Breaking: ಅ. 17 ರಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ

ನವದೆಹಲಿ, ಆಗಸ್ಟ್ 28: ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.

ನೂತನ ಅಧ್ಯಕ್ಷರ ಆಯ್ಕೆಗೆ ನಿಖರವಾದ ವೇಳಾಪಟ್ಟಿಯನ್ನು ಅನುಮೋದಿಸಲು ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಬಹು ನಿರೀಕ್ಷಿತ ಸಭೆ ವರ್ಚುವಲ್ ಮೋಡ್‌ನಲ್ಲಿ ನಡೆಯುತ್ತಿದೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯ ತಪಾಸಣೆಗಾಗಿ ವಿದೇಶ ಪ್ರವಾಸದಲ್ಲಿದ್ದು, ಸಭೆಯಲ್ಲಿ ಭಾಗವಹಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.

Congress Presidential Election On October 17

ನೂತನ ಅಧ್ಯಕ್ಷರ ಆಯ್ಕೆಗೆ ಸೆಪ್ಟೆಂಬರ್ 24 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ ಎಂದು ತಿಳಿದುಬಂದಿದೆ.

ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರದ ಆಘಾತಕಾರಿ ರಾಜೀನಾಮೆ ಮತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರು ಬರೆದ ಪತ್ರದಲ್ಲಿ "ಪಕ್ಷದ ಸಂಪೂರ್ಣ ಸಮಾಲೋಚನಾ ಕಾರ್ಯವಿಧಾನವನ್ನು ಕೆಡವಿದ್ದಾರೆ" ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕಾರಣ ಪಕ್ಷದಲ್ಲಿ ಹೊಸ ಕೋಲಾಹಲದ ನಡುವೆ ಈ ಸಭೆ ನಡೆದಿದೆ.

ಸೆಪ್ಟೆಂಬರ್ 22 ರಂದು ಚುನಾವಣೆ ಅಧಿಸೂಚನೆಯಾಗಲಿದ್ದು, ಅಕ್ಟೋಬರ್ 8 ರೊಳಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಬಹುದು.

ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ "ಮೆಹಂಗೈ ಪರ್ ಹಲ್ಲಾ ಬೋಲ್" ರ್‍ಯಾಲಿಯನ್ನು ಮತ್ತು ಸೆಪ್ಟೆಂಬರ್ 7 ರಂದು ಆರಂಭವಾಗಲಿರುವ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಅದ್ಭುತವಾಗಿ ಯಶಸ್ವಿಯಾಗಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನರುಚ್ಚರಿಸಿದೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, "ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ರಾಹುಲ್ ಗಾಂಧಿ ನಾಯಕತ್ವ ವಹಿಸಿ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ಪಕ್ಷವನ್ನು ಒಗ್ಗೂಡಿಸಿ ಬಲಪಡಿಸಬಹುದು" ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಉನ್ನತ ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಅವರನ್ನು ಹಿಂಬಾಲಿಸಿ ಅವರ ಬೆಂಬಲಿಗರು ರಾಜೀನಾಮೆ ನೀಡುತ್ತಿದ್ದಾರೆ. ಈ ಭಿನ್ನಾಭಿಪ್ರಾಯಗಳ ಜೊತೆಗೆ ಕಾಂಗ್ರೆಸ್ ತನ್ನ 'ಭಾರತ್ ಜೋಡೋ ಯಾತ್ರೆ'ಗೆ ಸಜ್ಜಾಗುತ್ತಿದೆ.

ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಷ್ಟ್ರವನ್ನು ಮತ್ತೆ ಒಂದುಗೂಡಿಸುವ ಗುರಿಯೊಂದಿಗೆ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ 148 ದಿನಗಳ ಪಾದಯಾತ್ರೆ ನಡೆಯಲಿದ್ದು, ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ.

ಈ ವರ್ಷ ಆಗಸ್ಟ್ 21 ರಿಂದ ಸೆಪ್ಟೆಂಬರ್ 20 ರ ನಡುವೆ ಹೊಸ ಪಕ್ಷದ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಕಾಂಗ್ರೆಸ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಘೋಷಿಸಿತ್ತು.

"ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ದಿನಾಂಕಗಳ ನಿಖರವಾದ ವೇಳಾಪಟ್ಟಿಯನ್ನು ಅನುಮೋದಿಸಲು 28 ಆಗಸ್ಟ್, 2022 ರಂದು ಮಧ್ಯಾಹ್ನ 3:30 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವರ್ಚುವಲ್ ಸಭೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ CWC ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ" ಎಂದು ಕಾಂಗ್ರೆಸ್ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಟ್ವಿಟರ್‌ನಲ್ಲಿ ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+