ಸುಷ್ಮಾ ಸ್ವರಾಜ್ ಇನ್ನಿಲ್ಲ: ಕಂಬನಿ ಮಿಡಿದ ಕಾಂಗ್ರೆಸ್‌

ನವದೆಹಲಿ, ಆಗಸ್ಟ್ 06: ಮಾಜಿ ವಿದೇಶಾಂಗ ಸಚಿವೆ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರು ಇಂದು ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದು, ರಾಜಕೀಯ ಎದುರಾಳಿಯ ನಿಧನಕ್ಕೆ ಕಾಂಗ್ರೆಸ್ ಕಂಬನಿ ಮಿಡಿದಿದೆ.

ಸುಷ್ಮಾ ಸ್ವರಾಜ್ ಅವರ ಅಕಾಲಿಕ ನಿಧನದ ಸುದ್ದಿ ತೀವ್ರ ದುಖಃ ತಂದಿದೆ. ಅವರ ಕುಟುಂಬ ಮತ್ತು ಅವರ ಪ್ರೀತಿ ಪಾತ್ರರಿಗೆ ಸುಷ್ಮಾ ಸ್ವರಾಜ್ ಅಗಲಿಕೆಯ ನೋವು ತಡೆದುಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸುಷ್ಮಾ ಸ್ವರಾಜ್ ಅವರು ಇಂದು ರಾತ್ರಿ ತೀವ್ರ ಹೃದಯಾಘಾತದಕ್ಕೆ ಒಳಗಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಕೊನೆ ಉಸಿರೆಳೆದಿದ್ದಾರೆ.

Congress party tweeted about Sushma Swaraj death

ರಾಷ್ಟ್ರೀಯ ಕಾಂಗ್ರೆಸ್ ಮಾತ್ರವಲ್ಲದೆ, ಕರ್ನಾಟಕ ಕಾಂಗ್ರೆಸ್ ಸಹ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿದೆ.

ಜೆಪಿಯ ಹಿರಿಯ ನಾಯಕಿ ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ನಿಜಕ್ಕೂ ಆಘಾತಕಾರಿ. ಅವರ ಅಗಲಿಕೆಯು ದೇಶದ ರಾಜಕಾರಣಕ್ಕೆ ತುಂಬಲಾರದ ನಷ್ಟ, ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಬಂಧು ಮಿತ್ರರಿಗೆ, ಅನುಯಾಯಿಗಳಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ರಾಜ್ಯ ಕಾಂಗ್ರೆಸ್ ಟ್ವೀಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+