ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.26ರಿಂದ ಡಿ.6ರವರೆಗೆ ಬಿಜೆಪಿಯಿಂದ ಸಂವಿಧಾನ ಗೌರವಿಸಿ ಅಭಿಯಾನ

|
Google Oneindia Kannada News

ನವದೆಹಲಿ, ನವೆಂಬರ್ 23: ದೇಶಾದ್ಯಂತ ಪ್ರತಿವರ್ಷ ನವೆಂಬರ್ 26ರಂದು ಸಂವಿಧಾನ ದಿನ ಆಚರಣೆ ಮಾಡಲಾಗುತ್ತದೆ. ಅಂದು ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಉದ್ದೇಶಿಸಿ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಮಾತನಾಡಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂವಿಧಾನದ ಪೀಠಿಕೆ ಓದಲಿದ್ದಾರೆ. ಈ ಸಂದರ್ಭದಲ್ಲಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದಲಿದ್ದಾರೆ. 22 ಬಾಷೆಗಳಲ್ಲಿ ಸಂವಿಧಾನದ ಪೀಠಿಕೆ ಇರಲಿದೆ. ಎಲ್ಲಾ ಭಾಷೆಯಲ್ಲಿ ಸಂವಿಧಾನ ಪೀಠಿಕೆಗಳು ಆನ್‌ಲೈನ್‌ನಲ್ಲಿ ಸಿಗಲಿದೆ ಎಂದರು.

Constitution Day 2021: Campaigning By BJP Honor The Indias Constitution From Nov 26 To Dec 6

ಸಂವಿಧಾನ ಪೀಠಿಕೆ ಓದುವ ಅಭಿಯಾನದಲ್ಲಿ ಜನರು ಭಾಗವಹಿಸಬಹುದಾಗಿದ್ದು, ಜನರು ಸಂವಿಧಾನದ ಪೀಠಿಕೆ ಓದಿ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬಹುದು. ಅಪ್‌ಲೋಡ್ ಮಾಡಿದ ಬಳಿಕ‌ ಸರ್ಟಿಫಿಕೆಟ್ ಕೂಡ ಸಿಗಲಿದೆ. ಸಂವಿಧಾನಕ್ಕೆ ಸಂಬಂಧಿಸಿದ‌ ಕ್ವಿಜ್ ಇರಲಿದೆ. ಜನರು ಕ್ವಿಜ್‌ನಲ್ಲಿ ಭಾಗವಹಿಸಬಹುದಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು.

ಕರ್ನಾಟಕದಲ್ಲೂ ಸಂವಿಧಾನ ಗೌರವ ಅಭಿಯಾನ
ಇದೇ ವಿಷಯವಾಗಿ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ, ನವೆಂಬರ್ 26ರಿಂದ ಡಿಸೆಂಬರ್ 6ರವರೆಗೆ ಸಂವಿಧಾನ ಗೌರವ ಅಭಿಯಾನವನ್ನು ಕರ್ನಾಟಕ ಬಿಜೆಪಿ ಹಮ್ಮಿಕೊಂಡಿದೆ. ಕೇಂದ್ರ ಎಸ್ಸಿ ಮೋರ್ಚಾ ಈ ಕಾರ್ಯಕ್ರಮ ಕೊಟ್ಟಂತೆ ರಾಜ್ಯದಲ್ಲೂ ಈ ಕಾರ್ಯಕ್ರಮ ನಡೆಸುತ್ತೇವೆ ಎಂದರು.

Constitution Day 2021: Campaigning By BJP Honor The Indias Constitution From Nov 26 To Dec 6

ನವೆಂಬರ್ 26ರಿಂದ ಡಿಸೆಂಬರ್ 6ರವರೆಗೆ ನಡೆಯಲಿದೆ. 26 ರಂದು 27 ಜಿಲ್ಲೆಗಳಲ್ಲಿ ಪಾದಯಾತ್ರೆ ಮೂಲಕ ಅಂಬೇಡ್ಕರ್ ಫೋಟೋ ಹಿಡಿದು, ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಸಭೆ ಮಾಡುವ ಮೂಲಕ ಸಂವಿಧಾನಕ್ಕೆ ಗೌರವ ಕೊಡುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಾರೆ ಎಂದು ಹೇಳಿದರು.

310 ಮಂಡಲಗಳಲ್ಲೂ ಡಿ.6ರವರೆಗೆ ನಿರಂತರವಾಗಿ ಅಭಿಯಾನ ನಡೆಯಲಿದೆ. ಸಂವಿಧಾನ ಪೀಠಿಕೆಯ ಕರಡನ್ನು ಓದಿ ಪ್ರತಿಜ್ಞೆ ಕೂಡ ಮಾಡುತ್ತಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಮನೆಗೆ ಭೇಟಿ, ನೀಡಿ, ಅವರನ್ನು ಗೌರವಿಸುತ್ತೇವೆ. ನವೆಂಬರ್ 27ರಿಂದ ಡಿಸೆಂಬರ್ 6ರವರೆಗೆ ದೊಡ್ಡ ಸಭೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಹುಬ್ಬಳ್ಳಿ- ಧಾರವಾಡ ಸೇರಿದಂತೆ ಬೆಂಗಳೂರಿನಲ್ಲಿ ಸಭೆಗಳು ನಡೆಯಲಿವೆ. ಡಿಸೆಂಬರ್ 6ರಂದು ಅಂಬೇಡ್ಕರ್‌ರವರ ಪರಿನಿರ್ವಾಣ ದಿನ. ಹೀಗಾಗಿ ಅಂದು ಬೆಂಗಳೂರಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಆ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು, ಅನೇಕ ಮಂತ್ರಿಗಳು ಭಾಗವಹಿಸುತ್ತಾರೆ. ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

English summary
Constitution Day 2021: Constitution Day is celebrated on November 26 every year across the country. Campaigning by BJP Honor The India's Constitution From Nov 26 To Dec 6.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X