Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಮತ ಎಣಿಕೆ: 24 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಗಾಂಧಿಯೇತರ ಅಧ್ಯಕ್ಷ

ನವದೆಹಲಿ, ಅ.19: ಬಹುನಿರೀಕ್ಷಿತ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬುಧವರಾ ಪ್ರಕಟವಾಗಲಿದೆ. 24 ವರ್ಷಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಮುಖ್ಯಸ್ಥರ ಹೆಸರನ್ನು ಇಂದು ಘೋಷಿಸಲಾಗುತ್ತದೆ. ಪ್ರಭಾವಿ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಕಣದಲ್ಲಿದ್ದಾರೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಎಣಿಕೆ ಆರಂಭವಾಗಲಿದ್ದು, ದೇಶಾದ್ಯಂತ ಮತದಾನವಾಗಿ ಸೀಲ್ ಮಾಡಿದ ಮತಪೆಟ್ಟಿಗೆಗಳನ್ನು ತರಲಾಗಿದೆ. ಸೋಮವಾರ ನಡೆದ ಚುನಾವಣೆಯಲ್ಲಿ 9,915 ಅರ್ಹ ನಾಯಕರಲ್ಲಿ 96 ಪ್ರತಿಶತದಷ್ಟು ಜನರು ಮತ ಚಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ವರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರು ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದು, ಅವರು ಗೆದ್ದರೆ ಪಕ್ಷವನ್ನು ಗಾಂಧಿಯವರು ರಿಮೋಟ್ ಕಂಟ್ರೋಲ್ ಮಾಡುತ್ತಾರೆ ಎಂದು ಹಲವರು ಟೀಕಿಸಿದ್ದಾರೆ.

ಚುನಾವಣೆಯಲ್ಲಿ 9,915 ಪ್ರತಿನಿಧಿಗಳ ಪೈಕಿ 9,497 ಪ್ರತಿನಿಧಿಗಳು ಮತ ಚಲಾಯಿಸಿದ್ದಾರೆ. ಶೇ 96ರಷ್ಟು ಮತದಾನ ನಡೆದಿದೆ ಎಂದು ಕಾಂಗ್ರೆಸ್ ಮತದಾನದ ದಿನ ತಿಳಿಸಿತ್ತು.

ಇಬ್ಬರು ಸಮರ್ಥ ವ್ಯಕ್ತಿಗಳು ಎಂದ ಕಾಂಗ್ರೆಸ್

ಇಬ್ಬರು ಸಮರ್ಥ ವ್ಯಕ್ತಿಗಳು ಎಂದ ಕಾಂಗ್ರೆಸ್

ಮಲ್ಲಿಕಾರ್ಜನ ಖರ್ಗೆ ಗಾಂಧಿ ಕುಟುಂಬವನ್ನು ಪ್ರತಿನಿಧಿಸುತ್ತಾರೆ ಎಂಬ ಆರೋಪಗಳನ್ನು ಕಾಂಗ್ರೆಸ್ ಕಟುವಾಗಿ ನಿರಾಕರಿಸಿದೆ. "ಇವೆಲ್ಲಾ ಆರೋಪಗಳು ಟೀಕಾಕಾರರಿಂದ ಬಂದಿವೆ. ಇಬ್ಬರು ಸಮರ್ಥ ವ್ಯಕ್ತಿಗಳು ಸ್ಪರ್ಧಿಸಿದ್ದಾರೆ" ಎಂದು ಪಕ್ಷದ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಮಲ್ಲಿಕಾರ್ಜನ ಖರ್ಗೆ ಮತ್ತು ಶಶಿ ತರೂರ್ ಇಬ್ಬರೂ ಗಾಂಧಿಗಳು ಚುನಾವಣೆಯ ಬಗ್ಗೆ ತಟಸ್ಥರಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಿ ಪ್ರತಿಕ್ರಿಯಿಸಿದ್ದ ಸೋನಿಯಾ ಗಾಂಧಿ, 'ಈ ಸಮಯಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದೆ' ಎಂದು ತಿಳಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷ ಸ್ಥಾನದ ನೆಚ್ಚಿನ ಅಭ್ಯರ್ಥಿ

ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷ ಸ್ಥಾನದ ನೆಚ್ಚಿನ ಅಭ್ಯರ್ಥಿ

ಶಶಿ ತರೂರ್ ಅವರ ನಾಮನಿರ್ದೇಶನಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ತಿರುವನಂತಪುರಂ ಸಂಸದರ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ತಿಳಿಸಿದ್ದರು. ಜೊತೆಗ ಶಶಿ ತರೂರ್ ಅವರು "ಗಮನಾರ್ಹ ಮತಗಳನ್ನು ಪಡೆಯುತ್ತಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಕ್ಷದ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಂಧಿ ಪರಿವಾರದ ಬೆಂಬಲವಿದೆ ಎಂಬ ಮಾತುಗಳು ಕೇಳಿಬಂದಿದೆ. ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರು ಖರ್ಗೆ ಅವರಿಗೆ ಬಹಿರಂಗವಾಗಿ ಬೆಂಬಲ ನೀಡಿದ್ದಾರೆ. ಹೀಗಾಗಿ, ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಖರ್ಗೆ ಅವರು ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ ಎಂದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

ಅಶೋಕ್ ಗೆಹ್ಲೋಟ್ ಅವರ ಅಧ್ಯಕ್ಷ ಸ್ಥಾನ ಆಸೆಗೆ ತಣ್ಣೀರು!

ಅಶೋಕ್ ಗೆಹ್ಲೋಟ್ ಅವರ ಅಧ್ಯಕ್ಷ ಸ್ಥಾನ ಆಸೆಗೆ ತಣ್ಣೀರು!

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಾಗ ಸೋನಿಯಾ ಗಾಂಧಿ ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡಿದ್ದರು. ಇದಾದ ಮೂರು ವರ್ಷಗಳ ನಂತರ ಚುನಾವಣೆ ನಡೆದಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಚುನಾವಣೆ ಘೋಷಣೆಯಾದಾಗಿನಿಂದ ತಾವೇ ಅಭ್ಯರ್ಥಿ ಎಂದು ಹೇಳಿದ್ದರು. ಆದರೆ, ರಾಜಸ್ಥಾನದ ಆಂತರಿಕ ಬಂಡಾಯದಿಂದಾಗಿ ಸ್ಪರ್ಧೆ ಪ್ರಾರಂಭವಾಗುವ ಮೊದಲೇ ಕಣದಿಂದ ಹೊರಬಿದ್ದರು.

ಶಶಿ ತರೂರ್ ವಿರುದ್ಧ ಅಭ್ಯರ್ಥಿಯನ್ನು ಹುಡುಕುವ ಬಗ್ಗೆ ಹಲವು ಬಾರಿ ಬದಲಾವಣೆ ಮತ್ತು ಬಿಕ್ಕಟ್ಟುಗಳ ನಂತರ ಕೇಂದ್ರ ನಾಯಕರ ಒಂದು ವಿಭಾಗ ಮಲ್ಲಿಕಾರ್ಜುನ ಖರ್ಗೆ ಅವರ ಮನವೊಲಿಸಿತ್ತು. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಕೊನೆ ಕ್ಷಣದಲ್ಲಿ ಕಣಕ್ಕಿಳಿದರು.

ಬಳ್ಳಾರಿಯಲ್ಲಿ ಮತದಾನ ಮಾಡಿದ್ದ ರಾಹುಲ್‌ ಗಾಂಧಿ

ಬಳ್ಳಾರಿಯಲ್ಲಿ ಮತದಾನ ಮಾಡಿದ್ದ ರಾಹುಲ್‌ ಗಾಂಧಿ

ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಮತದಾನದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇದು "ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ" ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ, ಕಾಂಗ್ರೆಸ್ ಅನ್ನು ಹೆಚ್ಚಾಗಿ ಗಾಂಧಿ ಕುಟುಂಬದ ಸದಸ್ಯರೇ ಅವಿರೋಧವಾಗಿ ಆಯ್ಕೆಯಾಗಿ ಮುನ್ನಡೆಸುತ್ತಿದ್ದಾರೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದ ಕಾರಣ ಕೇವಲ ಆರು ಬಾರಿ ಮಾತ್ರ ಚುನಾವಣೆಗಳು ನಡೆದಿವೆ.

ಅಕ್ಟೋಬರ್ 17 ರಂದು ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ ಮತದಾನ ಮಾಡಿದರು. ಭಾರತ್‌ ಜೋಡೊ ಯಾತ್ರೆಯಲ್ಲಿರುವ ರಾಹುಲ್‌ ಗಾಂಧಿ ಬಳ್ಳಾರಿಯ ಸಂಗನಕಲ್ಲು ಎಂಬ ಗ್ರಾಮದಲ್ಲಿ ಮತದಾನ ಮಾಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+