚೌಕ್‌ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ದ್ವಿಚಕ್ರ ವಾಹನ ಹಾಗೂ ಎಲ್‌ಪಿಜಿ ಸಿಲಿಂಡರ್ ಮೇಲೆ ಹೂವಿನ ಹಾರವನ್ನು ಹಾಕಿ ಪೂಜೆ ಸಲ್ಲಿಸಿದರು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರು ಫಲಕಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆ ವಿರುದ್ಧ ಧರಣಿ ಕುಳಿತರು. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಉಪಸ್ಥಿತರಿದ್ದರು.

Congress MP Rahul Gandhi along with party leaders hold protest against fuel price hike across india

10 ದಿನದಲ್ಲಿ ಪೆಟ್ರೋಲ್ ದರ 6.40 ರೂ. ಏರಿಕೆ:

ದೇಶದಲ್ಲಿ ಕಳೆದ 10 ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಆಗುತ್ತಿದೆ. ಗುರುವಾರ ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 80 ಪೈಸೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 6.40 ರೂಪಾಯಿ ಹೆಚ್ಚಳವಾಗಿದೆ.

ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ಬೆಲೆ ಏರಿಕೆ ಬಿಸಿ:

ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 137 ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡು ಬಂದಿರಲಿಲ್ಲ. ಆದರೆ ಮಾರ್ಚ್ 10ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ ಇಂಧನ ಬೆಲೆಯು ಸಾಮಾನ್ಯರ ಕೈಗೆ ಸಿಗದಂತೆ ಓಟ ಶುರುವಿಟ್ಟುಕೊಂಡಿದೆ.

Congress MP Rahul Gandhi along with party leaders hold protest against fuel price hike across india

ಭಾರತದಲ್ಲಿ ಹೇಗಿದೆ ಇಂಧನ ದರ?:

ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಬೆಲೆಯು ನೂರರ ಗಡಿ ದಾಟಿದೆ. ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ದರವು ನೂರರ ಗಡಿಯನ್ನು ದಾಟಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ದರವು 101 ರೂಪಾಯಿಯಿಂದ 116 ರೂಪಾಯಿ ಆಸುಪಾಸಿನಲ್ಲಿದೆ. ಇನ್ನು ಡೀಸೆಲ್‌ ದರವು ದೇಶದ ಒಂದೆರಡು ಪ್ರಮುಖ ನಗರದಲ್ಲಿ ನೂರರ ಗಡಿಯನ್ನು ದಾಟಿದೆ. ಹೈದರಾಬಾದ್‌, ಮುಂಬೈನಲ್ಲಿ ಡೀಸೆಲ್‌ ದರವು ನೂರರ ಗಡಿಯನ್ನು ದಾಟಿದೆ. ಉಳಿದಂತೆ ಇತರೆ ನಗರಗಳಲ್ಲಿ 90 ರೂಪಾಯಿ ಆಸುಪಾಸಿನಲ್ಲಿದೆ.

English summary
Congress MP Rahul Gandhi along with party leaders hold protest against fuel price hike across india.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X