Breaking: ಹಿಮಾಚಲ ಪ್ರದೇಶ ಚುನಾವಣೆಗೆ 46 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನವದೆಹಲಿ, ಅಕ್ಟೋಬರ್ 18: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದ್ದು, ಈ ಪೈಕಿ 19 ಹಾಲಿ ಶಾಸಕರಿಗೆ ಟಿಕೆಟ್ ಘೋಷಿಸಲಾಗಿದೆ.
ಮಂಗಳವಾರ ಬಿಡುಗಡೆಯಾದ ಪಟ್ಟಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಹರೋಲಿ ವಿಧಾನಸಭಾ ಕ್ಷೇತ್ರದಿಂದ ಮತ್ತು ಮಾಜಿ ಸಚಿವೆ ಆಶಾ ಕುಮಾರಿ ಡಾಲ್ಹೌಸಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ರಾಜ್ಯ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರಾದ ಸುಖವಿಂದರ್ ಸಿಂಗ್ ಸುಖು ನಾದೌನ್ ಮತ್ತು ಕುಲದೀಪ್ ಸಿಂಗ್ ರಾಥೋಡ್ ಥಿಯೋಗ್‌ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಪುತ್ರ ವಿಕ್ರಮಾದಿತ್ಯ ಸಿಂಗ್ ಸೇರಿದಂತೆ ಎಲ್ಲಾ ಹಾಲಿ ಶಾಸಕರನ್ನು ಪಕ್ಷವು ಶಿಮ್ಲಾ ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಆದರೆ, ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್ ಹೆಸರು ಕಂಡು ಬಂದಿಲ್ಲ.

ಬಿಜೆಪಿಯಿಂದ ಜಿಗದ ನಾಯಕನಿಗೆ ಕಾಂಗ್ರೆಸ್ ಟಿಕೆಟ್:
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ದಯಾಲ್ ಪ್ಯಾರಿ, ಪಚ್ಚಾಡ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಅದೇ ರೀತಿ ಸೋಲನ್ ಕ್ಷೇತ್ರದಿಂದ ಕರ್ನಲ್ ಧನಿ ರಾಮ್ ಶಾಂಡಿಲ್, ಶಿಲ್ಲೈ ವಿಧಾನಸಭಾ ಕ್ಷೇತ್ರದಿಂದ ಹರ್ಷವರ್ಧನ್ ಸಿಂಗ್ ಚೌಹಾಣ್ ಸ್ಪರ್ಧಿಸಲಿದ್ದಾರೆ. ರಾಜ್ಯದ ಮಾಜಿ ಸಚಿವ ಮತ್ತು ಪಕ್ಷದ ಮಾಜಿ ಮುಖ್ಯಸ್ಥ ಕೌಲ್ ಸಿಂಗ್ ಠಾಕೂರ್ ದರಾಂಗ್ ವಿಧಾನಸಭಾ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಯಾವಾಗ ಮತದಾನ?
ಹಿಮಾಚಲ ಪ್ರದೇಶ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಮತಗಳ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 27 ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ವಾಪಸ್ ಪಡೆಯುವುದಕ್ಕೆ ಅಕ್ಟೋಬರ್ 29 ಕೊನೆಯ ದಿನವಾಗಿದೆ.












Click it and Unblock the Notifications