ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಮೋದಿಯವರ ಸೋಲು: ಜೈರಾಮ್ ರಮೇಶ್

ನವದೆಹಲಿ, ಮೇ 13: ಕಾಂಗ್ರೆಸ್‌ ಗೆಲುವೇ ಪ್ರಧಾನಿ ಮೋದಿಯವರ ಸೋಲು. ಇದು 2024 ರ ಸಾರ್ವತ್ರಿಕ ಚುನಾವಣೆಯ ನಂತರ ಕೇಂದ್ರದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್‌ಗೆ ದಾರಿ ಮಾಡಿಕೊಡಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶುಕ್ರವಾರ ಹೇಳಿದ್ದಾರೆ.

ಕರ್ನಾಟಕದಲ್ಲಿ 'ಕಾಂಗ್ರೆಸ್' ಗೆಲುವು ಪ್ರಧಾನಿ ಮೋದಿಯವರ ಸೋಲಾಗಲಿದೆ. ಏಕೆಂದರೆ ಕರ್ನಾಟಕದಲ್ಲಿ ಅವರನ್ನು ಹೊರತುಪಡಿಸಿ ಯಾರೂ ಪ್ರಚಾರ ಮಾಡಲಿಲ್ಲ. (ಬಿಜೆಪಿಯ) ಕರ್ನಾಟಕದ ಸೋಲಿನ ನಂತರ, 2024 ರಲ್ಲಿ ಕಾಂಗ್ರೆಸ್‌ಗೆ ದೆಹಲಿಯ ಬಾಗಿಲು ತೆರೆಯುತ್ತದೆ ಎಂದು ಹೇಳಿದ್ದಾರೆ.

Congress win in Karnataka, Modis defeat: Jairam Ramesh

ಇದಕ್ಕೂ ಮುನ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ತಮ್ಮ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದೆ. ಕಾಂಗ್ರೆಸ್ ಅತ್ಯಧಿಕ ಬಹುಮತದೊಂದಿಗೆ ಗೆಲ್ಲಲಿದೆ. ಕಾಂಗ್ರೆಸ್‌ನಲ್ಲಿ ವಿಶ್ವಾಸ ಮೂಡಿಸಿದ ಎಲ್ಲಾ 6.5 ಕೋಟಿ ಕನ್ನಡಿಗರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು.

ಇಲ್ಲಿನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರು ಜಿಲ್ಲಾವಾರು ಫಲಿತಾಂಶದ ಬಗ್ಗೆ ಚರ್ಚಿಸಿ ನಿರೀಕ್ಷಿತ ವಿಜೇತರ ಪಟ್ಟಿಯನ್ನು ತಯಾರಿಸಿದ್ದಾರೆ ಎನ್ನಲಾಗಿದೆ. ಮೇ 10 ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+