ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್: ಸೋನಿಯಾ ಗಾಂಧಿ ಸ್ಪರ್ಧೆ ಎಲ್ಲಿಂದ?
ದೆಹಲಿ, ಫೆಬ್ರವರಿ 14: ಲೋಕಸಭಾ ಚುಣಾವಣೆಗೆ ತಯಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ತಯಾರಿ ನಡೆಸುತ್ತಿದೆ. ಇತ್ತ ಬಿಜೆಪಿಯು ರಾಜ್ಯಸಭಾ ಅಭ್ಯರ್ಥಿಗಳ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ನಾಲ್ಕು ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಹೌದು, ನಾಲ್ಕು ರಾಜ್ಯಗಳಿಂದ ರಾಜ್ಯಸಭೆಗೆ ಅಭ್ಯರ್ಥಗಳ ಪಟ್ಟಿಯನ್ನ ಬಿಡುಗಡೆಗೊಳಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಟ್ಟಿಯನ್ನು ಪ್ರಕಟ ಮಾಡಿದ್ದಾರೆ. ರಾಜಸ್ಥಾನದಿಂದ ಸೋನಿಯಾ ಗಾಂಧಿಯನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನುಸಿಂಘ್ವಿಗೆ ಟಿಕೆಟ್ ನೀಡಲಾಗಿದ್ದು, ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್ ಹಾಗೂ ಮಹಾರಾಷ್ಟ್ರದಿಂದ ಚಂದ್ರಕಾಂತ್ಗೆ ಹಂಡೋರೆಗೆ ಟಿಕೆಟ್ ನೀಡಲಾಗಿದೆಕರ್ನಾಟಕದಲ್ಲಿ ಮೂರು ರಾಜ್ಯಸಭಾ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಧ್ಯಪ್ರದೇಶದಲ್ಲಿ ಒಂದು, ತೆಲಂಗಾಣದಲ್ಲಿ ಎರಡು ಸ್ಥಾನಕ್ಕೆ ಇನ್ನೂ ಅಭ್ಯರ್ಥಿಗಳನ್ನ ಘೋಷಿಸಿಲ್ಲ.

ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಬುಧವಾರ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಮತ್ತು ಇತರ ಕೆಲವು ನಾಯಕರು ಸೋನಿಯಾ ಅವರು ನಾಮಪತ್ರ ಸಲ್ಲಿಸುವ ವೇಳೆ ಸಾಥ್ ನೀಡಿದ್ದಾರೆ.












Click it and Unblock the Notifications