• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪುದುಚೇರಿ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್

|

ಪುದುಚೇರಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪುದುಚೇರಿ ಜನತೆಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು.

ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಅವರು ಚುನಾವಣೆಗೂ ಮುನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಸರ್ಕಾರದಿಂದ ಪಡೆದ ಎಲ್ಲಾ ಸಾಲಗಳನ್ನು ಮನ್ನಾ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.


ಅಷ್ಟೇ ಅಲ್ಲದೆ ಕಾಲೇಜು ವಿದ್ಯಾರ್ಥಿಗಳಿಗೆ 60 ಜಿಬಿ ಡಾಟಾವನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದಾರೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಲಾಗುವುದು ಎಂದು ತಿಳಿಸಿದೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ, ಮೀನುಗಾರ ಮಹಿಳಾ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಪ್ರಾಥಮಿಕ ಹಂತದಿಂದ ಸಂಶೋಧನಾ ಹಂತದವರೆಗೆ ಉಚಿತ ಶಿಕ್ಷಣದ ಭರವಸೆ ನೀಡಿದೆ.

ಏಪ್ರಿಲ್ 6 ರಂದು ಪುದುಚೇರಿ ವಿಧಾನಸಭಾ ಚುನಾವಣೆ, ಮೇ 2ಕ್ಕೆ ಮತ ಎಣಿಕೆ ಏಪ್ರಿಲ್ 6 ರಂದು ಪುದುಚೇರಿ ವಿಧಾನಸಭಾ ಚುನಾವಣೆ, ಮೇ 2ಕ್ಕೆ ಮತ ಎಣಿಕೆ

ಪುದುಚೇರಿಗೆ ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಮಾರ್ಚ್ 27ಕ್ಕೆ ಮೊದಲ ಹಂತದ ಚುನಾವಣೆ, ಏಪ್ರಿಲ್ 1 ರಿಂದ ಎರಡನೇ ಹಂತದ ಚುನಾವಣೆ, ಏಪ್ರಿಲ್ 6ಕ್ಕೆ ಮೂರನೇ ಹಂತದ ಚುನಾವಣೆ ಹಾಗೂ ಮೇ2ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ.

English summary
Congress releases its manifesto for upcoming Puducherry assembly elections Puducherry to go to polls on April 6.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X