ಕಾಂಗ್ರೆಸ್ CWC ಸಭೆಯಲ್ಲಿ ನಡೆದ ಚರ್ಚೆಗಳೇನು?

ನವದೆಹಲಿ, ಮಾರ್ಚ್ 13; ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಮಹತ್ವದ ಸಭೆ ಮುಕ್ತಾಯವಾಗಿದೆ. ಎಐಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಈ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಭಾನುವಾರ ತುರ್ತು, ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನವದೆಹಲಿಯಲ್ಲಿ ನಡೆಯುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಕಾಂಗ್ರೆಸ್‌ನ ಹಿರಿಯ ನಾಯಕರು ಬೆಳಗ್ಗೆ ಒಂದು ಸುತ್ತಿನ ಸಭೆ ನಡೆಸಿದರು.

CWC Meeting

ಎಐಸಿಸಿಗೆ ಹೊಸ ಸಾರಥಿ ಆಯ್ಕೆ ನಡೆಯಲಿದೆ ಎಂಬ ಸುದ್ದಿಗಳು ಬಲವಾಗಿ ಹಬ್ಬಿದ್ದವು. ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಆ ರೀತಿಯ ಯಾವುದೇ ಬೆಳವಣಿಗೆಗಳು ನಡೆಯಲಿಲ್ಲ.

ಇನ್ನು ಸಿಡಬ್ಲ್ಯೂಸಿ ಸಭೆ ಆರಂಭಕ್ಕೂ ಮುನ್ನ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, "ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು. ಕಳೆದ ಮೂರು ದಶಕದಲ್ಲಿ ಗಾಂಧಿ ಕುಟುಂಬದ ಯಾವೊಬ್ಬ ಸದಸ್ಯರು ಪ್ರಧಾನಿ, ಸಚಿವರಾಗಿಲ್ಲ. ಕಾಂಗ್ರೆಸ್ ಒಟ್ಟಾಗಿರಲು ಗಾಂಧಿ ಕುಟುಂಬದ ಅಗತ್ಯವಿದೆ" ಎಂದರು.

ಕಾಂಗ್ರೆಸ್ ಸಭೆಯ ತಾಜಾ ಮಾಹಿತಿಗಳು

* ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರ ನೇತೃತ್ವದಲ್ಲಿ ಈ ಸಭೆ ನಡೆಯಿತು.

* ಜಿ3 ನಾಯಕರು ಮುಕುಲ್ ವಾಸ್ನಿಕ್‌ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಒತ್ತಾಯಿಸಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ವಿವರವಾದ ಚರ್ಚೆ ನಡೆಯಿತು.

* 2021ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಆದರೆ ಈಗ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಈ ಮಹತ್ವದ ಸಭೆ ನಡೆಯುತ್ತಿದೆ.

* ಕಾಂಗ್ರೆಸ್‌ನಲ್ಲಿ ಪರಿಪೂರ್ಣ ಬದಲಾವಣೆ ತರಲು ಸಮಿತಿಯೊಂದನ್ನು ರಚನೆ ಮಾಡಲಾಗಿತ್ತು. ಜುಲೈನಲ್ಲಿ ಈ ಸಮಿತಿ ಸೋನಿಯಾ ಗಾಂಧಿಗೆ ವರದಿ ನೀಡಿತ್ತು. ಈ ವರದಿ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯಲಿದೆ.

* ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಉಸ್ತುವಾರಿಗಳಾಗಿದ್ದವರು ಸೇರಿದಂತೆ 68 ಸದಸ್ಯರು ಸೇರಿದಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+