south vs north india: ಭಾರತದ ಅಭಿವೃದ್ಧಿಗೆ ದಕ್ಷಿಣ ಭಾರತದ್ದೇ "ಸಿಂಹಪಾಲು"
ಭಾರತದ ಅಭಿವೃದ್ಧಿಗೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಕೊಡುಗೆಗಳೇ ಹೆಚ್ಚಾಗಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಭಾರತದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿವೆ. ಈ ವಿಷಯವನ್ನು ಆರ್ಥಿಕ ಸಲಹಾ ಸಮಿತಿಯ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ದಕ್ಷಿಣ ಭಾರತದ ರಾಜ್ಯಗಳು ಜಿಡಿಪಿಯಲ್ಲಿಯಲ್ಲಿ ಗಣನೀಯ ಕೊಡುಗೆ ನೀಡಿರುವುದು ವರದಿಯಾಗಿದೆ.
ಸಮಗ್ರ ಉತ್ಪಾದನೆಯಲ್ಲಿ ದಕ್ಷಿಣ ಭಾರತದ ಕೊಡುಗೆ ಅಮೋಘವಾಗಿದೆ. ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ಆಂಧ್ರಪ್ರದೇಶದ ಕೊಡುಗೆ ಅತ್ಯುತ್ತಮವಾಗಿದೆ ಎಂದು ವರದಿಯಾಗಿದೆ. ಪಂಚರಾಜ್ಯಗಳಿಂದಲೇ ದೇಶದ ಜಿಡಿಪಿಗೆ ಶೇಕಡ 30ರಷ್ಟು ಸಿಗುತ್ತಿರುವುದು ತಿಳಿದುಬಂದಿದೆ.

ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ವಿಚಾರವಾಗಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಚರ್ಚೆಗಳಾಗುತ್ತಿವೆ. ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ವಿಷಯಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ಬರುವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ ಎನ್ನುವ ವಿಚಾರವೂ ಸಹ ಇದರಲ್ಲಿ ಪ್ರಮಖವಾಗಿದೆ.
ಭಾರತಕ್ಕೆ ಕರ್ನಾಟಕದ ಕೊಡುಗೆ ಹೇಗಿದೆ ?
ಇನ್ನು ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ರ್ನಾಟಕವು ಸಹ ಭಾರತದ ಅಭಿವೃದ್ಧಿಗೆ ಅತ್ಯುತ್ತಮವಾದ ಕೊಡುಗೆ ನೀಡಿದೆ. ಕರ್ನಾಟಕದಲ್ಲಿ ಇದೀಗ ತಲಾ ಆದಾಯ ಪ್ರಮಾಣವು 8.2ಕ್ಕೆ ಹೆಚ್ಚಳವಾಗಿದೆ. ತಲಾ ಆದಾಯದಲ್ಲೂ ಕರ್ನಾಟಕ ಟಾಪ್ 3ಸ್ಥಾನದಲ್ಲಿ ಇದೆ.
ಕರ್ನಾಟಕದ ತಲಾ ಆದಾಯ ಪ್ರಮಾಣವು ಕಳೆದ ಒಂದು ದಶಕದ ಅವಧಿಯಲ್ಲಿ ಗಣನೀಯ ಪ್ರಮಾಣದಲ್ಲಿ ಸುಧಾರಿಸಿದೆ. 2000 - 2001ರಲ್ಲಿ ತಲಾ ಆದಾಯದ ಪ್ರಮಾಣವು ಕರ್ನಾಟಕದಲ್ಲಿ ನೋಡುವುದಾದರೆ, 6.2 ಪ್ರತಿಶತ ಇತ್ತು.
ಇತ್ತೀಚಿಗೆ ಚರ್ಚೆಯಾದ ವಿಷಯಗಳು
ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ವಿಷಯಗಳಿಗೆ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ದಕ್ಷಿಣ ಭಾರತದ ಪಂಚರಾಜ್ಯಗಳಿಂದ ದೇಶದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದರೂ, ನಮ್ಮ ತೆರಿಗೆ ಪಾಲು ನಮಗೆ ಸಿಗುತ್ತಿಲ್ಲ. ನಮಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರದ ಬಜೆಟ್‌ನಲ್ಲಿಯೂ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪ ಇದೆ. ಜನಸಂಖ್ಯಾ ನಿಯಂತ್ರಣ ಹಾಗೂ ಅಭಿವೃದ್ಧಿಯ ವಿಷಯದಲ್ಲಿ ಮತ್ತು ಸಾಕ್ಷಾರತೆ ಸೇರಿದಂತೆ ವಿವಿಧ ವಿಷಯದಲ್ಲಿ ನಾವು ಸಾಕಷ್ಟು ಮುಂದಿದ್ದೇವೆ.
ಆದರೆ, ಸಮಾನ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಕರ್ನಾಟಕ ಹಾಗೂ ಕೇರಳ ಸೇರಿದಂತೆ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳು ಆರೋಪಿಸಿವೆ. ಈ ನಡುವೆ ಈ ಇಂತಹ ಒಂದು ವರದಿ ಬಂದಿದೆ. ಇನ್ನು ತೆರಿಗೆ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ, ಕರ್ನಾಟಕ, ತಮಿಳುನಾಡು ಹಾಗೂ ಕೇರಳ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪ್ರಮುಖರು ದೆಹಲಿಯಲ್ಲಿ ಈಚೆಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು.












Click it and Unblock the Notifications