ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ಕಾಂಗ್ರೆಸ್
ನವದೆಹಲಿ, ಮಾರ್ಚ್ 23: ಕೇಂದ್ರ ಎನ್.ಡಿ.ಎ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಈ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಮಂಗಳವಾರ (ಮಾರ್ಚ್ 27) ಅವಿಶ್ವಾಸ ನಿರ್ಣಯಕ್ಕೆ ಅವಕಾಶ ನೀಡುವಂತೆ ಅವರು ಪತ್ರದಲ್ಲಿ ಕೇಳಿಕೊಂಡಿದ್ದಾರೆ.
ಇನ್ನು ಅವಿಶ್ವಾಸ ನಿರ್ಣಯ ಮಂಡಿಸುವ ಹಿನ್ನಲೆಯಲ್ಲಿ ಲೋಕಸಭೆಯಲ್ಲಿ ಎಲ್ಲರೂ ಉಪಸ್ಥಿತರಿರುವಂತೆ ತನ್ನ ಸಂಸದರಿಗೆ ಕಾಂಗ್ರೆಸ್ ಮೂರು ಸಾಲುಗಳ ವಿಪ್ ಜಾರಿ ಮಾಡಿದೆ.

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ವಿರೋಧ ಪಕ್ಷಗಳನ್ನು ಭೇಟಿಯಾಗಿ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ ವೈಎಸ್ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಅವಿಶ್ವಾಸ ನಿರ್ಣಯಗಳನ್ನು ಮಂಡಿಸಲು ಮುಂದಾಗಿದ್ದವು. ಆದರೆ ಕಲಾಪ ನಡೆಯದ ಹಿನ್ನಲೆಯಲ್ಲಿ ನಿರ್ಣಯ ಮಂಡನೆಯಾಗಿರಲಿಲ್ಲ.












Click it and Unblock the Notifications