ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೌರತ್ವ ಮಸೂದೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಗೆ ಕಾಂಗ್ರೆಸ್‌

|
Google Oneindia Kannada News

ನವದೆಹಲಿ, ಡಿಸೆಂಬರ್ 13: ಪೌರತ್ವ ಮಸೂದೆಯಲ್ಲಿ ಲೋಕಸಭೆಯ ಎರಡೂ ಸಧನದಲ್ಲಿ ತೀವ್ರವಾಗಿ ವಿರೋಧಿಸಿದ್ದ ಕಾಂಗ್ರೆಸ್, ಮಸೂದೆಯ ವಿರುದ್ಧ ಸುಪ್ರೀಂಕೋರ್ಟ್‌ಗೆ ಹೋಗಲು ಸನ್ನದ್ಧವಾಗಿದೆ.

ಪೌರತ್ವ ಮಸೂದೆಯ ವಿರುದ್ಧ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್, ತನ್ನ ಹೋರಾಟಕ್ಕೆ ಕಾನೂನಾತ್ಮಕ ರೂಪ ಕೊಟ್ಟು ನ್ಯಾಯಾಲಯದಲ್ಲಿ ಮಸೂದೆಯನ್ನು ಪ್ರಶ್ನೆ ಮಾಡಲಿದೆ.

ಪೌರತ್ವ ತಿದ್ದುಪಡಿ ಮಸೂದೆ: ಬಿಜೆಪಿಯನ್ನು ಬೆಂಬಲಿಸಿದವರು ಯಾರು? ವಿರೋಧಿಸಿದವರು ಯಾರು?ಪೌರತ್ವ ತಿದ್ದುಪಡಿ ಮಸೂದೆ: ಬಿಜೆಪಿಯನ್ನು ಬೆಂಬಲಿಸಿದವರು ಯಾರು? ವಿರೋಧಿಸಿದವರು ಯಾರು?

ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದು, ಕಾಯ್ದೆಯಾಗಿ ಬದಲಾದ ನಂತರ ಕಾಂಗ್ರೆಸ್ ಪಕ್ಷವು ಕಾಯ್ದೆಯ ವಿರುದ್ಧ ಸುಪ್ರೀಂಕೋರ್ಟ್ ಬಾಗಿಲು ತಟ್ಟಲಿದೆ.

Congress Will Move To Supreme Court Against Citizenship Amendment Bill

ಪೌರತ್ವ ಮಸೂದೆ ಪೂರ್ಣವಾಗಿ ಅಸಾಂವಿಧಾನಿಕ ಎಂದು ಟೀಕಿಸಿರುವ ಕಾಂಗ್ರೆಸ್, ನ್ಯಾಯಾಲಯದಲ್ಲಿ ಮಸೂದೆಯ ಔಚಿತ್ಯ, ಮಸೂದೆ ಒಳಗೊಂಡಿರುವ ಧರ್ಮ ತಾರತಮ್ಯದ ಕುರಿತಾಗಿ ಪ್ರಶ್ನೆ ಮಾಡಲಿದೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ

ಈ ಬಗ್ಗೆ ಖಚಿತ ಮಾಹಿತಿ ನೀಡಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, 'ಮಸೂದೆಗೆ ರಾಷ್ಟ್ರಪತಿ ಅಂಕಿತ ಬಿದ್ದ ನಂತರ ನಾವು ನ್ಯಾಯಾಲಯದಲ್ಲಿ ಮಸೂದೆಯನ್ನು ಪ್ರಶ್ನೆ ಮಾಡುತ್ತೇವೆ' ಎಂದಿದ್ದಾರೆ.

'ಈಶಾನ್ಯ ರಾಜ್ಯಗಳ ಹಲವು ಸಂಘಟನೆಗಳು ನಮ್ಮನ್ನು ಸಂಪರ್ಕಿಸಿದ್ದು, ಕಾನೂನು ಸಲಹೆಗೆ ಸಹ ಮನವಿ ಮಾಡಿವೆ ಮತ್ತು ಮಸೂದೆ ಕುರಿತು ಸುಪ್ರೀಂಕೋರ್ಟ್‌ ನಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿವೆ' ಎಂದು ಹೇಳಿದ್ದಾರೆ.

English summary
Congress will move to supreme court questioning citizenship amendment bill after president's approve to bill.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X