Booster Dose Price: ಕೋವಿಶೀಲ್ಡ್, ಕೋವ್ಯಾಕ್ಸಿನ್ ದರ 1200 ರಿಂದ 250 ರೂ.ಗೆ ಇಳಿಕೆ!

ನವದೆಹಲಿ, ಏಪ್ರಿಲ್ 9: ಭಾರತದಲ್ಲಿ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಯ ದರವನ್ನು ಅರ್ಧದಷ್ಟು ಕಡಿತಗೊಳಿಸಲಾಗಿದೆ. ಏಪ್ರಿಲ್ 10ರಿಂದ ದೇಶದ ಖಾಸಗಿ ಕೋವಿಡ್ -19 ಲಸಿಕೆ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್ ವಿತರಣೆ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಈಗಾಗಲೇ ಘೋಷಿಸಿದೆ.

ಖಾಸಗಿ ಕೋವಿಡ್-19 ಲಸಿಕೆ ಕೇಂದ್ರದಲ್ಲಿ ಬೂಸ್ಟರ್ ಡೋಸ್ ದರವನ್ನು 225 ರೂಪಾಯಿಗೆ ನಿಗದಿಗೊಳಿಸುವಂತೆ ಸೂಚಿಸಲಾಗಿದೆ. ಇದಕ್ಕೂ ಮೊದಲು ಕೋವಿಶೀಲ್ಡ್ ಬೂಸ್ಟರ್ ಲಸಿಕೆ ಒಂದು ಡೋಸ್ ದರವನ್ನು 600 ರೂಪಾಯಿ ಹಾಗೂ ಕೊವ್ಯಾಕ್ಸಿನ್ ಲಸಿಕೆಯ ಒಂದು ಡೋಸ್ ದರವನ್ನು 1200 ರೂಪಾಯಿಗೆ ನಿಗದಿಪಡಿಸಲಾಗಿತ್ತು.

ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನಾವಲ್ಲಾ ಮತ್ತು ಭಾರತ್ ಬಯೋಟೆಕ್ ಸಹ-ಸಂಸ್ಥಾಪಕಿ ಸುಚಿತ್ರಾ ಎಲಾ ಅವರು ಕೇಂದ್ರ ಸರ್ಕಾರದ ಜೊತೆ ನಡೆಸಿದ ಚರ್ಚೆಯ ನಂತರ ಟ್ವಿಟರ್‌ನಲ್ಲಿ ಬೆಲೆ ಕಡಿತದ ಬಗ್ಗೆ ಘೋಷಿಸಿದ್ದಾರೆ. ಭಾನುವಾರದಿಂದಲೇ ದೇಶದ ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಲಸಿಕೆಯು ಲಭ್ಯವಾಗಲಿದೆ.

Corona Vaccine: Covishield, Covaxin price cut Rs 600 to 225 per dose in private hospitals

ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಪೂನಾವಾಲಾ:

ಖಾಸಗಿ ಲಸಿಕೆ ಕೇಂದ್ರಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಲಸಿಕೆಯನ್ನು ಅನುಮತಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನಾವಾಲಾ ಸ್ವಾಗತಿಸಿದ್ದಾರೆ. ಇದು ವೈರಸ್ ವಿರುದ್ಧ ದೀರ್ಘಕಾಲಿಕ ರಕ್ಷಣೆ ನೀಡುತ್ತದೆ. ಅಲ್ಲದೇ ಪ್ರಯಾಣಕ್ಕೆ ಯಾವುದೇ ಆತಂಕವಿಲ್ಲದಂತೆ ಮಾಡುತ್ತದೆ ಎಂದು ಹೇಳಿದರು.

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ:

ಭಾರತವು 2022ರ ಜನವರಿಯಲ್ಲಿ ಆರೋಗ್ಯ ವೃತ್ತಿಪರರು, ಮೊದಲ ಶ್ರೇಣಿ ಕಾರ್ಯಕರ್ತರು ಮತ್ತು ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆ ಲಸಿಕೆಯನ್ನು ನೀಡುವುದಕ್ಕೆ ಪ್ರಾರಂಭಿಸಲಾಗಿತ್ತು. ಕಳೆದ ಮಾರ್ಚ್‌ನಲ್ಲಿ ಕೇಂದ್ರವು 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ಲಸಿಕೆ ವಿತರಿಸುವುದಕ್ಕೆ ಅವಕಾಶ ನೀಡಲಾಗಿತ್ತು. ಈ ಫಲಾನುಭವಿಗಳಿಗೆ ಬೂಸ್ಟರ್ ಡೋಸ್ ಅನ್ನು ಸರ್ಕಾರವು ಉಚಿತವಾಗಿ ನೀಡಲಾಗುತ್ತದೆ. ಆದರೆ ಏಪ್ರಿಲ್ 10ರಂದು ಪ್ರಾರಂಭವಾಗಲಿರುವ ವಯಸ್ಕರ ವಿಷಯದಲ್ಲಿ ಹೀಗೆ ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡಲಾಗುವುದಿಲ್ಲ.

Corona Vaccine: Covishield, Covaxin price cut Rs 600 to 225 per dose in private hospitals

2ನೇ ಡೋಸ್ ಪಡೆದು 9 ತಿಂಗಳ ನಂತರ ಬೂಸ್ಟರ್ ಡೋಸ್:

ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಘೋಷಿಸಿದೆ. 18 ವರ್ಷ ಮೇಲ್ಪಟ್ಟ ನೀವು ಎರಡನೇ ಡೋಸ್ ಪಡೆದು 9 ತಿಂಗಳು ಆಗಿದ್ದರೆ, ಬೂಸ್ಟರ್ ಡೋಸ್ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತೀರಿ.

ಭಾರತದಲ್ಲಿ ಶೇ.96ರಷ್ಟು ಮಂದಿಗೆ ಮೊದಲ ಡೋಸ್:

ದೇಶದಲ್ಲಿ 15 ವರ್ಷ ಮೇಲ್ಪಟ್ಟವರಲ್ಲಿ ಶೇ.96ರಷ್ಟು ಮಂದಿ ಮೊದಲ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಅದೇ ರೀತಿ 15 ವರ್ಷ ಮೇಲ್ಪಟ್ಟ ಶೇ.83ರಷ್ಟು ಫಲಾನುಭವಿಗಳು ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಕೊವಿಡ್-19 ಲಸಿಕೆ ವಿತರಣೆ ಪ್ರಾರಂಭವಾಗಿ 447 ದಿನಗಳೇ ಕಡೆದಿದ್ದು, ಇದುವರೆಗೂ 185 ಕೋಟಿ ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೂ ಎಷ್ಟು ಜನರಿಗೆ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗುತ್ತಿರುವುದರ ಮಧ್ಯೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗಿದೆ. ದೇಶದಲ್ಲಿ ಇದುವರೆಗೂ 185,36,60,641 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಈ ನಡುವೆ 99,19,34,228 ಮಂದಿಗೆ ಮೊದಲ ಡೋಸ್, 83,76,84,372 ಜನರಿಗೆ ಎರಡನೇ ಡೋಸ್ ಹಾಗೂ 2,40,42,041 ಬೂಸ್ಟರ್ ಡೋಸ್ ವಿತರಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+