Get Updates
Get notified of breaking news, exclusive insights, and must-see stories!

Train accident: ಪ್ರಧಾನಿ ಮೋದಿ, ರೈಲ್ವೆ ಸಚಿವರ ರಾಜೀನಾಮೆಗೆ ಹೆಚ್ಚಿದ ಒತ್ತಡ- ನೈತಿಕ ಹೊಣೆ ಹೊರಲಿ ಎಂದ ಜನ

ನವದೆಹಲಿ, ಮೇ 03: ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ಭೀಕರ ಡಿಕ್ಕಿಯಲ್ಲಿ ಕನಿಷ್ಠ 238 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಇದು 20 ವರ್ಷಗಳಿಗಿಂತಲೂ ಹೆಚ್ಚು ಅವಧಿಯಲ್ಲಿ ದೇಶದ ಅತ್ಯಂತ ಭೀಕರ ರೈಲು ಅಪಘಾತವಾಗಿದೆ. ರೈಲು ದುರಂತದ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತಕ್ಕೆ ಒಳಗಾಗಿವೆ.

Coromandel train accident

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಮೀಪದ ಜಿಲ್ಲೆಗಳ ಎಲ್ಲಾ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೂರು ಎನ್‌ಡಿಆರ್‌ಎಫ್ ಘಟಕಗಳು, 4 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಗಳು, 15 ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ತಂಡಗಳು, 30 ವೈದ್ಯರು, 200 ಪೊಲೀಸ್ ಸಿಬ್ಬಂದಿ ಮತ್ತು 60 ಆಂಬುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ರೈಲ್ವೆ ಸಚಿವರು ಇಂದು ಬೆಳಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. 'ನಮ್ಮ ಮೊದಲ ಆದ್ಯತೆಯು ಗಾಯಗೊಂಡವರಿಗೆ ರಕ್ಷಣೆ ಮತ್ತು ವೈದ್ಯಕೀಯ ನೆರವು ನೀಡುವುದು. ವಿವರವಾದ ವಿಚಾರಣೆಯ ನಂತರವೇ ನಮಗೆ ವಿವರಗಳು ತಿಳಿಯುತ್ತವೆ. ಸ್ವತಂತ್ರ ತನಿಖೆ ನಡೆಸಲಾಗುವುದು' ಎಂದು ಅವರು ಹೇಳಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ₹ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 2 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ₹ 50,000 ಪರಿಹಾರ ನೀಡುವುದಾಗಿ ವೈಷ್ಣವ್ ಘೋಷಿಸಿದ್ದಾರೆ.

Coromandel train accident

ಪ್ರಧಾನಿ ನರೇಂದ್ರ ಮೋದಿ ಕೂಡ ಅಪಘಾತದ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ₹ 2 ಲಕ್ಷ ಮತ್ತು ಗಾಯಾಳುಗಳಿಗೆ ₹ 50,000 ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರವನ್ನು ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Coromandel train accident

ಪ್ರಧಾನಿ ಮೋದಿ, ರೈಲ್ವೆ ಸಚಿವರ ರಾಜೀನಾಮೆಗೆ ಹೆಚ್ಚಿದ ಒತ್ತಡ

ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ರಾಜೀನಾಮೆ ನೀಡಬೇಕೆಂದು ನೆಟ್ಟಿಗರು ಹಾಗೂ ವಿರೋಧ ಪಕ್ಷಗಳ ನಾಯಕರು ಒತ್ತಡ ಹಾಕುತ್ತಿದ್ದಾರೆ.

ಸಿಗ್ನಲಿಂಗ್ ವೈಫಲ್ಯವು 3 ರೈಲುಗಳು ಅಪಘಾತಕ್ಕೆ ಕಾರಣವಾಯಿತು ಎಂಬುದು ನಂಬಲಾಗದಷ್ಟು ಆಘಾತಕಾರಿಯಾಗಿದೆ. ಇವುಗಳು ಉತ್ತರಿಸಬೇಕಾದ ಗಂಭೀರ ಪ್ರಶ್ನೆಗಳಾಗಿವೆ ಎಂದು ತೃಣಮೂಲ ವಕ್ತಾರ ಸಾಕೇತ್ ಗೋಖಲೆ ಹೇಳಿದ್ದಾರೆ.

ಇದೇ ವೇಳೆ, ಪ್ರಧಾನಿ ಮೋದಿ ಹಾಗೂ ಅಶ್ವಿನಿ ವೈಷ್ಣವ್ ಅವರ ರಾಜೀನಾಮೆಗೆ ಒತ್ತಾಯಗಳು ಹೆಚ್ಚುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್, 'ಈ ಹಿಂದೆ ಇಂತಹ ಅಪಘಾತಗಳು ಸಂಭವಿಸಿದಾಗ ರೈಲ್ವೆ ಸಚಿವರು ರಾಜೀನಾಮೆ ನೀಡುತ್ತಿದ್ದರು. ಆದರೆ ಈಗ ಯಾರೂ ಮಾತನಾಡಲು ಸಿದ್ಧರಿಲ್ಲ' ಎಂದು ಪವಾರ್ ಹೇಳಿದ್ದಾರೆ.

'ಸರ್ಕಾರದ ಏಕೈಕ ಗಮನವು ಐಷಾರಾಮಿ ರೈಲುಗಳ ಮೇಲೆ ಮಾತ್ರ. ಆದರೆ ಸಾಮಾನ್ಯ ಜನರ ರೈಲುಗಳು ಮತ್ತು ಹಳಿಗಳು ನಿರ್ಲಕ್ಷಿಸಲ್ಪಟ್ಟಿವೆ. ಸರ್ಕಾರವು ಐಷಾರಾಮಿ ರೈಲುಗಳ ಮೇಲೆ ಮಾತ್ರ ಕೇಂದ್ರೀಕರಿಸುತ್ತದೆ. ರೈಲುಗಳು ಮತ್ತು ಸಾಮಾನ್ಯ ಜನರ ಹಳಿಗಳನ್ನು ನಿರ್ಲಕ್ಷಿಸಲಾಗಿದೆ. ಒರಿಸ್ಸಾ ಸಾವುಗಳು ಅದರ ಪರಿಣಾಮವಾಗಿದೆ. ರೈಲ್ವೆ ಸಚಿವರು ಹಾಗೂ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು ಎಂದು ಸಿಎಂ ನಾಯಕ ಬಿಷ್ಣೋಯ್‌ ವಿಶ್ವಂ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+