ಪಂಜಾಬ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್

ಚಂಡೀಗಢ, ಡಿಸೆಂಬರ್ 18: ಪಂಜಾಬ್ ನಲ್ಲಿ ಭಾನುವಾರ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್ಲಾ ಮೂರು ಮಹಾನಗರ ಪಾಲಿಕೆಗಳಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಗೆದ್ದು ಕ್ವೀನ್ ಸ್ವೀಪ್ ಸಾಧನೆ ಮಾಡಿದೆ. ಇಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟ ಭಾರೀ ಮುಖಭಂಗ ಅನುಭವಿಸಿದೆ.

ಅಮೃತಸರ, ಜಲಂಧರ್ ಮತ್ತು ಪಟಿಯಾಲಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಇತರ ನಗರಸಭೆ, ಪಟ್ಟಣ ಪಂಚಾಯತ್ ಗಳಲ್ಲೂ ಕಾಂಗ್ರೆಸ್ ಜಯದ ನಗೆ ಬೀರಿದೆ.

Congress sweeps municipal polls in Punjab

ಪಟಿಯಾಲಾದಲ್ಲಿ 60ರಲ್ಲಿ ಕಾಂಗ್ರೆಸ್ 58 ವಾರ್ಡ್ ಗಳಲ್ಲಿ ಕಾಂಗ್ರೆಸ್ ಜಯ ದಾಖಲಿಸಿದೆ. ಇಲ್ಲಿ ಬಿಜೆಪಿ-ಅಕಾಳಿದಳ ಖಾತೆಯನ್ನೇ ತೆರೆದಿಲ್ಲ. ಇನ್ನು ಅಮೃತಸರ ಮಹಾನಗರ ಪಾಲಿಕೆಯ 85 ವಾರ್ಡ್ ಗಳಲ್ಲಿ ಕಾಂಗ್ರೆಸ್ 69ರಲ್ಲಿ ಗೆದ್ದಿದೆ. ಇಲ್ಲಿ ಬಿಜೆಪಿ 6, ಅಕಾಲಿದಳ 6 ಮತ್ತು ಇತರರ 4 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ಜಲಂಧರ್ ನಲ್ಲಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ 66 ಸ್ಥಾನಗಳನ್ನು ಗೆದ್ದಿದ್ದರೆ ಬಿಜೆಪಿ 8 ಮತ್ತು ಅಕಾಲಿದಳ 4 ಹಾಗೂ ಪಕ್ಷೇತರರು 2 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಬಿಜೆಪಿ ಮತ್ತು ಎಎಪಿ ಪಕ್ಷಗಳು ದೂರಿವೆ. ಇವೇ ಕಾಂಗ್ರೆಸ್ ಗೆಲುವಿಗೆ ಕಾರಣ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+