ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈಶಾನ್ಯ ಸೋಲಿನ ಕುರಿತು ಕೊನೆಗೂ ಪ್ರತಿಕ್ರಿಯೆ ನೀಡಿದ ರಾಹುಲ್

|
Google Oneindia Kannada News

ನವದೆಹಲಿ, ಮಾರ್ಚ್ 05: ಮೂರು ಈಶಾನ್ಯ ರಾಜ್ಯಗಳಾದ ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರಗಳಲ್ಲಿ ಕಾಂಗ್ರೆಸ್ ನ ಹೀನಾಯ ಸೋಲಿನ ಬಗ್ಗೆ ಕೊನೆಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

'ಕಾಂಗ್ರೆಸ್ ಪಕ್ಷ, ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ಜನಾಭಿಪ್ರಾಯವನ್ನು ಗೌರವಿಸುತ್ತದೆ. ಈ ಭಾಗದಲ್ಲಿ ಮತ್ತೆ ಜನರ ವಿಶ್ವಾಸ ಗಳಿಸಲು ನಾವು ಶ್ರಮ ವಹಿಸುತ್ತೇವೆ. ಪಕ್ಷಕ್ಕಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ನನ್ನ ಪ್ರಾಮಾಣಿಕ ನಮನ' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಚುನಾವಣೆ ಫಲಿತಾಂಶ(ಮಾ.3) ಹೊರಬೀಳುವ ಸಂದರ್ಭದಲ್ಲಿ ತಮ್ಮ ಅಜ್ಜಿಯನ್ನು ನೋಡುವುದಕ್ಕೆಂದು ರಾಹುಲ್ ಗಾಂಧಿ ಇಟಲಿಗೆ ತೆರಳಿದ್ದರು. ಇದನ್ನೇ ಇಟ್ಟುಕೊಂಡು ಚುನಾವಣೆ ಸೋಲಿನ ನಂತರ ಸಾಮಾಜಿಕ ಮಾಧ್ಯಮದಲ್ಲಿ ರಾಹುಲ್ ಗಾಂಧಿಯವರ ವಿರುದ್ಧ ಟೀಕಾಸ್ತ್ರ ಪ್ರಯೋಗ ಮಾಡಲಾಗಿತ್ತು.

ಮಾರ್ಚ್ 3 ಹೊರಬಿದ್ದ ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್ ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿತ್ತು. ಬಿಜೆಪಿ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳಲ್ಲಿ ಕೇಸರಿ ರಂಗು ಮೂಡಿಸಿತ್ತು.

English summary
"The Congress party respects the mandate of the people of Tripura, Nagaland and Meghalaya. We are committed to strengthening our party across the North East and to winning back the trust of the people" Congress president Rahul Gandhi tweeted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X