Delhi Elections 2025: 2020 Delhi ಸಿನಿಮಾ ಬಿಡುಗಡೆ ಮುಂದೂಡಿಕೆಗೆ ಕಾಂಗ್ರೆಸ್ ಒತ್ತಾಯ: ಕಾರಣವೇನು?

ನವದೆಹಲಿ, ಜನವರಿ28: ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯ ಬೆನ್ನಲ್ಲೇ ಆಡಳಿತರೂಢ ಎಎಪಿ, ಕಾಂಗ್ರೆಸ್‌ ಹಾಗೂ ಬಿಜೆಪಿ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಎಎಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ ಸದ್ದು ಮಾಡುತ್ತಿದೆ.

ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿ ಹಿಂಸಾಚಾರ ಆಧಾರಿತ '2020 Delhi'ಸಿನಿಮಾ ಬಿಡುಗಡೆಯನ್ನು ಮುಂದೂಡುವಂತೆ ನಿರ್ದೇಶಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಇನ್ನೂ ಚುನಾವಣೆಗೆ ಮುನ್ನ ಬಿಜೆಪಿ ರಾಜಕೀಯ ವಾತಾವರಣವನ್ನು ಕೋಮುವಾದಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ದೆಹಲಿ ಚುನಾವಣೆಗೆ ಮೂರು ದಿನಗಳು ಬಾಕಿಯಿರುವಂತೆಯೇ ಫೆಬ್ರವರಿ 2 ರಂದು ಚುನಾವಣೆ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

Congress urges EC to defer release of movie 2020 Delhi based on communal riots

ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆ ಹಾಗೂ ದುರ್ಬಳಕೆಯಲ್ಲಿ ಈ ಸಿನಿಮಾ ಪ್ರಮುಖವಾಗಿದೆ. ಈ ಸಂಬಂಧ ಪಕ್ಷ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ಎಂದು ಹಿರಿಯ ವಕೀಲರಾಗಿರುವ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. ಬಿಜೆಪಿ ತನ್ನ ಅಭ್ಯರ್ಥಿಗಳ ಬಗ್ಗೆ ವಿಶ್ವಾಸ ಹೊಂದಿಲ್ಲದಿದ್ದರೆ ಸಮಾಜವನ್ನು ಹೊಡೆಯಲು, ಮತಗಳ ದುರ್ಬಳಕೆಗಾಗಿ ಕೋಮು ಆಧಾರಿತ ಚಿತ್ರಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತದೆ. ಇದೀಗ ಈ ಸಿನಿಮಾವನ್ನು ತನ್ನ ಚುನಾವಣಾ ಪ್ರಚಾರದ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಆರಂಭಿಸಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಮಾಜವನ್ನು ವಿಭಜಿಸಲು ಮತ್ತು ಮತದಾರರನ್ನು ದಾರಿ ತಪ್ಪಿಸುವ ಕೋಮುಪ್ರಚೋದಿತ ಚಲನಚಿತ್ರಗಳನ್ನು ಪ್ರಚಾರ ಮಾಡುವುದರಿಂದ ಹಿಂದೆ ಸರಿಯಬೇಕು. ಬಿಜೆಪಿ ತನ್ನ ಅಭ್ಯರ್ಥಿಗಳು ಮತ್ತು ಚುನಾವಣಾ ಪ್ರಚಾರದ ಬಗ್ಗೆ ವಿಶ್ವಾಸ ಹೊಂದಿಲ್ಲವೇ ಎಂದು ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರು ಚಿತ್ರದ ಅಧಿಕೃತ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ ಎಂದು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ ಮತ್ತು ಟ್ರೈಲರ್ ಅನ್ನು ಅದರ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಹೇಳಿದರು. 2019 ರಲ್ಲಿ, ಮೋದಿ ಜೀವನಚರಿತ್ರೆಯ ಬಿಡುಗಡೆಯನ್ನು ಯೋಜಿಸಿದಂತೆ ಬಿಜೆಪಿ ಇದೇ ವಿಧಾನವನ್ನು ಅಳವಡಿಸಿಕೊಂಡಿತು. ನಾವು ಚುನಾವಣಾ ಆಯೋಗ ಮತ್ತು ನಂತರ ಸುಪ್ರೀಂ ಕೋರ್ಟ್‌ಗೆ ಹೋದೆವು ಎಂದು ತಿಳಿಸಿದರು.

2020 ದೆಹಲಿಯಂತಹ ಚಲನಚಿತ್ರಗಳನ್ನು ಚುನಾವಣೆಗೆ ಕೆಲವೇ ದಿನಗಳ ಮೊದಲು ಬಿಡುಗಡೆ ಮಾಡಲು ಅವಕಾಶ ನೀಡಿದರೆ ಚುನಾವಣಾ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಗೆ ನೇರವಾಗಿ ಬೆದರಿಕೆ ಹಾಕಲಾಗುತ್ತದೆ ಎಂದು ಸಿಂಘ್ವಿ ಹೇಳಿದ್ದಾರೆ . ನಿರ್ದಿಷ್ಟ ಧಾರ್ಮಿಕ ಸಮುದಾಯದ ವಿರುದ್ಧ ಮತದಾರರ ಮೇಲೆ ಪ್ರಭಾವ ಬೀರಲು ಮತ್ತು ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ನೇರ ಪ್ರಯತ್ನ ಇದಾಗಿದೆ ಎಂದು ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+