ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೆಹರುರನ್ನು ದೇಶ ವಿಭಜನೆಯ ಪಿತಾಮಹ ಎಂದ ಬಿಜೆಪಿ, ಕಾಂಗ್ರೆಸ್ ಕಿಡಿ

|
Google Oneindia Kannada News

ನವದೆಹಲಿ, ಅ.02: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಭಾರತ ವಿಭಜನೆಯ ಪಿತಾಮಹ ಎಂದು ಕರೆದಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಶನಿವಾರ ರಾಜ್ಯದ ಕೆಲವು ಕನ್ನಡ ದಿನಪತ್ರಿಕೆಗಳಲ್ಲಿ ಬಿಜೆಪಿ ಮೊದಲ ಪುಟದ ಜಾಹೀರಾತು ನೀಡಿತ್ತು, ಇದರಲ್ಲಿ ಕಾಂಗ್ರಸ್‌ನ ಭಾರತ್ ಜೋಡೋ ಯಾತ್ರೆಯನ್ನು ಟೀಕಿಸುವ ಭರದಲ್ಲಿ ಜವರಾರ್ ಲಾಲ್ ನೆಹರು ಅವರನ್ನು ಅವಹಳನ ಮಾಡಿತ್ತು. ಇದಕ್ಕೆ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ರಾಹುಲ್ ಗಾಂಧಿ ಎದುರು ಬಿಜೆಪಿ ಹಾಗೂ ಪೊಲೀಸರಿಗೆ ವಾರ್ನಿಂಗ್ ಕೊಟ್ಟ ಸಿದ್ದರಾಮಯ್ಯರಾಹುಲ್ ಗಾಂಧಿ ಎದುರು ಬಿಜೆಪಿ ಹಾಗೂ ಪೊಲೀಸರಿಗೆ ವಾರ್ನಿಂಗ್ ಕೊಟ್ಟ ಸಿದ್ದರಾಮಯ್ಯ

ರಾಜ್ಯದಲ್ಲಿ ರಾಹುಲ್ ಗಾಂಧಿಯವರ 'ಭಾರತ್ ಜೋಡೋ ಯಾತ್ರೆ' ಎರಡನೇ ದಿನಕ್ಕೆ ಕಾಲಿಡುತ್ತಿದ್ದಂತೆ ಬಿಜೆಪಿಯ ರಾಜ್ಯ ಘಟಕವು ಕೆಲವು ಕನ್ನಡ ಪತ್ರಿಕೆಗಳಲ್ಲಿ ಜಾಹೀರಾತನ್ನು ಪ್ರಕಟಿಸಿತ್ತು. "ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?" ಎಂದು ವ್ಯಂಗ್ಯವಾಡಿತ್ತು.

Congress slams the BJP for Calling Nehru as grandfather of Indias Partition

ಜವಾಹರಲಾಲ್ ನೆಹರು ಮತ್ತು ರಾಹುಲ್ ಗಾಂಧಿ ಅವರ ಭಾವಚಿತ್ರಗಳ ಮಧ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ವಿಭಜಿಸುವ ನಕ್ಷೆಯೊಂದಿಗೆ, " ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ?", ದೇಶ ವಿಭಜನೆಯ ಪರಂಪರೆಯಲ್ಲಿ ಬಂದವರಿಂದ ದೇಶ ಒಡೆಯುವುದನ್ನು ಬೆಂಬಲಿಸಿದವರಿಂದ ಭಾರತದ ಐಕ್ಯತೆ ಸಾಧ್ಯವೇ? ಎಂಬ ಪ್ರಶ್ನೆಗಳನ್ನು ಕೇಳಲಾಗಿದೆ. ಜೊತೆಗೆ 'ಭಾರತ್ ಜೋಡೋ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ' ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಲಪಂಥೀಯರು ಯಾವಾಗಲೂ ಇತಿಹಾಸವನ್ನು ತಪ್ಪಾಗಿ ತಿಳಿಸುತ್ತಾರೆ ಎಂದು ಹೇಳಿದೆ.

"ಬಿಜೆಪಿ ಜಾಹೀರಾತು ನೀಡಿದೆ. ಬಲಪಂಥೀಯ ಸಿದ್ಧಾಂತವು ಯಾವಾಗಲೂ ಇತಿಹಾಸವನ್ನು ತಪ್ಪಾಗಿಯೇ ಚಿತ್ರಿಸುತ್ತದೆ. ಅವರು ಇತಿಹಾಸವನ್ನು ಬರೆಯಲು ಸಾಧ್ಯವಾಗದ ಕಾರಣ ಅವರು ಇತಿಹಾಸವನ್ನು ಪುನಃ ಬರೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರದ ಅಧ್ಯಕ್ಷ ಪವನ್ ಖೇರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

Congress slams the BJP for Calling Nehru as grandfather of Indias Partition

ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಅವರ ಅಧ್ಯಕ್ಷತೆಯಲ್ಲಿ 1937 ರಲ್ಲಿ ನಡೆದ ಅಹಮದಾಬಾದ್ ಸಮಾವೇಶದಲ್ಲಿ ಹಿಂದೂ ಮಹಾ ಸಭಾವು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮೊದಲು ಪ್ರಸ್ತಾಪಿಸಿತು 1942 ರಲ್ಲಿ, ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರು ಮುಸ್ಲಿಂ ಲೀಗ್‌ನ ಲಾಹೋರ್ ಸಮಾವೇಶದಲ್ಲಿ ಅದನ್ನೇ ಪುನರಾವರ್ತಿಸಿದರು ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ರಾಜ್ಯದ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಸ್ವಾತಂತ್ರ್ಯ ತಂದುಕೊಟ್ಟವರಿಗೆ ಬಿಜೆಪಿ ಇತಿಹಾಸದ ಪಾಠ ಕಲಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

"ಯಾವ ಪಕ್ಷವು ಎಲ್ಲಾ ಪ್ರಾಂತ್ಯಗಳನ್ನು ಒಗ್ಗೂಡಿಸಿ ಒಂದು ರಾಷ್ಟ್ರವನ್ನು ಮಾಡಿದ್ದು, ಕಾಂಗ್ರೆಸ್, ಆರ್‌ಎಸ್‌ಎಸ್‌ ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ? ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅಥವಾ ಎರಡನೇ ಸರ್ಸಂಘ ಚಾಲಕ ಮಾಧವ್ ಸದಾಶಿವರಾವ್ ಗೋಳ್ವಾಲ್ಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರೆಯೇ? ಆರ್‌ಎಸ್‌ಎಸ್‌ ಯಾವ ನಾಯಕ ಸ್ವಾತಂತ್ರ್ಯ ಹೋರಾಟದಲ್ಲಿ ಮೃತಪಟ್ಟಿದ್ದಾರೆ. ಈಗ ಈ ಜನ ಕಾಂಗ್ರೆಸ್‌ಗೆ ಇತಿಹಾಸದ ಪಾಠ ಮಾಡುತ್ತಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

English summary
Congress slammed the BJP for Calling first Prime Minister Jawaharlal Nehru as grandfather of India's Partition in a advertisement. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X