ಕಾಂಗ್ರೆಸ್‌ನ 7ನೇ ಪಟ್ಟಿ ಬಿಡುಗಡೆ : 35 ಅಭ್ಯರ್ಥಿಗಳು

ನವದೆಹಲಿ, ಮಾರ್ಚ್ 23 : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 7ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 35 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಹಲವು ರಾಜ್ಯಗಳ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಶುಕ್ರವಾರ ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿತ್ತು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿತ್ತು.

ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ 35 ಅಭ್ಯರ್ಥಿಗಳಿದ್ದಾರೆ. ಛತ್ತೀಸ್‌ಗಢ, ಮಹಾರಾಷ್ಟ್ರ, ಓಡಿಶಾ, ತಮಿಳುನಾಡು, ತೆಲಂಗಾಣ, ತ್ರಿಪುರ, ಉತ್ತರ ಪ್ರದೇಶ ಮತ್ತು ಪುದುಚೇರಿ ರಾಜ್ಯಗಳ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿದೆ.

ಪಕ್ಷದ ಹಿರಿಯ ನಾಯಕಿ ರೇಣುಕಾ ಚೌಧರಿ ಅವರು ತೆಲಂಗಾಣ ರಾಜ್ಯದ ಕಮ್ಮಮ್ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಇದುವರೆಗೂ 181 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ.

congress

7ನೇ ಪಟ್ಟಿಯ ಅಭ್ಯರ್ಥಿಗಳು ಯಾರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+