ಗಣರಾಜ್ಯೋತ್ಸವ ಪರೇಡ್ ವೇಳೆ ಶೂಟ್ ಮಾಡಿಕೊಂಡ ಪೇದೆ
ಲುಧಿಯಾನ, ಜನವರಿ 26: ಇಲ್ಲಿಗೆ ಸಮೀಪ ಜಾಗರಾವ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್ ಕಾನ್ಸ್‌ಟೆಬಲ್ ಒಬ್ಬ ತನಗೆ ತಾನೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
44 ವರ್ಷದ ಮನ್‌ಜೀತ್ ಸಿಂಗ್ ಸರ್ಕಾರಿ ಶಾಲೆಯಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭದ್ರತೆ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ, ಕಾರ್ಯಕ್ರಮ ನಡೆಯುತ್ತಿರುವಂತೆಯೇ ತನ್ನ ಎಕೆ-47 ಬಂದೂಕಿನಿಂದ ಶೂಟ್ ಮಾಡಿಕೊಂಡು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.

ಮನ್‌ಜಿತ್ ಸಿಂಗ್ ಕೌಟುಂಬಿಕ ಸಮಸ್ಯೆಗಳಲ್ಲಿ ಸಿಲುಕಿ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ, ಮೃತರ ದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.












Click it and Unblock the Notifications