ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆ ಕಾಂಗ್ರೆಸ್ ಮೈತ್ರಿ ಸರಕಾರವಿಲ್ಲ
ಕಾಶ್ಮೀರ, ಜುಲೈ 2: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆ ಸೇರಿ ಮೈತ್ರಿ ಸರಕಾರ ರಚಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟವಾಗಿ ಹೇಳಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಕಾಂಗ್ರೆಸ್ ಪ್ರಮುಖ ನಾಯಕರ ಸಭೆ ಇಂದು ನಡೆಯಿತು. ಈ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಬದಲಾದ ರಾಜಕೀಯ ವಿದ್ಯಮಾನಗಳೇ ಮೈತ್ರಿ ಸರಕಾರದ ದೂರ ಉಳಿಯಲು ಕಾರಣ ಎಂದು ಕಾಂಗ್ರೆಸ್ ತಿಳಿಸಿದೆ.
ಪಿಡಿಪಿ ಜೊತೆ ಸರಕಾರ ರಚಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಜಿಎ ಮಿರ್, "2014ರ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಜವಾಬ್ದಾರಿಯನ್ನು ನಿರ್ವಹಿಸಿತು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಈ (ಸರಕಾರ ರಚನೆ) ವಿಚಾರದಲ್ಲಿ ಕಾಂಗ್ರೆಸ್ ಯಾವುದೇ ಮುಂದಾಳತ್ವ ವಹಿಸುವುದಿಲ್ಲ ಅಥವಾ ಯಾವುದೇ ಪ್ರಯತ್ನಗಳ್ನು ನಡೆಸುವುದಿಲ್ಲ. ರಾಜ್ಯಪಾಲರು ಸಂವಿಧಾನಾತ್ಮಕ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು," ಎಂದು ಹೇಳಿದ್ದಾರೆ.

ಮೂರು ವರ್ಷ ಮೈತ್ರಿ ಸರಕಾರ ನಡೆಸಿದ ನಂತರ ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿಯ ಮೆಹಬೂಬಾ ಮುಫ್ತಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದಿತ್ತು. ಇದರಿಂದ ಮುಖ್ಯಮಂತ್ರಿ ಹುದ್ದೆಯಿಂದ ಮುಫ್ತಿ ಕೆಳಗಿಳಿದಿದ್ದರು. ಈಗ ಅಲ್ಲಿ ರಾಜ್ಯಪಾಲರ ಆಡಳಿತ ಜಾರಿಯಲ್ಲಿದೆ.












Click it and Unblock the Notifications