ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ದಿನದೊಳಗೆ ರೈತರ ಸಾಲಮನ್ನಾ: ರಾಹುಲ್
ಅಹಮದಾಬಾದ್, ಡಿಸೆಂಬರ್ 8: ಗುಜರಾತಿನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡಲು ಯೋಜನೆ ರೂಪಿಸಲಾಗುವುದು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಎರಡನೇ ಹಂತದ ಮತದಾನ ನಡೆಯಲಿರುವ ಉದಯಪುರದ ಚೊಟ್ಟಾದಲ್ಲಿ ಅವರು ಚುನಾವಣಾ ಭಾಷಣದಲ್ಲಿ ಈ ಘೋಷಣೆ ಮಾಡಿದ್ದಾರೆ.

ಗುಜರಾತಿನಲ್ಲಿ ಕಾಂಗ್ರೆಸ್ ಗೆಲುವು ಶತಃಸಿದ್ಧ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಬಿರುಗಾಳಿ ಅದರ ದಾರಿಯಲ್ಲಿ ಸಾಗುತ್ತಿದೆ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.
ಗುಜರಾತಿನಲ್ಲಿ ನಾಳೆ ಅಂದರೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ರ ಸೋಮವಾರ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.












Click it and Unblock the Notifications