ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನಿಂದ 'ಬ್ಲಾಕ್' ಪ್ರೊಟೆಸ್ಟ್

|
Google Oneindia Kannada News

ನವದೆಹಲಿ, ಆ.05: ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಶುಕ್ರವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆ ವಿರೋಧಿಸಿ ಪಕ್ಷದ ಮುಖಂಡರು ಇಂದು ರಾಷ್ಟ್ರಪತಿ ಹಾಗೂ ಪ್ರಧಾನಿ ಮನೆಗೆ ಪಾದಯಾತ್ರೆ ನಡೆಸಲಿದ್ದಾರೆ.

ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮುಂದೂಡಲಾಯಿತು.

ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆಯ ವಿರುದ್ಧ 10ಕ್ಕೂ ಹೆಚ್ಚು ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.

Congress Protest Outside Parliament over rising prices

ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್‌ಟಿ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಶುಕ್ರವಾರ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಸಂಸದರು ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಕಪ್ಪು ಬಣ್ಣದ ಬಟ್ಟೆ ತೊಟ್ಟು ತಮ್ಮ ಪಾದಯಾತ್ರೆ ಆರಂಭಿಸಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಕೂಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.

"ಹಣದುಬ್ಬರ ಮಿತಿ ಮೀರಿ ಏರಿಕೆಯಾಗಿದೆ. ಸರ್ಕಾರ ಇದರ ಬಗ್ಗೆ ಏನಾದರೂ ಮಾಡಬೇಕು. ಇದಕ್ಕಾಗಿಯೇ ನಾವು ಹೋರಾಡುತ್ತಿದ್ದೇವೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

ಸುರಿಯುತ್ತಿರುವ ಮಳೆಯ ನಡುವೆಯೂ ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ದೆಹಲಿಯ ಪಕ್ಷದ ಪ್ರಧಾನ ಕಚೇರಿ ಬಳಿ ಪ್ರತಿಭಟನೆ ಮುಂದುವರೆಸಿದ್ದಾರೆ. ಹಾಡುಗಳನ್ನು ಹಾಡುತ್ತಾ, ಬ್ಯಾರಿಕೇಡ್‌ಗಳ ಮೇಲೆ ಹತ್ತಿ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ಮನೆಗೆ ಮತ್ತು ರಾಷ್ಟ್ರಪತಿ ಭವನಕ್ಕೆ ಸಂಸತ್ತಿನಿಂದ ಪಾದಯಾತ್ರೆ ನಡೆಸಲಿದ್ದಾರೆ.

Recommended Video

ಸ್ವಾತಂತ್ರ್ಯ ಸೆನಾನಿ ಭಗತ್‌ ಸಿಂಗ್‌ Shaheed Bhagat Singh || 75th Independence Day *India | OneIndia

ಕಾಂಗ್ರೆಸ್ ಮೆರವಣಿಗೆ ಆಯೋಜಿಸಿರುವ ಹಿನ್ನೆಲೆಯಲ್ಲಿ ದೆಹಲಿಯ ಕೆಲವು ಭಾಗಗಳಲ್ಲಿ ಬೃಹತ್ ಸಭೆಗಳನ್ನು ನಿಷೇಧಿಸಿ ಆಡಳಿತವು ನಿಷೇಧಾಜ್ಞೆಗಳನ್ನು ವಿಧಿಸಿದೆ. ನಿರ್ಬಂಧಗಳನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ್ದಾರೆ.

English summary
Congress Black Protest Outside Parliament over rising prices, unemployment and GST hike, Sonia Gandhi, Rahul Joined.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X