ಸೋನಿಯಾ ಗಾಂಧಿ ಎದುರು ಜಿ-23 ನಾಯಕರು ಇಟ್ಟಿರುವ ಡಿಮ್ಯಾಂಡ್ ಏನು?
ನವದೆಹಲಿ, ಮಾರ್ಚ್ 18: ಕಾಂಗ್ರೆಸ್ ಪಕ್ಷದಲ್ಲಿ ಎದ್ದಿರುವ ಬಂಡಾಯ ಶಮನಕ್ಕಾಗಿ ಸ್ವತಃ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೇ ಅಖಾಡಕ್ಕೆ ಇಳಿದಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಸೋಲಿನ ನಂತರ ಬಂಡಾಯ ಬಾವುಟ ಹಾರಿಸಿರುವ ಜಿ-23 ನಾಯಕರೊಂದಿಗೆ ಚರ್ಚೆಗೆ ಮುಂದಾಗಿದ್ದಾರೆ.
ಶುಕ್ರವಾರ ದೆಹಲಿಯ ಜನಪಥ್ 10ರ ಸೋನಿಯಾ ಗಾಂಧಿ ನಿವಾಸಕ್ಕೆ ಜಿ-23 ತಂಡದಲ್ಲಿ ಗುರುತಿಸಿಕೊಂಡಿರುವ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಭೇಟಿ ನೀಡಿದರು. ಸೋನಿಯಾ ಗಾಂಧಿಯವರು ಇದೇ ವಾರದಲ್ಲಿ ಎರಡು ಬಾರಿ ಗುಲಾಂ ನಬಿ ಆಜಾದ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ಅದಾಗ್ಯೂ, ಬಂಡಾಯ ನಾಯಕರು ಮೇಲಿಂದ ಮೇಲೆ ಸಭೆ ನಡೆಸಿರುವುದು ಪಕ್ಷಕ್ಕೆ ತಲೆನೋವಾಗಿದೆ.
ಕಾಂಗ್ರೆಸ್ ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವ್ಯಾಪ್ತಿಯಿಂದ ಹೊರಗೆ ಚರ್ಚೆ ನಡೆಸುತ್ತಿರುವ ನಾಯಕರ ಮನವೊಲಿಕೆಗೆ ಗಾಂಧಿ ಕುಟುಂಬ ಮುಂದಾಗಿದೆ. ಈ ನಿಟ್ಟಿನಲ್ಲಿ ಗುಲಾಂ ನಬಿ ಆಜಾದ್ ಅವರೊಂದಿಗೆ ಸೋನಿಯಾ ಗಾಂಧಿ ಚರ್ಚೆಗೆ ಆಹ್ವಾನ ನೀಡಿದ್ದಾರೆ.

ಮಾರ್ಚ್ ಮೂರನೇ ವಾರದಲ್ಲಿ ಸಾಲು ಸಾಲು ಸಭೆ:
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶವು ಮಾರ್ಚ್ 10ರಂದು ಅಂದರೆ ಎರಡನೇ ವಾರದಲ್ಲಿ ಹೊರ ಬಿತ್ತು. ಪಂಜಾಬಿನಲ್ಲಿ ಕೈಯಲ್ಲಿದ್ದ ಅಧಿಕಾರವನ್ನು ಕಳೆದುಕೊಂಡ ಕಾಂಗ್ರೆಸ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ರಾಜ್ಯಗಳಲ್ಲಿ ಹೀನಾವ ಸೋಲು ಕಂಡಿತು. ಕಾಂಗ್ರೆಸ್ ಅಸ್ತಿತ್ವವನ್ನೇ ಪ್ರಶ್ನಿಸುವಂತಾ ಫಲಿತಾಂಶದಿಂದ ಜಿ-23 ನಾಯಕರು ಮತ್ತೆ ಮುನ್ನಲೆಗೆ ಬಂದರು. ಮಾರ್ಚ್ ತಿಂಗಳ ಮೂರನೇ ವಾರದಲ್ಲಿ ಬಂಡಾಯ ನಾಯಕರು ಸಾಲು ಸಾಲು ಸಭೆಗಳನ್ನು ನಡೆಸಿದರು.
ಎಐಸಿಸಿ ಸಾಮೂಹಿಕ ನಾಯಕತ್ವದ ಬಗ್ಗೆ ಗುಲಾಂ ನಬಿ ಆಜಾದ್ ನಿವಾಸದಲ್ಲಿಯೇ ಎರಡರಿಂದ ಮೂರು ಬಾರಿ ಜಿ-23 ನಾಯಕ ಸಭೆ ನಡೆಸಲಾಯಿತು. ಈ ವೇಳೆ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಲಾಗಿತ್ತು.
ಸೋನಿಯಾ ಗಾಂಧಿ ಜೊತೆ ಚರ್ಚೆಗೆ ಆಜಾದ್:
ಒಂದು ಕಾಲದಲ್ಲಿ ಗಾಂಧಿ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಲಾಂ ನಬಿ ಆಜಾದ್ ಶುಕ್ರವಾರ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಜಿ-23 ತಂಡದ ನಾಯಕರು ಇಟ್ಟಿರುವ ಬೇಡಿಕೆಗಳೇನು ಎಂಬುದರ ಕುರಿತು ಪಕ್ಷದ ವರಿಷ್ಠರ ಗಮನಕ್ಕೆ ತಂದರು. ಕಾಂಗ್ರೆಸ್ ಬಂಡಾಯ ನಾಯಕರು ಇಟ್ಟಿರುವ ಮಹತ್ವದ ಬೇಡಿಕೆಗಳೇನು ಎಂಬುದನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.
- G-23 ಬಣವು ಎಲ್ಲಾ ಹಂತಗಳಲ್ಲಿ ಸಾಮೂಹಿಕ ಮತ್ತು ಅಂತರ್ಗತ ನಾಯಕತ್ವ ಮತ್ತು ನಿರ್ಧಾರ ತೆಗೆದುಕೊಳ್ಳುವ ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾಯಿಸಿದೆ.
- "ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಅಗತ್ಯವಾಗಿದೆ.
- 2024ಕ್ಕೆ ವಿಶ್ವಾಸಾರ್ಹ ಮತ್ತು ಪರ್ಯಾಯಕ್ಕೆ ದಾರಿಯನ್ನು ಕಂಡುಕೊಳ್ಳಬೇಕಿದೆ
- ಸಮಾನ ಮನಸ್ಕ ಶಕ್ತಿಗಳೊಂದಿಗೆ ಹೊಸ ವೇದಿಕೆಯನ್ನು ರಚಿಸುವ ಬಗ್ಗೆ ಮಾತುಕತೆ ಪ್ರಾರಂಭಿಸಲು ಜಿ-23 ನಾಯಕರ ಒತ್ತಾಯ
ಸೋನಿಯಾ ಗಾಂಧಿ ಭೇಟಿ ನಂತರ ಗುಲಾಂ ನಬಿ ಸ್ಪಷ್ಟನೆ:
''ಸೋನಿಯಾ ಗಾಂಧಿಯವರೊಂದಿಗಿನ ಚರ್ಚೆ ಉತ್ತಮವಾಗಿತ್ತು. ಕಾಂಗ್ರೆಸ್ ವರಿಷ್ಠರಾಗಿ ಸೋನಿಯಾ ಗಾಂಧಿಯವರು ಮುಂದುವರಿಯಬೇಕು ಎಂದು ಸರ್ವಾನುಮತಗಳಿಂದ ನಿರ್ಧರಿಸಿದ್ದಾರೆ. ನಾವು ಕೆಲವು ಸಲಹೆಗಳನ್ನಷ್ಟೇ ಅವರ ಮುಂದೆ ಇಟ್ಟಿದ್ದೇವೆ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲಿಗೆ ಕಾರಣವೇನು ಎಂಬುದರ ಬಗ್ಗೆ ಕಾರ್ಯಕಾರಿ ಸಮಿತಿಯು ಪ್ರಶ್ನೆ ಮಾಡಿತ್ತು. ವಿರೋಧ ಪಕ್ಷಗಳೊಂದಿಗೆ ಪ್ರಬಲವಾಗಿ ಹೋರಾಡುವುದರಲ್ಲಿ ಕಾಂಗ್ರೆಸ್ ಹಿಂದೆ ಉಳಿದಿದ್ದು ಎಲ್ಲಿ ಎಂಬುದರ ಕುರಿತು ಚರ್ಚೆ ನಡೆಸಲಾಯಿತು," ಎಂದು ಗುಲಾಂ ನಬಿ ಆಜಾದ್ ಹೇಳಿದ್ದಾರೆ.
2020ರಲ್ಲಿ ಸೋನಿಯಾ ಗಾಂಧಿಯವರಿಗೆ ಜಿ-23 ನಾಯಕರ ಪತ್ರ:
''ಕಳೆದ 2020ರಲ್ಲಿ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಎದುರಿಸಿದ ಹೀನಾಯ ಸೋಲಿನ ಬಗ್ಗೆ ಜಿ-23 ನಾಯಕರು ತೀವ್ರ ಅಸಮಾಧಾನ ಹೊರ ಹಾಕಿದ್ದರು. ಕಾಂಗ್ರೆಸ್ ಪಕ್ಷದ ಆಂತರಿಕ ರಚನೆಯಲ್ಲಿ ಬದಲಾವಣೆ ತರುವಂತೆ ಸೋನಿಯಾ ಗಾಂಧಿಯವರಿಗೆ ಅಂದೇ ಪತ್ರ ಬರೆದಿದ್ದರು. ನಾವು ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದಕ್ಕೆ ಬಯಸುತ್ತೇವೆಯೇ ಹೊರತೂ ದುರ್ಬಲಗೊಳಿಸುವುದಕ್ಕೆ ಅಲ್ಲ'' ಎಂದು ಹೇಳಿದ್ದರು.
ಯಾವ ತ್ಯಾಗಕ್ಕೂ ಸಿದ್ಧ ಎಂದಿದ್ದ ಸೋನಿಯಾ ಗಾಂಧಿ:
ಐದು ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ನಂತರ ಮಾರ್ಚ್ 13ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಿದ್ದು, ಅಲ್ಲಿ ನಡೆದ ಚರ್ಚೆ ಕುರಿತು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಅಸಮಾಧಾನ ಹೊರ ಹಾಕಿದ್ದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಸ್ಥಾನದಲ್ಲಿ ಸೋನಿಯಾ ಗಾಂಧಿಯವರನ್ನೇ ಮುಂದುವರಿಸುವುದಕ್ಕೆ ನಿರ್ಧರಿಸಲಾಯಿತು. ಆದರೆ ಇದೇ ಸಭೆಯಲ್ಲಿ ಗಾಂಧಿ ಕುಟುಂಬದಿಂದಾಗಿ ಕಾಂಗ್ರೆಸ್ ಪಕ್ಷವು ದುರ್ಬಲಗೊಳ್ಳುತ್ತಿದೆ ಎಂದು ಕೆಲವರು ಭಾವಿಸುತ್ತಿರುವ ಬಗ್ಗೆ ಸೋನಿಯಾ ಗಾಂಧಿ ಪ್ರಸ್ತಾಪಿಸಿದ್ದರು. ನಿಮ್ಮೆಲ್ಲರಲ್ಲೂ ಅದೇ ರೀತಿಯ ಅಭಿಪ್ರಾಯವಿದ್ದರೆ, ನಾನು ಯಾವುದೇ ರೀತಿ ತ್ಯಾಗಕ್ಕೂ ಸಿದ್ಧ," ಎಂದು ಅವರು ಹೇಳಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದ್ದರು.
ಕಳೆದ ಮಾರ್ಚ್ 13ರಂದು ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಾರೆ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ ಅಂಥ ಯಾವುದೇ ಬೆಳವಣಿಗೆಗಳು ನಡೆಯಲಿಲ್ಲ. ಅದರ ಬದಲಿಗೆ ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕ ಬದಲಾವಣೆಗಳನ್ನು ತರುವುದಕ್ಕೆ ಸೋನಿಯಾ ಗಾಂಧಿ ಸೂಚಿಸಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications