ಕೇಂದ್ರದ ಸರ್ವಪಕ್ಷ ಸಭೆಯಲ್ಲಿ ಮಾಜಿ ಪ್ರಧಾನಿ H.D. ದೇವೇಗೌಡ ಹಾಜರು

ನವದೆಹಲಿ, ಡಿಸೆಂಬರ್.04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಸರ್ವಪಕ್ಷಗಳ ಸಭೆಯಲ್ಲಿ ದೇಶದ ಮಾಜಿ ಪ್ರಧಾನಮಂತ್ರಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಭಾಗವಹಿಸಿದ್ದರು.

ಬೆಂಗಳೂರಿನ ತಮ್ಮ ನಿವಾಸದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದರು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟಕ್ಕೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು. ವಿದೇಶಗಳಿಗೂ ಮತ್ತು ಭಾರತದಲ್ಲಿ ತೆಗೆದುಕೊಂಡ ಶಿಸ್ತುಕ್ರಮಗಳ ಕುರಿತು ಕೇಂದ್ರ ಆರೋಗ್ಯ ಕಾರ್ಯದರ್ಶಿ 15-20 ನಿಮಿಷಗಳ ಕಾಲ ಸದಸ್ಯರಿಗೆ ಮಾಹಿತಿ ನೀಡಿದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕಿರಿಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ವಿ. ಮುರಳೀಧರನ್ ಅವರು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರದ ಸಂಪುಟ ಸಹೋದ್ಯೋಗಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಹಾಜರಿದ್ದರು. ಅವರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾಮಾಜಿಕ ನ್ಯಾಯ ಸಚಿವ ಥವಾರ್ ಚಾಂದ್ ಗೆಹ್ಲೋಟ್, ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಸಭೆಯಲ್ಲಿ ಭಾಗಿಯಾಗಿದ್ದರು.

 Corona Vaccine: Former PM HD Deve Gowda Participates In All-Party Meeting Called By PM Modi

ಸಾಂಕ್ರಾಮಿಕ ಪಿಡುಗಿನ ಕುರಿತು ಸಭೆಯಲ್ಲಿ ಚರ್ಚೆ:

ಭಾರತದಲ್ಲಿ ಯಾವ ಕಂಪನಿಗಳು ಕೊರೊನಾವೈರಸ್ ಲಸಿಕೆ ಸಂಶೋಧನೆಯಲ್ಲಿ ತೊಡಗಿವೆ. ಲಸಿಕೆ ಪ್ರಯೋಗದ ವೈದ್ಯಕೀಯ ಸಂಶೋಧನೆಯು ಯಾವ ಹಂತದಲ್ಲಿದೆ ಎಂಬುದರ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಾಹಿತಿ ನೀಡಲಿದ್ದು, ಅಂತಿಮವಾಗಿ ಸರ್ವಪಕ್ಷಗಳ ಸಭೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಆರಂಭದಿಂದ ಕೇಂದ್ರ ಸರ್ಕಾರವು ನಡೆಸುತ್ತಿರುವ 2ನೇ ಸರ್ವಪಕ್ಷಗಳ ಸಭೆ ಇದಾಗಿದೆ. ಭಾರತ ಲಾಕ್ ಡೌನ್ ಜಾರಿಗೊಳಿಸುವುದಕ್ಕೂ ಮೊದಲು ಏಪ್ರಿಲ್ ನಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+