Get Updates
Get notified of breaking news, exclusive insights, and must-see stories!

Meghalaya Election Result 2023 : ಸ್ಪಷ್ಟ ಬಹುಮತದತ್ತ ಸಾಗಿದ ಎನ್‌ಪಿಪಿ

ಮೇಘಾಲಯ ವಿಧಾನಸಭೆ ಚುನಾವಣೆ 2023ರ ಮತ ಎಣಿಕೆಯ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‌ಪಿಪಿ ಸ್ಪಷ್ಟ ಬಹುಮತದತ್ತ ಸಾಗಿದೆ.

ಶಿಲ್ಲಾಂಗ್, ಮಾರ್ಚ್ 02; ಮೇಘಾಲಯ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಎನ್‌ಪಿಪಿ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಸಹ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಟಿಎಂಸಿ ಎನ್‌ಪಿಪಿಗೆ ಮೊದಲು ಪೈಪೋಟಿ ನೀಡಿತ್ತು. ಆದರೆ ಈಗ ಪಕ್ಷ ಮುನ್ನಡೆಯಲ್ಲಿರುವ ಸಂಖ್ಯೆ ಒಂದಂಕಿಗೆ ಕುಸಿದಿದೆ.

ಮೇಘಾಲಯ ರಾಜ್ಯದ ವಿಧಾನಸಭೆಯ ಒಟ್ಟು ಬಲ 60. ಆದರೆ 59 ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆದಿದೆ. ಬುಡಕಟ್ಟು ಮತ್ತು ಕ್ರೈಸ್ತ ಸಮುದಾಯದ ಪ್ರಾಬಲ್ಯವಿರುವ ಚಿಕ್ಕ ರಾಜ್ಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮೈತ್ರಿಕೂಟ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ.

Conrad Sangmas NPP Is Maintaining Lead In 31 Seats

ಗುರುವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಸದ್ಯದ ಮಾಹಿತಿ ಪ್ರಕಾರ ಎನ್‌ಪಿಪಿ 26, ಬಿಜೆಪಿ ಮತ್ತು ಕಾಂಗ್ರೆಸ್ ತಲಾ 4, ಯುಡಿಪಿ 7 ಮತ್ತು ಟಿಎಂಸಿ 7 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ. 59 ಸ್ಥಾನಗಳಿಗೆ ಚುನಾವಣೆ ನಡೆದಿರುವ ಕಾರಣ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 30. ಎನ್‌ಪಿಪಿ 26 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದು ಸ್ಪಷ್ಟ ಬಹುಮತದತ್ತ ಸಾಗಿದೆ.

ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಎನ್‌ಪಿಪಿ ರಾಜ್ಯದಲ್ಲಿ ಎರಡನೇ ಬಾರಿಗೆ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಕಳೆದ ಚುನಾವಣೆ ಬಳಿಕ ರಚನೆಯಾಗಿದ್ದ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ (ಎಂಡಿಎ) ಮೈತ್ರಿಕೂಟ ಈ ಬಾರಿ ಒಂದಾಗಿ ಚುನಾವಣೆಗೆ ಹೋಗಿಲ್ಲ. ಎನ್‌ಪಿಪಿ ಜೊತೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಘೋಷಣೆ ಮಾಡಿದ್ದ ಬಿಜೆಪಿ ಎಲ್ಲಾ 60 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

npp news

ಕಳೆದ ಬಾರಿ ಎನ್‌ಪಿಪಿ ಸರ್ಕಾರ ಬೆಂಬಲಿಸಿದ್ದ ಪಕ್ಷಗಳು ಈ ಬಾರಿ ಸ್ವತಂತ್ರವಾಗಿ ಅಧಿಕಾರ ಪಡೆಯುವ ನಿರೀಕ್ಷೆಯಲ್ಲಿದ್ದವು. ಮೈತ್ರಿಕೂಟ ಬೆಂಬಲಿಸಿದ್ದ ಯುಡಿಪಿ ಸಹ 7 ಕ್ಷೇತ್ರದಲ್ಲಿ ಮುನ್ನಡೆ ಪಡೆದಿದ್ದು, ಎನ್‌ಪಿಪಿಗೆ ಬಹುಮತಕ್ಕೆ ಕೊರತೆ ಉಂಟಾದರೆ ಕೈ ಜೋಡಿಸುವ ನಿರೀಕ್ಷೆ ಇದೆ. ಮಧ್ಯಾಹ್ನ 1.30ರ ವೇಳೆಗೆ ರಾಜ್ಯದ ಚುನಾವಣೆಯ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.

2018ರ ಚುನಾವಣೆಯಲ್ಲಿಯೂ ನಾವು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಜೊತೆ ಮೈತ್ರಿ ಮಾಡಿಕೊಂಡಿರಲಿಲ್ಲ. ಈ ಬಾರಿಯೂ ಮೈತ್ರಿ ಮಾಡಿಕೊಂಡಿಲ್ಲ. ಎನ್‌ಪಿಪಿ ಸಹ ಸ್ವತಂತ್ರವಾಗಿ ಕಣಕ್ಕಿಳಿದಿದೆ, ನಾವು ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೇವೆ. ಎನ್‌ಪಿಪಿ ಕಳೆದ ಐದು ವರ್ಷಗಳಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+