Meghalaya Elections; ಮಾ. 7ರಂದು ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ
ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ನೇತೃತ್ವದಲ್ಲಿ ಮೇಘಾಲಯದಲ್ಲಿ ಸರ್ಕಾರ ರಚನೆಯಾಗಲಿದೆ. ಮಾರ್ಚ್ 7ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ನಡೆಯಲಿದೆ.
ಶಿಲ್ಲಾಂಗ್, ಫೆಬ್ರವರಿ 03; ಮೇಘಾಲಯವಿಧಾನಸಭೆ ಚುನಾವಣೆಯಲ್ಲಿ ಎನ್‌ಪಿಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾನ್ರಾಡ್ ಸಂಗ್ಮಾ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ. ಮಾರ್ಚ್ 7ರ ಮಂಗಳವಾರ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. 2ನೇ ಬಾರಿಗೆ ಕಾನ್ರಾಡ್ ಸಂಗ್ಮಾ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಾರೆ.
ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೊಸ ಸರ್ಕಾರ ರಚನೆ ಮಾಡಲು ಅವಕಾಶ ನೀಡುವಂತೆ ಮನವಿ ಸಲ್ಲಿಕೆ ಮಾಡಿದರು. ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಆಗಮಿಸುವ ನಿರೀಕ್ಷೆ ಇದೆ.

ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‌ಪಿಪಿ ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ 26 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿ ಗೆದ್ದಿರುವ ಬಿಜೆಪಿ ಸರ್ಕಾರ ರಚನೆ ಮಾಡಲು ಎನ್‌ಪಿಪಿ ಬೆಂಬಲಿಸಿದೆ. ತಮ್ಮ ಬಳಿ ಸರ್ಕಾರ ರಚನೆ ಮಾಡಲು 32 ಶಾಸಕರ ಬಲವಿದೆ ಎಂದು ಕಾನ್ರಾಡ್ ಸಂಗ್ಮಾ ರಾಜ್ಯಪಾಲರಿಗೆ ಪತ್ರವನ್ನು ನೀಡಿದ್ದಾರೆ.
ಕಾನ್ರಾಡ್ ಸಂಗ್ಮಾ 2018ರ ಚುನಾವಣೆ ಬಳಿಕ ಎನ್‌ಪಿಪಿ ನೇತೃತ್ವದಲ್ಲಿ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಮೈತ್ರಿಕೂಟ ರಚನೆ ಮಾಡಿಕೊಂಡು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಎನ್‌ಪಿಪಿ ಅತಿದೊಡ್ಡ ಪಕ್ಷವಾಗಿದ್ದು, ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಕಾನ್ರಾಡ್ ಸಂಗ್ಮಾ ಚುನಾವಣೆಯಲ್ಲಿಯೂ ದಕ್ಷಿಣ ತುರಾ ಕ್ಷೇತ್ರದಲ್ಲಿ 13,342 ಮತಗಳನ್ನು ಪಡೆದು,5016 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಚುನಾವಣೆ ಬಾಕಿ ಇದೆ; ಮೇಘಾಲಯ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 60. ಫೆಬ್ರವರಿ 27ರಂದು 59 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಗುರುವಾರ ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು. ಶಿಲ್ಲಾಂಗ್ ವಿಧಾನಸಭಾ ಕ್ಷೇತ್ರದ ಯುನೈಟೆಡ್ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಎಚ್. ಡಿ. ಆರ್. ಲಿಂಗ್ಡೊ ಫೆಬ್ರವರಿ 20ರಂದು ಮೃತಪಟ್ಟ ಕಾರಣ ಆ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ಇನ್ನೂ ಚುನಾವಣೆ ದಿನಾಂಕ ನಿಗದಿಯಾಗಿಲ್ಲ.
59 ಕ್ಷೇತ್ರಗಳ ಪೈಕಿ 26ರಲ್ಲಿ ಎನ್‌ಪಿಪಿ ಪಕ್ಷ ಜಯಗಳಿಸಿದೆ. ಕಾನ್ರಾಡ್ ಸಂಗ್ಮಾ ನೇತೃತ್ವದಲ್ಲಿ 26 ಶಾಸಕರು ಸಹ ಶುಕ್ರವಾರ ರಾಜಭವನಕ್ಕೆ ಭೇಟಿ ನೀಡಿದ್ದರು. ಬುಡಕಟ್ಟು ಸಮುದಾಯ, ಕ್ರೈಸ್ತರ ಪ್ರಾಬಲ್ಯವಿರುವ ರಾಜ್ಯದಲ್ಲಿ ಎನ್‌ಪಿಪಿ ನೇತೃತ್ವದಲ್ಲಿ ಮತ್ತೊಮ್ಮೆ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾನ್ರಾಡ್ ಸಂಗ್ಮಾ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ.
2023ರ ಚುನಾವಣೆಯಲ್ಲಿ ಎನ್‌ಪಿಪಿ 26, ಯಡಿಪಿ 11, ಟಿಎಂಸಿ 5, ಕಾಂಗ್ರೆಸ್ 5, ಬಿಜೆಪಿ 2, ಹೆಚ್‌ಎಸ್‌ಪಿಡಿಪಿ 2, ಪಿಡಿಎಫ್ 2, ವಿಐಪಿ 4, ಇಬ್ಬರು ಪಕ್ಷೇತರರು ಜಯಗಳಿಸಿದ್ದಾರೆ.
ಟಿಎಂಸಿಗೆ ಮುಖಭಂಗ; ಮೇಘಾಲಯದ ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಟಿಎಂಸಿ ನಾಯಕ ಮುಕುಲ್ ಸಂಗ್ಮಾ ಎನ್‌ಪಿಪಿ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಅಂತಿಮ ಫಲಿತಾಂಶದಲ್ಲಿ ಟಿಎಂಸಿ 5 ಸ್ಥಾನಗಳಲ್ಲಿ ಮಾತ್ರ ಜಯಗಳಿಸಲು ಸಾಧ್ಯವಾಯಿತು. ಕಾಂಗ್ರೆಸ್‌ನಲ್ಲಿದ್ದ ಮುಕುಲ್ ಸಂಗ್ಮಾ 2021ರಲ್ಲಿ ಕಾಂಗ್ರೆಸ್ ತೊರೆದು ಟಿಎಂಸಿ ಸೇರಿದ್ದರು. ಇದು ಈ ಚುನಾವಣೆಯಲ್ಲಿ ಪಕ್ಷಕ್ಕೆ ಬಲ ತಂದುಕೊಡಲಿದೆ ಎಂದು ಅಂದಾಜಿಸಲಾಗಿತ್ತು. ಗುರುವಾರ ನಡೆದ ಮತ ಎಣಿಕೆಯಲ್ಲಿ ಮೊದಲ ಎರಡು ಸುತ್ತುಗಳಲ್ಲಿ ಟಿಎಂಸಿ ಎನ್‌ಪಿಪಿಗೆ ಪ್ರಬಲ ಪೈಪೋಟಿ ನೀಡಿತು. ಬಳಿಕ ಎನ್‌ಪಿಪಿ ಸ್ಪಷ್ಟ ಮುನ್ನಡೆ ಪಡೆದುಕೊಂಡಿತು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications