Jammu And Kashmir Elections: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ: ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ವ
ನವದೆಹಲಿ, ಸೆಪ್ಟೆಂಬರ್ 30: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಎರಡು ಹಂತದ ಚುನಾವಣೆ ನಡೆದಿದ್ದು, ಅಕ್ಟೋಬರ್ 1 ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದರು.
ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ ಎಂದು ಹೇಳಿದ್ದು ಈ ಹೇಳಿಕೆ ಸದ್ಯ ವೈರಲ್ ಆಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ತಿಳಿಸಿದ್ದಾರೆ.
ಇನ್ನೂ ಭಾಷಣ ವೇಳೆ ಅಸ್ವಸ್ಥರಾದ ಮಲ್ಲಿಕಾರ್ಜುನ ಖರ್ಗೆ ಅವರು ನಂತರ ಸುಧಾರಿಸಿಕೊಂಡು ಮತ್ತೆ ಭಾಷಣ ಮಾಡಲು ಶುರು ಮಾಡಿದ್ದು, ಭಾಷಣದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಳವಾಗುತ್ತದೆ ಎಂದು ಹೇಳಿದ್ದರು. ಇನ್ನೂ ಮಲ್ಲಿಕಾರ್ಜುನ್ ಖರ್ಗೆ ಅವರ ಈ ಹೇಳಿಕೆಯನ್ನ ಬಾಯ್ತಪ್ಪಿನಿಂದ ಹೇಳಿದ್ರಾ? ಅಥವಾ ಉದ್ದೇಶಪೂರ್ವಕವಾಗಿ ಹೇಳಿದ್ರಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.
ಕಾಶ್ಮೀರಿಗಳ ಹಕ್ಕುಗಳ ಪರವಾಗಿ ನಾನು ಹೋರಾಟ ಮಾಡುತ್ತೇನೆ. ಕಾಶ್ಮೀರ ಕಣಿವೆಯ ಉಜ್ವಲ ಭವಿಷ್ಯಕ್ಕೆ ಮೋದಿ ಮೊಸಳೆ ಕಣ್ಣೀರು ಸುರಿಸುತ್ತಿದ್ದು, ಅವರನ್ನ ನಂಬಬೇಡಿ. ಕಳೆದ ಹತ್ತು ವರ್ಷಗಳಿಂದ ದೇಶದ ಯುವಕರಿಗೆ ಅವರು ಏನು ಮಾಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
Kharge ji was clearly unwell, but CONg members made him continue his speech
— Sameer (@BesuraTaansane) September 29, 2024
But listen very carefully to what he says at the end “CONg hukumat mein aayi toh aatankwad badhega”
Truth comes out in a moment of weakness 🔥🔥🔥pic.twitter.com/PbVy6l0hnO
ಮಲ್ಲಿಕಾರ್ಜುನ್ ಖರ್ಗೆ ಆರೋಗ್ಯ ವಿಚಾರಿಸಿದ ಮೋದಿ
ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಮೂರನೇ ಹಂತದ ಮತದಾನಕ್ಕೆ ಭಾನುವಾರ ಪ್ರಚಾರ ಅಂತ್ಯಗೊಂಡಿತ್ತು, ಸಭೆಯನ್ನುದ್ದೇಶಿಸಿ ಮಾತನಾಡುವಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ''ನನಗೆ ಈಗ 83 ವರ್ಷ, ಮೋದಿಯನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ'' ಎಂದು ಹೇಳುತ್ತಿರುವಾಗಲೇ ಅಸ್ವಸ್ಥಗೊಂಡಿದ್ದರು. ಜಮ್ಮುವಿನಲ್ಲಿ ನಡೆದ ಸಭೆಯಲ್ಲಿ ವೇದಿಕೆ ಮೇಲೆ ಅಸ್ವಸ್ಥಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಕುರಿತು ಪ್ರಧಾನಿ ಮೋದಿ ಕರೆ ಮಾಡಿ ವಿಚಾರಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications