ಹಿಮಾಚಲದಲ್ಲಿ ಮುಂದುವರೆದ ಮಳೆ: ಕುಲು-ಮಂಡಿ ಹೆದ್ದಾರಿಯಲ್ಲಿ ಸಿಲುಕಿಕೊಂಡ ಪ್ರಯಾಣಿಕರು
ಹಿಮಾಚಲ ಪ್ರದೇಶದಲ್ಲಿ ಅರ್ಭಟಿಸಿದ ವರುಣ ಕೊಂಚ ಸಮಾಧಾನಗೊಂಡಿದ್ದಾನೆ. ಹಾಗಂತ ನೆಮ್ಮದಿಯಾಗಿ ಉಸಿರು ಬಿಡುವಂತಿಲ್ಲ. ಯಾಕೆಂದರೆ ಹಠಾತ್ ಪ್ರವಾಹ ಮತ್ತು ಭೂಕುಸಿತದ ನಡುವೆ ಸಾಧಾರಣದಿಂದ ಅಧಿಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಗುರುವಾರವೂ ರಾಜ್ಯದ ವಿವಿಧೆಡೆ ನಿರಂತರ ಮಳೆ ಮುಂದುವರಿದಿದೆ. ಹಲವು ಪ್ರದೇಶಗಳಲ್ಲಿ ಭೂಕುಸಿತ, ಕಟ್ಟಡ ಕುಸಿತ ಉಂಟಾಗಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ರಾಜ್ಯಕ್ಕೆ ಯಲ್ಲೋ ಅಲರ್ಟ್ ಘೋಷಿಸಿದ್ದು, ಸಾಧಾರಣದಿಂದ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

ಈ ಮಳೆ ಆಗಸ್ಟ್ 29 ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ. ಅಧಿಕ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ, ಶಿಮ್ಲಾದ ಎಲ್ಲಾ ಶಾಲೆಗಳನ್ನು ಶುಕ್ರವಾರ ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ.
ಕುಲ್ಲು-ಮಂಡಿ ಹೆದ್ದಾರಿಯಲ್ಲಿ ಸಿಲುಕಿದ ಪ್ರಯಾಣಿಕರು
ಭೂಕುಸಿತ, ರಸ್ತೆ ಕುಸಿತ, ಪ್ರವಾಹದಿಂದಾಗಿ ಹಿಮಾಚಲದಲ್ಲಿ ಹಲವಾರು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಮಳೆಗೆ ಸಂಬಂಧಿತ ಘಟನೆಗಳಿಂದಾಗಿ ರಾಜ್ಯದಲ್ಲಿ 729 ರಸ್ತೆಗಳನ್ನು ಮುಚ್ಚಲಾಗಿದೆ ಮತ್ತು 2,897 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಹಾನಿಗೊಳಗಾಗಿದ್ದರಿಂದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲ ಎಂದು ಪ್ರಧಾನ ಕಾರ್ಯದರ್ಶಿ (ಕಂದಾಯ) ಓಂಕಾರ್ ಚಂದ್ ಶರ್ಮಾ ಹೇಳಿದ್ದಾರೆ.
ಮಂಡಿಗೆ ಹೋಗುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ನೂರಾರು ಪ್ರಯಾಣಿಕರು ಪರದಾಡುವಂತಾಗಿದೆ. ಭೂಕುಸಿತ ಪೀಡಿತ ಪ್ರದೇಶದ ಎರಡೂ ಬದಿಯಲ್ಲಿ ವಾಹನಗಳ ಸಾಲು ಕಂಡುಬಂದಿದೆ.
ಕಲ್ಲು-ಮಂಡಿ ಹೆದ್ದಾರಿಯಲ್ಲಿ ಸಿಲುಕಿರುವ ಜನರನ್ನು ಹೋಟೆಲ್‌ಗಳು, ವಿಶ್ರಾಂತಿ ಗೃಹಗಳು ಮತ್ತು ಪಾಂಡೋ, ಔಟ್ ಮತ್ತು ಬಜೌರಾದಲ್ಲಿನ ವಸತಿ ಗೃಹಗಳು ಹಾಗೂ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಈ ತಿಂಗಳು ರಾಜ್ಯದಲ್ಲಿ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 120 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಸುಮಾರು 80 ಜನರು ಆಗಸ್ಟ್ 14 ರಿಂದ ಸಾವನ್ನಪ್ಪಿದ್ದಾರೆ. ಜೂನ್ 24 ರಂದು ಅಂದರೆ ಮುಂಗಾರು ಪ್ರಾರಂಭವಾದಾಗಿನಿಂದ ಒಟ್ಟು 242 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ರಾಜ್ಯವು ಇಲ್ಲಿಯವರೆಗೆ 12,000 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದೆ ಎಂದು ಮುಖ್ಯಮಂತ್ರಿ ಸುಖು ಗುರುವಾರ ಹೇಳಿದ್ದಾರೆ.
ಉತ್ತರಖಂಡದಲ್ಲೂ ಮಳೆ
ಉತ್ತರಾಖಂಡದ ತೆಹ್ರಿ ಜಿಲ್ಲೆಯ ಚಂಬಾದಲ್ಲಿ ಸೋಮವಾರ ಭೂಕುಸಿತ ಸಂಭವಿಸಿ ಇಬ್ಬರು ಮಹಿಳೆಯರು ಮತ್ತು 4 ತಿಂಗಳ ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ಇಲ್ಲಿನ ಪೊಲೀಸ್ ಠಾಣೆ ಬಳಿಯ ಟ್ಯಾಕ್ಸಿ ಸ್ಟ್ಯಾಂಡ್‌ನಲ್ಲಿ ಜನರು ಕೆಲವು ವಾಹನಗಳಲ್ಲಿ ಸಿಲುಕಿದ್ದರು. ದೊಡ್ಡ ತೊಂದರೆಗಳ ನಂತರ ಸುರಕ್ಷಿತವಾಗಿ ಹೊರತೆಗೆಯಲಾಗಿದೆ.
ಭಾರೀ ಮಳೆಯಿಂದಾಗಿ ಇಂದು ತೆಹ್ರಿ ಜಿಲ್ಲೆಯ ಭಿಲಂಗಾನ, ಚಂಬಾ, ನರೇಂದ್ರ ನಗರ, ಜೌನ್‌ಪುರದಲ್ಲಿ 1 ರಿಂದ 12 ನೇ ತರಗತಿಯ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ. ಮತ್ತೊಂದೆಡೆ ಡೆಹ್ರಾಡೂನ್, ಪೌರಿ, ನೈನಿತಾಲ್, ಚಂಪಾವತ್ ಮತ್ತು ಬಾಗೇಶ್ವರ್ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications