ಫಲಿತಾಂಶಕ್ಕೂ ಮುನ್ನವೇ ಮಧ್ಯಪ್ರದೇಶ, ತೆಲಂಗಾಣದಲ್ಲಿ ಕಾಂಗ್ರೆಸ್‌ ವಿಜಯೋತ್ಸವ

ಬೆಂಗಳೂರು, ಡಿಸೆಂಬರ್‌ 2: ತೆಲಂಗಾಣ ಹಾಗೂ ಛತ್ತಿಸ್‌ಗಡ ವಿಧಾನಸಭಾ ಚುನಾವಣೆ ಮುಗಿದಿದ್ದು, ಭಾನುವಾರ ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಗೆಲ್ಲುವ ಮುನ್ನವೇ ವಿಜಯೋತ್ಸವದಲ್ಲಿ ತೊಡಗಿದೆ.

ತೆಲಂಗಾಣದ ರಾಜಧಾನು ಹೈದರಾಬಾದ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಪಕ್ಷದ ಅಧ್ಯಕ್ಷ ರೇವಂತ್ ರೆಡ್ಡಿ ಪರವಾಗಿ 'ಸಿಎಂ-ಸಿಎಂ' ಘೋಷಣೆ ಕೂಗಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದೆ. ಅದರಂತೆ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಅವರನ್ನು ಅಭಿನಂದಿಸಿ ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವ ಪೋಸ್ಟರ್ ಅನ್ನು ಭೋಪಾಲ್‌ನ ಕಾಂಗ್ರೆಸ್ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹಾಕಿದ್ದಾರೆ.

Congress victory in Madhya Pradesh and Telangana even before the results

ತೆಲಂಗಾಣ, ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ 4 ರಾಜ್ಯಗಳ ಫಲಿತಾಂಶ ಡಿಸೆಂಬರ್‌ 3ರಂದು ಪ್ರಕಟವಾಗಲಿದ್ದು, ಕಾಂಗ್ರೆಸ್‌ ಬಹುಮತ ಪಡೆಯುವ ಉಮೇದಿನಲ್ಲಿದೆ. ಈ ವಿಧಾನಸಭಾ ಚುನಾವಣೆಗಳಲ್ಲಿ ಈಗಾಗಲೇ ಪ್ರಕಟಗೊಂಡಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಸರಳ ಬಹುಮತ ಪಡೆಯಬಹುದು ಎಂದು ಹೇಳಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ರಾಜ್ಯಗಳಲ್ಲಿ ಉಸ್ತುವಾರಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದ್ದಾರೆ. ಕಾರಣ ತೆಲಂಗಾಣದಲ್ಲಿ ಗೆಲ್ಲಬಹುದಾದ ಕಾಂಗ್ರೆಸ್‌ ಶಾಸಕರಿಗೆ ಹಾಲಿ ಸಿಎಂ, ಬಿಆರ್‌ಎಸ್‌ ನಾಯಕ ಕೆ ಚಂದ್ರಶೇಖರ್‌ ರಾವ್‌ ಅವರು ದೂರವಾಣಿ ಕರೆ ಮಾಡುತ್ತಿದ್ದಾರೆ ಎಂದು ಶಾಸಕರೊಬ್ಬರು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಮಧ್ಯಪ್ರದೇಶದ ಭೋಪಾಲ್‌ಗೆ ರಣದೀಪ್‌ ಸುರ್ಜೇವಾಲಾ ಹಾಗೂ ತೆಲಂಗಾಣಕ್ಕೆ ಟ್ರಬಲ್‌ ಶೂಟರ್‌ ಎಂದೇ ಖ್ಯಾತರಾದ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅವರು ತೆರಳಿದ್ದಾರೆ. ಪಕ್ಷ ಅಧಿಕಾರಕ್ಕೆ ತರುವವರೆಗೆ ಅವರು ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಲಿದ್ದಾರೆ. ಎಕ್ಸಿಟ್‌ ಪೋಲ್‌ ಭವಿಷ್ಯಗಳು ಅಂದಾಜು ಆದರೂ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

ಚುನಾವಣೋತ್ತರ ಸಮೀಕ್ಷೆಗಳ ಕುರಿತು ಮಧ್ಯಪ್ರದೇಶದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು, "ನಾನು ಯಾವುದೇ (ಎಕ್ಸಿಟ್) ಪೋಲ್ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ನನಗೆ ಮಧ್ಯಪ್ರದೇಶದ ಮತದಾರರ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಒಮ್ಮ ಅಧಿಕಾರ ಪಡೆದ ಪಕ್ಷ ಮತ್ತೆ ಅಧಿಕಾರ ಪಡೆದ ಉದಾಹರಣ ಇಲ್ಲದಿದ್ದರೂ ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರ ಪಡೆಯುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕ ಕಮಲ್‌ನಾಥ್‌ ಅವರ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಛತ್ತೀಸ್‌ಗಢದಲ್ಲಿ ಮೂರು ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್‌ಗೆ ಸ್ಪಷ್ಟವಾದ ಜಯವನ್ನು ಭವಿಷ್ಯ ನುಡಿದಿವೆ. ಇತರರು ಪಕ್ಷವು ಗೆಲ್ಲುವ ಸಮೀಪವಿದೆಯಷ್ಟೇ ಎಂದು ಹೇಳಿದ್ದಾರೆ. ಏತನ್ಮಧ್ಯೆ ತೆಲಂಗಾಣದಲ್ಲಿ ಗುರುವಾರ ನಡೆದ ಎಕ್ಸಿಟ್ ಪೋಲ್‌ಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ 10 ವರ್ಷಗಳ ಆಡಳಿತದ ನಂತರ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಬಹುಮತದಿಂದ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿದೆ.

ರಾಜಸ್ಥಾನದಲ್ಲಿ ಗುರುವಾರ ನಡೆದ ಎಕ್ಸಿಟ್ ಪೋಲ್‌ಗಳು ರಾಜ್ಯದಲ್ಲಿ ಕಠಿಣ ಸ್ಪರ್ಧೆ ಇದೆ ಎಂದು ತಿಳಿಸಿವೆ. ಆಡಳಿತರೂಢ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಸುಮಾರು ಮೂರು ದಶಕಗಳ ಸಂಪ್ರದಾಯವನ್ನು ಹೊಂದಿರುವ ರಾಜ್ಯದಲ್ಲಿ ವಿಜೇತರ ಭವಿಷ್ಯದಲ್ಲಿ ವ್ಯತ್ಯಾಸಗಳಿವೆ. ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯನ್ನು ಡಿಸೆಂಬರ್ 4ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+