ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ ಸಂಪೂರ್ಣ ಶಕ್ತಿ ಬಳಕೆ: ರಾಹುಲ್ ಗಾಂಧಿ
ಜಮ್ಮು,ಜನವರಿ23: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನದ ಬೇಡಿಕೆಯು ಕಣಿವೆ ರಾಜ್ಯದ ಅತಿದೊಡ್ಡ ವಿಚಾರವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅದನ್ನು ಮರುಸ್ಥಾಪಿಸಲು ತನ್ನ ಸಂಪೂರ್ಣ ಶಕ್ತಿಯನ್ನು ಬಳಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಸೋಮವಾರ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಜನರನ್ನು ಭೇಟಿಯಾದ ರಾಹುಲ್ ಗಾಂಧಿ, ಕಾಶ್ಮೀರ ದೇಶದಲ್ಲಿಯೇ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ನಿಮ್ಮನ್ನು ಮತ್ತು ನಿಮ್ಮ ರಾಜ್ಯತ್ವ ಬೇಡಿಕೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು, ಕಾಂಗ್ರೆಸ್ ತನ್ನ ಸಂಪೂರ್ಣ ಅಧಿಕಾರವನ್ನು ಬಳಸುತ್ತದೆ ಎಂದು ರಾಹುಲ್ ಗಾಂಧಿ ಅವರು ಇಲ್ಲಿನ ಸತ್ವಾರಿ ಚೌಕ್‌ನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದರು.

ರಾಜ್ಯತ್ವವೇ ನಿಮ್ಮ ದೊಡ್ಡ ಬೇಡಿಕೆ. ರಾಜ್ಯತ್ವದಷ್ಟು ದೊಡ್ಡ ಬೇಡಿಕೆ ಮತ್ತೊಂದು ಇಲ್ಲ. ನಿಮ್ಮ ಹಕ್ಕನ್ನು ಕಿತ್ತುಕೊಳ್ಳಲಾಗಿದೆ. ಆದರೆ ನಿಮ್ಮ ಮಾತು ಸರ್ಕಾರಕ್ಕೆ ಕೇಳಿಸುತ್ತಿಲ್ಲ. ಕಾಶ್ಮೀರದಲ್ಲಿ ಎಲ್ಲಾ ವ್ಯಾಪಾರವನ್ನು ಹೊರಗಿನವರು ನಡೆಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನತೆ ಅಸಹಾಯಕರಾಗಿ ಕುಳಿತು ನೋಡುತಿದ್ದಾರೆ ಎಂದರು.
ಜಮ್ಮು ಮತ್ತು ಕಾಶ್ಮೀರವು ದೇಶದಲ್ಲೇ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಯುವಕರು ಎಂಜಿನಿಯರ್, ವೈದ್ಯರು ಮತ್ತು ವಕೀಲರಾಗಲು ಹಾತೊರೆಯುತ್ತಾರೆ ಆದರೆ ಅವರಿಗೆ ಆ ಸೌಲಭ್ಯಗಳು ಸಿಗುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ಈ ಹಿಂದೆ (ಉದ್ಯೋಗ ಪಡೆಯಲು) ಇನ್ನೊಂದು ಮಾರ್ಗವಿತ್ತು. ಅದು ಸೇನೆಯಲ್ಲಿತ್ತು. ಬಿಜೆಪಿ ಪರಿಚಯಿಸಿದ ಅಗ್ನಿವೀರ್ ಎಂಬ ಹೊಸ ಯೋಜನೆಯಿಂದ ಈಗ ಅದನ್ನುಮುಚ್ಚಲಾಗಿದೆ. ಆ ಮಾರ್ಗವೂ ಈಗ ಮುಚ್ಚಲ್ಪಟ್ಟಿದೆ ಎಂದು ಅವರು ಹೇಳಿದರು.
ಆಗಸ್ಟ್ 2019 ರಲ್ಲಿ, ಎನ್‌ಡಿಎ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿತು.

ರಾಹುಲ್ ಗಾಂಧಿ ಭೇಟಿ ಮಾಡಿದ ಕಾಶ್ಮೀರಿ ಪಂಡಿತರ ನಿಯೋಗ
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಕಾಶ್ಮೀರಿ ಪಂಡಿತರ ನಿಯೋಗವು ಸೋಮವಾರ ಸಾಂಬಾ ಜಿಲ್ಲೆಯಲ್ಲಿ ಭೇಟಿ ಮಾಡಿದ್ದು, ಭಯೋತ್ಪಾದಕರ ಉದ್ದೇಶಿತ ಹತ್ಯೆಗಳು ಮತ್ತು ಪ್ರಧಾನ ಮಂತ್ರಿಯ ಪ್ಯಾಕೇಜ್ ಅಡಿಯಲ್ಲಿ ಕೆಲಸ ಮಾಡುವವರ ಪ್ರತಿಭಟನೆ ಸೇರಿದಂತೆ ಹಲವು ವಿಷಯಗಳನ್ನ ರಾಹುಲ್ ಗಾಂಧಿಯವರಿಗೆ ವಿವರಿಸಲಾಗಿದೆ.
ಇನ್ನೂ ಕಾಶ್ಮೀರಿ ಪಂಡಿತರ ನಿಯೋಗದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಅಮಿತ್ ಕೌಲ್, ಜಮ್ಮು, ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಇರುವ ತಮ್ಮ ಜಾಗ್ತಿ ನಗರಕ್ಕೆ ರಾಹುಲ್ ಗಾಂಧಿಯನ್ನು ಆಹ್ವಾನಿಸಿದ್ದಾರೆ. ಹಾಗೂ ರಾಹುಲ್ ಗಾಂಧಿಯವರು ಕಾಶ್ಮೀರಕ್ಕೆ ಹೋಗುವ ಮಾರ್ಗದಲ್ಲಿ ಸಮುದಾಯವನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ನಾವು ರಾಹುಲ್ ಗಾಂಧಿಯವರೊಂದಿಗೆ ಉತ್ತಮ ಸಂವಾದ ನಡೆಸಿದ್ದೇವೆ ಮತ್ತು ಸಮುದಾಯದ ಸಮಸ್ಯೆಗಳ ಬಗ್ಗೆ ಅವರಿಗೆ ವಿವರಿಸಿದ್ದೇವೆ. ವಿಶೇಷವಾಗಿ ಮನಮೋಹನ್ ಸಿಂಗ್ ನೇತೃತ್ವದ ಹಿಂದಿನ ಯುಪಿಎ ಸರ್ಕಾರವು ಪ್ರಧಾನ ಮಂತ್ರಿ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗಗಳನ್ನು ಒದಗಿಸಿದ ಬಗ್ಗೆ ಮಾತನಾಡಿದ್ದೇವೆ. ಅವರು ಕಳೆದ ಆರು ತಿಂಗಳಿನಿಂದ ಜಮ್ಮುವಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಅವರ ಸಂಬಳವನ್ನು ತಡೆಹಿಡಿಯಲಾಗಿದೆ ಎಂದು ಕೌಲ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.
ಸುಮಾರು 4,000 ಕಾಶ್ಮೀರಿ ವಲಸಿಗ ಪಂಡಿತರು 2008ರಲ್ಲಿ ಘೋಷಿಸಲಾದ ಪ್ರಧಾನ ಮಂತ್ರಿಯವರ ಉದ್ಯೋಗ ಪ್ಯಾಕೇಜ್ ಅಡಿಯಲ್ಲಿ ಆಯ್ಕೆಯಾದ ನಂತರ ಕಣಿವೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಪ್ಯಾಕೇಜ್ ಎರಡು ಪ್ರಮುಖ ಅಂಶಗಳನ್ನು ಹೊಂದಿದೆ. ಅದೆಂದರೆ ಸಮುದಾಯದ ಯುವಕರಿಗೆ 6,000 ಉದ್ಯೋಗಗಳು ಮತ್ತು ನೇಮಕಗೊಂಡ ಉದ್ಯೋಗಿಗಳಿಗೆ ಅನೇಕ ವಸತಿ ಘಟಕಗಳನ್ನು ನಿರ್ಮಿಸುವುದಾಗಿದೆ.
ಆದರೆ, ತಮ್ಮ ಸಹೋದ್ಯೋಗಿಗಳಲ್ಲಿ ಒಬ್ಬರಾದ ರಾಹುಲ್ ಭಟ್ ಅವರನ್ನು ಕಳೆದ ವರ್ಷ ಮೇ 12 ರಂದು ಬುಡ್ಗಾಮ್ ಜಿಲ್ಲೆಯ ಅವರು ಕೆಲಸ ಮಾಡುತ್ತಿದ್ದ ಕಚೇರಿಯೊಳಗೆ ಭಯೋತ್ಪಾದಕರು ಗುಂಡಿಕ್ಕಿ ಕೊಂದ ನಂತರ ಅನೇಕ ಉದ್ಯೋಗಿಗಳು ಜಮ್ಮುವಿಗೆ ಓಡಿಹೋದರು. ಇದನ್ನು ಉದ್ದೇಶಿತ ಹತ್ಯೆ ಎನ್ನಲಾಗಿದೆ. ಹೀಗಾಗಿ, ಕಣಿವೆಯಿಂದ ತಮ್ಮನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದಾರೆ.












Click it and Unblock the Notifications