Covid-19 : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ!
ಚೀನಾದಲ್ಲಿ ಕೊರೊನಾ ಮತ್ತೆ ಹೆಚ್ಚಾದ ಬೆನ್ನಲ್ಲೆ ಭಾರತಕ್ಕೂ ಚೀನಾ ಕೊರೊನಾ ತಳಿ ಹೆಚ್ಚಾಗಿದೆ. ಕೇರಳ ಸರ್ಕಾರವು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಅಪಾಯದಲ್ಲಿರುವುದರಿಂದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರಿಗೆ ಮಾಸ್ಕ್ ಅನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಅನುಸರಿಸುವಂತೆ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಜನರಿಗೆ ನಿರ್ದೇಶನ ನೀಡಿದೆ.
ಇದಲ್ಲದೆ ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಸರ್ಕಾರ ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ನಿರ್ದೇಶನ ನೀಡಿದೆ. ಕೋವಿಡ್ ಉಲ್ಬಣದ ಬಗ್ಗೆ ಆತಂಕದ ನಡುವೆ ಹೊರಡಿಸಲಾದ ಆದೇಶವು ಮುಂದಿನ 30 ದಿನಗಳವರೆಗೆ ರಾಜ್ಯದ ಎಲ್ಲಾ ಭಾಗಗಳಲ್ಲಿ ಜಾರಿಯಲ್ಲಿರುತ್ತದೆ.

ಸೋಮವಾರ, ಭಾರತದಲ್ಲಿ 114 ಹೊಸ ಕೊರೊನವೈರಸ್ ಸೋಂಕುಗಳು ದಾಖಲಾಗಿವೆ. ಆದರೆ ಸಕ್ರಿಯ ಪ್ರಕರಣಗಳು 2,119 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ 98.80 ಪ್ರತಿಶತಕ್ಕೆ ಏರಿದೆ.

ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ ಡೇಟಾ ಪ್ರಕಾರ, US ನಲ್ಲಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ XBB.1.5 ರೂಪಾಂತರದ ಪ್ರಕರಣಗಳ ಸಂಖ್ಯೆಯು ಭಾರತದಲ್ಲಿ 26 ಕ್ಕೆ ಏರಿದೆ. ದೆಹಲಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ XBB.1.5 ರೂಪಾಂತರದ ಪ್ರಕರಣಗಳು ಕಂಡುಬಂದಿವೆ.












Click it and Unblock the Notifications