Get Updates
Get notified of breaking news, exclusive insights, and must-see stories!

ಮಲ್ಲಿಕಾರ್ಜುನ ಖರ್ಗೆಗೆ ಪಕ್ಷದ ಕೆಲ ನಾಯಕರ ಬಹಿರಂಗ ಬೆಂಬಲ: ತರೂರ್‌ ಅಸಮಾಧಾನ

ನವದೆಹಲಿ, ಅಕ್ಟೋಬರ್‌ 13: ಅಕ್ಟೋಬರ್‌ 17ರಂದು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಕ್ಷದ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್‌ ಕಣದಲ್ಲಿದ್ದು, ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ.

ಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಶಶಿ ತರೂರ್‌, ತಮ್ಮ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷದ ಕೆಲ ನಾಯಕರು ತಮ್ಮ ಎದುರಾಳಿ ಮಲ್ಲಿಕಾರ್ಜುನ ಖರ್ಗೆಗೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿರುವುದು ತರೂರ್‌ ಅಸಮಾಧಾನಕ್ಕೆ ಕಾರಣವಾಗಿದೆ.

ಖರ್ಗೆ ಪರ ಬೆಂಬಲ ಸೂಚಿಸಲು ಕೆಲ ನಾಯಕರು ಸಭೆಗಳನ್ನು ಕರೆದಿದ್ದಾರೆ ಎಂದು ತರೂರ್‌ ಆರೋಪಿಸಿದರು.

ಕೆಲ ರಾಜ್ಯಗಳಿಗೆ ಭೇಟಿ ನೀಡಿದಾಗ ಪಕ್ಷದ ನಾಯಕರು ನನ್ನ ಸಭೆಗೆ ಲಭ್ಯವಿರಲಿಲ್ಲ. ಆದರೆ, ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಲು ಸಭೆ ನಡೆಸಿದ್ದಾರೆ ಎಂದು ಹೇಳಿದರು.

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪಕ್ಷದ ಪ್ರತಿನಿಧಿಗಳ ಸಭೆ ನಡೆಸಿದ ಅವರು, ತಮ್ಮ ಪರವಾಗಿ ಮತ ಚಲಾಯಿಸುವಂತೆ ಕೇಳಿಕೊಂಡರು. ಒಂದು ವೇಳೆ ತಾವು ಅಧ್ಯಕ್ಷರಾದರೆ ಕಾಂಗ್ರೆಸ್‌ ಪಕ್ಷದಲ್ಲಿ ಬದಲಾವಣೆ ತರುವುದಾಗಿ ತಿಳಿಸಿದರು.

2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡದ ಮತದಾರರನ್ನು ಸೆಳೆಯಲು ಯತ್ನಿಸುವುದಾಗಿ ಅವರು ಭರವಸೆ ನೀಡಿದರು.

ಪಕ್ಷವು ತಮಗೆ ನೀಡಿದ ಪಟ್ಟಿಯಿಂದ ಕೆಲವು ಪ್ರತಿನಿಧಿಗಳ ಸಂಪರ್ಕ ವಿವರಗಳು ಕಾಣೆಯಾಗಿವೆ. ಆ ಕಾರಣ, ಕೆಲ ಪ್ರತಿನಿಧಿಗಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ತರೂರ್‌ ಹೇಳಿದರು.

'ನಾನು ಸ್ವೀಕರಿಸಿದ ಪ್ರತಿನಿಧಿಗಳ ಪಟ್ಟಿಯಲ್ಲಿ ಪೂರ್ಣ ಸಂಪರ್ಕ ವಿವರಗಳಿಲ್ಲ. ಕೆಲ ಪಟ್ಟಿಗಳಲ್ಲಿ ಕೇವಲ ಹೆಸರುಗಳಿವೆ. ಕೆಲವರ ಸಂಪರ್ಕ ಸಂಖ್ಯೆಗಳಿಲ್ಲ. ಕೆಲವರ ವಿಳಾಸ ಸರಿಯಾಗಿಲ್ಲ. ಆದ್ದರಿಂದ, ಅವರನ್ನು ಸಂಪರ್ಕಿಸಲು ಕಷ್ಟವಾಗಿದೆ' ಎಂದು ತಿಳಿಸಿದರು.

congress president election shashi taroor mallikarjun Kharge rahul gandhi sonia gandhi

ಇಂತಹ ಅಡಚಣೆಗಳಿಗಾಗಿ ನಾನು ಯಾರನ್ನೂ ದೂಷಿಸಲಾರೆ. 22 ವರ್ಷಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ. ಆ ಕಾರಣ, ಪಕ್ಷದ ವ್ಯವಸ್ಥೆಯಲ್ಲಿ ಕೆಲ ದೋಷಗಳಾಗಿವೆ ಎಂದು ತಿಳಿಸಿದರು.

ಪಕ್ಷದ ಅಧ್ಯಕ್ಷೀಯ ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲಿದೆ. ಪ್ರತಿಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಯಾವುದೇ ಅಸಮಾಧಾನವಿಲ್ಲ ಎಂದೂ ತರೂರ್‌ ಹೇಳಿದರು.

ಈ ಚುನಾವಣೆಯ ಮೂಲಕ ಕಾಂಗ್ರೆಸ್‌ನ ಇಬ್ಬರು ಕಾರ್ಯಕರ್ತರು ಪಕ್ಷವನ್ನು ಬಲಪಡಿಸುವತ್ತ ಗಮನಹರಿಸುತ್ತಿದ್ದಾರೆ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಂಧಿ ಕುಟುಂಬದ ಬೆಂಬಲವಿದೆ ಎಂಬ ಮಾತುಗಳು ಕೇಳಿಬಂದಿವೆ. ಆದರೆ, ಶಶಿ ತರೂರ್‌ ಇದನ್ನು ಅಲ್ಲಗಳೆದಿದ್ದಾರೆ. ಈ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಸದಸ್ಯರು ಸಕ್ರಿಯರಾಗಿಲ್ಲವೆಂದು ಅವರು ಹೇಳಿದ್ದಾರೆ.

ನನ್ನ ಹೆಸರನ್ನು ಸೋನಿಯಾ ಗಾಂಧಿ ಸೂಚಿಸಿಲ್ಲ:

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ನನ್ನ ಹೆಸರನ್ನು ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂಬುದು ಕೇವಲ ವದಂತಿ ಎಂದು ಖರ್ಗೆ ಹೇಳಿದ್ದಾರೆ. ಸೋನಿಯಾ ಹಾಗೂ ರಾಹುಲ್‌ ಸೇರಿದಂತೆ ಗಾಂಧಿ ಕುಟುಂಬದ ಯಾವುದೇ ಸದಸ್ಯರು ಈ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಸಾಗುವ ಯಾತ್ರೆಯು 3,500 ಕಿ.ಮೀ ಕ್ರಮಿಸಲಿದೆ. ಈಗಾಗಲೇ ತಮಿಳುನಾಡು, ಕೇರಳವನ್ನು ಕ್ರಮಿಸಿರುವ ಯಾತ್ರೆಯು ಕರ್ನಾಟಕದಲ್ಲಿ ನಡೆಯುತ್ತಿದೆ. ಯಾತ್ರೆಗೆ ಜನಬೆಂಬಲವೂ ವ್ಯಕ್ತವಾಗಿದೆ.

ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+