ಮೋದಿ ಸರ್ಕಾರದಲ್ಲಿ ಇಡಿ, ಸಿಬಿಐ, ಐಟಿ ತನಿಖಾ ಸಂಸ್ಥೆಗಳು ರಾಜಕೀಯ ಸೇಡಿನ ಅಸ್ತ್ರಗಳಾಗಿವೆ: ಜೈರಾಮ್ ರಮೇಶ್
2021-22 ರ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆ ಸುಮಾರು ಎಂಟು ಗಂಟೆಗಳ ವಿಚಾರಣೆಯ ನಂತರ ಬಂಧಿಸಿದೆ.
ನವದೆಹಲಿ, ಫೆಬ್ರವರಿ. 28: ಆಪ್ ನಾಯಕ ಮನೀಶ್ ಸಿಸೋಡಿಯಾ ಬಂಧನಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳು "ರಾಜಕೀಯ ಸೇಡಿನ" ಸಾಧನಗಳಾಗಿ ಮಾರ್ಪಟ್ಟಿವೆ ಮತ್ತು ಪ್ರತಿಪಕ್ಷಗಳ ನಾಯಕರ ಹೆಸರನ್ನು ಹಾಳು ಮಾಡಲು ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
2021-22 ರ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆ ಸುಮಾರು ಎಂಟು ಗಂಟೆಗಳ ವಿಚಾರಣೆಯ ನಂತರ ಬಂಧಿಸಿದೆ. ಪ್ರಕರಣದ ಪರಿಣಾಮಕಾರಿ ವಿಚಾರಣೆಗಾಗಿ ಏಜೆನ್ಸಿ ತನ್ನ ಕಸ್ಟಡಿಗೆ ಕೋರಿತ್ತು, ನಂತರ ವಿಶೇಷ ನ್ಯಾಯಾಲಯವು ಮನೀಶ್ ಸಿಸೋಡಿಯಾ ಅವರನ್ನು ಐದು ದಿನಗಳ ಸಿಬಿಐ ಬಂಧನಕ್ಕೆ ಒಪ್ಪಿಸಿದೆ. ಇದರ ಬೆನ್ನಲ್ಲೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಯಾರನ್ನೂ ಅಥವಾ ಯಾವುದೇ ನಿರ್ದಿಷ್ಟ ಪ್ರಕರಣವನ್ನು ಹೆಸರಿಸದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್‌ನಲ್ಲಿ, "ಮೋದಿ ಸರ್ಕಾರದ ಅಡಿಯಲ್ಲಿ ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳು ರಾಜಕೀಯ ಸೇಡು ಮತ್ತು ಕಿರುಕುಳದ ಸಾಧನಗಳಾಗಿವೆ ಎಂಬ ನಂಬಿಕೆಯನ್ನು ಕಾಂಗ್ರೆಸ್ ಯಾವಾಗಲೂ ಹೊಂದಿದೆ" ಎಂದು ವ್ಯಂಗ್ಯವಾಡಿದ್ದಾರೆ.

"ಈ ರಲ್ಲಾ ತನಿಖಾ ಸಂಸ್ಥೆಗಳು ತಮ್ಮ ವೃತ್ತಿಪರತೆಯನ್ನು ಕಳೆದುಕೊಂಡಿವೆ. ವಿರೋಧ ಪಕ್ಷದ ನಾಯಕರ ಹೆಸರನ್ನು ಹಾಳು ಮಾಡುವ ಗುರಿಯನ್ನು ಹೊಂದಿದ್ದಾರೆ" ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಇತ್ತ, ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿರುವುದು ಸ್ವಾಗತಾರ್ಹ ಕ್ರಮ ಎಂದು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಹೇಳಿದ್ದಾರೆ. ಆಮ್ ಆದ್ಮಿ ಪಾರ್ಟಿ "ಸಂಪತ್ತನ್ನು ಸಂಗ್ರಹಿಸಲು ಅಧಿಕಾರವನ್ನು ಬಳಸಿದೆ" ಎಂದು ಅನಿಲ್ ಚೌಧರಿ ಆರೋಪಿಸಿದ್ದರು.












Click it and Unblock the Notifications