ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: 4 ತಿಂಗಳ ಜೈಲು, 2,000 ದಂಡದ ತೀರ್ಪು, ಮಲ್ಯ ಬೇಸರ!

|
Google Oneindia Kannada News

ನವದೆಹಲಿ, ಜುಲೈ 11: ಕಳೆದ 2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಉದ್ಯಮಿ ವಿಜಯ್ ಮಲ್ಯ ಬೇಸರ ವ್ಯಕ್ತಪಡಿಸಿದ್ದಾರೆ.

Recommended Video

Vijay Mallya ಅವರಿಗೆ 4 ತಿಂಗಳು ಜೈಲು ಹಾಗೂ 2000/-ರೂ ದಂಡ ವಿಧಿಸಿದ ನ್ಯಾಯಾಲಯ | #World | OneIndia Kannada

ಬ್ರಿಟನ್‌ನಲ್ಲೇ ಐದು ವರ್ಷಗಳಿಂದ ನೆಲೆಸಿರುವ ಮಾಜಿ ಕಿಂಗ್‌ಫಿಷರ್ ಏರ್‌ಲೈನ್ಸ್ ಮುಖ್ಯಸ್ಥ ವಿಜಯ್ ಮಲ್ಯಗೆ ಸೋಮವಾರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನಾಲ್ಕು ತಿಂಗಳ ಜೈಲುಶಿಕ್ಷೆ ಮತ್ತು 2,000 ರೂಪಾಯಿ ನಗದು ದಂಡವನ್ನು ವಿಧಿಸಲಾಗಿತ್ತು.

ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠವು ನೀಡಿದ ತೀರ್ಪಿನ ಬಗ್ಗೆ ಅವರು ಹೆಚ್ಚಿನ ಪ್ರತಿಕ್ರಿಯೆ ನೀಡಲಿಲ್ಲ.

contempt case: Vijay Mallya expresses disappointment at Supreme Court verdict

"ನಾನು ಸ್ವಾಭಾವಿಕವಾಗಿ ನಿರಾಶೆಗೊಂಡಿದ್ದೇನೆ ಎಂದು ಹೇಳುವುದನ್ನು ಹೊರತುಪಡಿಸಿ ಭಾರತೀಯ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ನನಗೆ ಯಾವುದೇ ಪ್ರತಿಕ್ರಿಯೆ ಇಲ್ಲ," ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

9,000 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ: ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಪ್ರಮುಖ ಆರೋಪಿ ಆಗಿದ್ದಾರೆ. ಕಳೆದ ಮಾರ್ಚ್ 10ರಂದು ಮಲ್ಯ ವಿರುದ್ಧದ ಪ್ರಕ್ರಿಯೆಯು ಒಂದು ಡೆಡ್ ವಾಲ್ ಎಂದು ಗಮನಿಸಿದ ಸುಪ್ರೀಂಕೋರ್ಟ್ ಈ ವಿಷಯದಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಕಳೆದ 2020 ರಲ್ಲಿ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತನ್ನ ಮಕ್ಕಳಿಗೆ 40 ಮಿಲಿಯನ್ ಡಾಲರ್ ಅನ್ನು ವರ್ಗಾಯಿಸಿದ್ದಕ್ಕಾಗಿ 2017ರ ತೀರ್ಪಿನ ಮರು ಪರಿಶೀಲನೆಗಾಗಿ ವಿಜಯ್ ಮಲ್ಯ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ಅದೇ ರೀತಿ ಮಾರ್ಚ್ 2016 ರಿಂದ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವಾಸಿಸುತ್ತಿರುವ ಮಲ್ಯರನ್ನು, ಏಪ್ರಿಲ್ 18, 2017 ರಂದು ಸ್ಕಾಟ್‌ಲ್ಯಾಂಡ್ ಯಾರ್ಡ್ ಜಾರಿಗೊಳಿಸಿದ ಹಸ್ತಾಂತರ ವಾರಂಟ್ ಮೇಲೆ ಅನ್ನು ಬಂಧಿಸಲಾಗಿತ್ತು. ತದನಂತರ ಅವರು ಜಾಮೀನಿನ ಮೇಲೆ ಹೊರ ಬಂದಿದ್ದು, ಯುಕೆಯಲ್ಲೇ ಉಳಿದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

English summary
Businessman Vijay Mallya expresses disappointment at Supreme Court verdict sentencing him in a contempt case. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X