ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲು ಸಿಡಬ್ಲ್ಯುಸಿ ಸಭೆಯಲ್ಲಿ ತೀರ್ಮಾನ: ವರದಿ

ನವದೆಹಲಿ ಜೂನ್ 8: ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಪಕ್ಷದ ಸಂಸದ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂಬ ನಿರ್ಣಯವನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಂಗೀಕರಿಸಿದೆ ಎಂದು ಮೂಲಗಳು ಇಂದು ತಿಳಿಸಿವೆ.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಎಲ್ಲಾ ಸಂಸದರು ಭಾಗವಹಿಸಿದ್ದರು. ಸಿಡಬ್ಲ್ಯುಸಿ ಸಭೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮನೀಶ್ ತಿವಾರಿ, ಡಿಕೆ ಶಿವಕುಮಾರ್, ರೇವಂತ್ ರೆಡ್ಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Congress Passes Resolution For Rahul Gandhi To Be Leader Of Opposition

ಈ ಬಾರಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಜವಬ್ದಾರಿಯನ್ನು ನಿಭಾಯಿಸಬೇಕು ಎಂಬುದು ಬಹುತೇಕ ಸಂಸದರ ಆಪೇಕ್ಷೆಯಾಗಿತ್ತು. ಹೀಗಾಗಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ.

ಈ ಬಾರಿ ಅತಿದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷದ ನಾಯಕನಿಗೆ ಅಧಿಕೃತವಾಗಿ ವಿರೋಧ ಪಕ್ಷದ ನಾಯಕನ ಸ್ಥಾನಮಾನ ಸಿಗಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆದ್ದಿದ್ದು, ವಿರೋಧ ಪಕ್ಷದ ನಾಯಕರಾಗಲು, ಅತಿದೊಡ್ಡ ವಿರೋಧ ಪಕ್ಷವು ಒಟ್ಟು ಸ್ಥಾನಗಳನ್ನು ಕನಿಷ್ಠ 10% ಅಂದರೆ 55% ಸ್ಥಾನಗಳನ್ನು ಹೊಂದಿರಬೇಕು. ಇದೀಗ ಈ ಹುದ್ದೆಗೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ದೊಡ್ಡ ಸ್ಪರ್ಧಿ ಎಂದು ಪರಿಗಣಿಸಲಾಗುತ್ತಿದೆ. ಹೀಗಾಗಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಳ್ಳಬೇಕು ಎಂಬ ಧ್ವನಿಯೂ ಪಕ್ಷದೊಳಗಿನಿಂದಲೇ ಕೇಳಿ ಬಂದಿದೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅಲಪ್ಪುಳದಿಂದ ಹೊಸದಾಗಿ ಚುನಾಯಿತ ಸಂಸದ ಕೆಸಿ ವೇಣುಗೋಪಾಲ್ ಅವರು "CWC ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ರಾಹುಲ್ ಗಾಂಧಿ ಅವರಿಗೆ ಸರ್ವಾನುಮತದಿಂದ ವಿನಂತಿಸಿದೆ. ಸಿಡಬ್ಲ್ಯುಸಿ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿಯವರ ಪ್ರಯತ್ನಗಳನ್ನು ಶ್ಲಾಘಿಸಿದೆ" ಎಂದು ಹೇಳಿದರು.

Congress Passes Resolution For Rahul Gandhi To Be Leader Of Opposition

"ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮತ್ತು ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ವಿನ್ಯಾಸಗೊಳಿಸಿದರು. ಅದರ ನೇತೃತ್ವ ವಹಿಸಿದ ಯಶಸ್ವಿಯಾಗಿ ಮುನ್ನಡೆಸಿದರು. ಅವರ ಚಿಂತನೆ ಮತ್ತು ವ್ಯಕ್ತಿತ್ವವನ್ನು ಪ್ರತಿಬಿಂಬಿಸುವ ಈ ಎರಡೂ ಯಾತ್ರೆಗಳು ನಮ್ಮ ರಾಷ್ಟ್ರದ ರಾಜಕೀಯದಲ್ಲಿ ಐತಿಹಾಸಿಕ ತಿರುವುಗಳು ಮತ್ತು ಭರವಸೆಯನ್ನು ಹುಟ್ಟುಹಾಕಿದವು. ನಮ್ಮ ಲಕ್ಷಗಟ್ಟಲೆ ಕಾರ್ಯಕರ್ತರು ಮತ್ತು ಕೋಟ್ಯಂತರ ಮತದಾರರಲ್ಲಿ ವಿಶ್ವಾಸವಿಟ್ಟುಕೊಂಡಿದ್ದ ರಾಹುಲ್ ಗಾಂಧಿಯವರ ಚುನಾವಣಾ ಪ್ರಚಾರವು ಏಕ-ಮನಸ್ಸಿನಿಂದ ಕೂಡಿತ್ತು. 2024ರ ಚುನಾವಣೆಯಲ್ಲಿ ನಮ್ಮ ಗಣರಾಜ್ಯದ ಸಂವಿಧಾನದ ರಕ್ಷಣೆಯನ್ನು ಕೇಂದ್ರ ವಿಷಯವನ್ನಾಗಿ ಮಾಡಿದರು. ಚುನಾವಣಾ ಪ್ರಚಾರದಲ್ಲಿ ಅತ್ಯಂತ ಶಕ್ತಿಯುತವಾಗಿ ಪ್ರತಿಧ್ವನಿಸಿದ ಪಂಚನ್ಯಾಯ್-ಪಚೀಸ್ ಗ್ಯಾರಂಟಿ ಕಾರ್ಯಕ್ರಮವು ರಾಹುಲ್‌ ಅವರ ಯಾತ್ರೆಗಳ ಫಲಿತಾಂಶವಾಗಿದೆ. ಇದರಲ್ಲಿ ಅವರು ಎಲ್ಲಾ ಜನರ ಭಯ, ಕಾಳಜಿ ಮತ್ತು ಆಕಾಂಕ್ಷೆಗಳನ್ನು ಆಲಿಸಿದರು. ವಿಶೇಷವಾಗಿ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು, ದಲಿತರು, ಆದಿವಾಸಿಗಳು, ಒಬಿಸಿಗಳು. ಮತ್ತು ಅಲ್ಪಸಂಖ್ಯಾತರು" ಎಂದು ಸಿಡಬ್ಲ್ಯುಸಿ ಶ್ಲಾಘಿಸಿದೆ.

ಇದಕ್ಕೂ ಮುನ್ನ ಪಕ್ಷದ ಹಲವು ಮುಖಂಡರು ರಾಹುಲ್ ಗಾಂಧಿ ಅವರು ಪ್ರಮುಖ ಪಾತ್ರ ವಹಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಇದು 140 ಕೋಟಿ ಭಾರತೀಯರ ಬೇಡಿಕೆಯಾಗಿದೆ. 140 ಕೋಟಿ ಭಾರತೀಯರ ಬೇಡಿಕೆಯಂತೆ ನಮ್ಮ ಬೇಡಿಕೆಯೂ ಒಂದೇ ಆಗಿದೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಬೇಕು. ರಾಹುಲ್ ಗಾಂಧಿ ಮಹಿಳೆಯರು ಮತ್ತು ನಿರುದ್ಯೋಗಿಗಳ ಪರವಾಗಿ ಹೋರಾಡುತ್ತಿದ್ದಾರೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+