Rahul Gandhi-Priyanka Gandhi: ಕುತೂಹಲ ಕೆರಳಿಸಿರುವ ರಾಯ್‌ಬರೇಲಿ, ಅಮೇಥಿಗೆ ಇಂದು ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ನವದೆಹಲಿ, ಮೇ. 02 : ನಡೆಯುತ್ತಿರುವ ಲೋಕಸಭಾ ಚುನಾವಣೆ 2024 ಕ್ಕೆ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಮೂರನೇ ಹಂತದ ಮತದಾನಕ್ಕೆ ದೇಶ ಸಜ್ಜಾಗುತ್ತಿದೆ. ನಿಧಾನವಾಗಿ ಮತದಾನ ನಡೆಯಿರುವ ಕೆಲವೆಡೆ ಇನ್ನೂ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ಹೀಗೆ ಅಭ್ಯರ್ಥಿ ಘೋಷಣೆ ಬಗ್ಗೆ ಕುತೂಹಲ ಕಾಯ್ದುಕೊಂಡಿರುವ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿ ಕೂಡ ಎರಡು ಹಾಟ್ ಸೀಟ್‌ಗಳು.
ಎರಡು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಸಸ್ಪೆನ್ಸ್ ಇಂದು ಕೊನೆಗೊಳ್ಳಲಿದೆ. ನಾಮಪತ್ರ ಸಲ್ಲಿಕೆಗೆ ಒಂದೇ ದಿನ ಬಾಕಿ ಇರುವ ಕಾರಣ ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈಗಾಗಲೇ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ಶೀಘ್ರವೇ ಎಲ್ಲರನ್ನು 'ಆಶ್ಚರ್ಯ' ನೂಕುವಂತಹ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಹುಲ್- ಪ್ರಿಯಾಂಕಾ ಗಾಂಧಿ ಸ್ಪರ್ಧೆ!?
ಇನ್ನು, ಮೂಲಗಳನ್ನು ನಂಬುವುದಾದರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಮೇಥಿ ಮತ್ತು ರಾಯ್‌ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಆದರೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಬರ್ಟ್ ವಾದ್ರಾ ಅವರ ಹೆಸರುಗಳು ಕೂಡ ಕೇಳಿಬರುತ್ತಿವೆ.
ಮತ್ತೊಂದೆಡೆ, ಅಮೇಥಿಯಿಂದ ಬಿಜೆಪಿ ಮತ್ತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಕಣಕ್ಕಿಳಿಸಿದೆ, ಅವರು 2019 ರಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂದಿ ಅವರನ್ನು 55000 ಮತಗಳ ಅಂತರದಿಂದ ಸೋಲಿಸಿದ್ದರು. ಮೂರನೇ ಬಾರಿಗೆ ಮತ್ತೆ ಇಬ್ಬರು ಎದುರು ಬದುರಾಗುತ್ತಾರಾ ಎಂದು ನೋಡಬೇಕುದೆ.
ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ "ಗಾಂಧಿ ಕುಟುಂಬವು ಅತ್ಯಂತ ಜನಪ್ರಿಯವಾಗಿದೆ. ಅವರ ಸಾರ್ವಜನಿಕ ಸಭೆಗಳಿಗೆ ಲಕ್ಷಾಂತರ ಜನರು ಬರುತ್ತಿದ್ದಾರೆ. ನಿರ್ಧಾರವನ್ನು ಈಗ ಸಿಇಸಿಗೆ ಬಿಡಲಾಗಿದೆ" ಎಂದು ಹೇಳಿದ್ದಾರೆ. ಕಾದು ನೋಡಿ, ಉತ್ತರ ಪ್ರದೇಶದ ಎರಡೂ ಸ್ಥಾನಗಳಲ್ಲಿ ಪಕ್ಷವು ಪ್ರಬಲ ಅಭ್ಯರ್ಥಿಗಳನ್ನು ಕಣಕಿಳಿಸುತ್ತದೆ. ಕೊನೆಯವರೆಗೂ ಸಸ್ಪೆನ್ಸ್ ಇರುವ ಚಿತ್ರ ಸೂಪರ್ ಹಿಟ್ ಆಗಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಹೇಳಿದ್ದಾರೆ.

ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ?
ಮಾಜಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ತೆರಳಲು ನಿರ್ಧರಿಸಿದ ನಂತರ, ಪಕ್ಷದ ಭದ್ರಕೋಟೆಯಾದ ರಾಯ್‌ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಅಭ್ಯರ್ಥಿಯ ಹುಡುಕಾಟ ಪ್ರಾರಂಭವಾಯಿತು. ಪ್ರಿಯಾಂಕಾ ಗಾಂಧಿ ಅವರನ್ನು ನಿಲ್ಲಿಸಬೇಕು ಎಂಬ ಬಗ್ಗೆ ಒತ್ತಡ ಇದ್ದು, ಅವರನ್ನೇ ಫೈನಲ್ ಮಾಡಬಹುದು ಎಂಬ ಊಹಾಪೋಹಗಳು ಪ್ರಾರಂಭವಾಗಿವೆ.
ಈ ಹಿಂದೆ, ಪ್ರಿಯಾಂಕಾ ಗಾಂಧಿ ಅವರು ತಾವು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಿಲ್ಲ ಮತ್ತು ಒಂದೇ ಸ್ಥಾನದಿಂದ ಸ್ಪರ್ಧಿಸುವ ಬದಲು ಉತ್ತರ ಪ್ರದೇಶದಾದ್ಯಂತ ಪ್ರಚಾರ ನಡೆಸಲು ಗಮನ ಹರಿಸಿದರೆ ಪಕ್ಷಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಹೇಳಿದ್ದರು. ಇತ್ತ, ಅಮೇಥಿ ಮತ್ತು ರಾಯ್‌ಬರೇಲಿ ಜನರು ಗಾಂಧಿ ಕುಟುಂಬದ ಅಭ್ಯರ್ಥಿಗಳನ್ನು ಬಯಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ವಯನಾಡ್ ಬಳಿಕ ಮತ್ತೆ ಅಮೇಥಿಗೆ ರಾಹುಲ್ ಗಾಂಧಿ?
ಕಳೆದ ಬಾರಿ ಅಮೇಥಿಯಿಂದ ಸೋತ ನಂತರ ವಯನಾಡ್ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತೊಮ್ಮೆ ಬಿಜೆಪಿಯ ಸ್ಮೃತಿ ಇರಾನಿ ಅವರನ್ನು ಎದುರಿಸುವ ಸಾಧ್ಯತೆಯಿದೆ. ಅವರು 2014 ರಲ್ಲಿ ಸ್ಮೃತಿ ಇರಾನಿಯನ್ನು ಸೋಲಿಸಿದ್ದರಯ. ಆದರೆ 2019 ಸ್ಮೃತಿ ಇರಾನಿ ವಿರುದ್ಧ ಸೋತರು. ಈಗ ಮೂರನೇ ಬಾರಿ ಮತ್ತೆ ಎದುರಾಗುವ ಸಾಧ್ಯತೆಯಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications