ಹೊಸ ರೂಪಾಂತರ ಸೃಷ್ಟಿಯಾಗದಿದ್ದರೆ ಮೂರನೇ ಅಲೆ ಸಾಧ್ಯತೆ ಕಡಿಮೆ ಎಂದ ತಜ್ಞರು
ನವದೆಹಲಿ, ಸೆಪ್ಟೆಂಬರ್ 7; ದೇಶದಲ್ಲಿ ಸೆಪ್ಟೆಂಬರ್ ವೇಳೆಗೆ ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಯನ್ನು ಕೆಲವು ತಜ್ಞರು ಈ ಮುನ್ನವೇ ನೀಡಿದ್ದು, ಸೆಪ್ಟೆಂಬರ್ ಕಾಲಿಡುತ್ತಿದ್ದಂತೆ ಇದೀಗ ಆತಂಕ ಎದುರಾಗಿದೆ. ಎರಡು ದಿನಗಳ ಹಿಂದೆ ದೇಶದಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದುದು ಈ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.
ಆದರೆ ಕೊರೊನಾ ಸೋಂಕಿನ ಹೊಸ ರೂಪಾಂತರ ಸೃಷ್ಟಿಯಾಗದೇ ಇದ್ದರೆ, ಎರಡನೇ ಅಲೆಯಂತೆ ಮೂರನೇ ಅಲೆ ಭೀಕರ ಸ್ವರೂಪ ಪಡೆಯುವ ಸಾಧ್ಯತೆ ಇಲ್ಲ ಎಂಬ ಸಮಾಧಾನಕರ ಸಂಗತಿಯನ್ನು ಸಾಂಕ್ರಾಮಿಕ ರೋಗಶಾಸ್ತ್ರಜ್ಞರಾದ ಡಾ. ಗಗನ್‌ದೀಪ್ ಕಂಗ್ ಹೇಳಿದ್ದಾರೆ.
'ದೇಶದಲ್ಲಿ ಬಹುಪಾಲು ಜನಸಂಖ್ಯೆ ಈಗಾಗಲೇ ಸೋಂಕಿಗೆ ತುತ್ತಾಗಿದೆ ಹಾಗೂ ಬಹಳಷ್ಟು ಜನರು ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಪಡೆದಿದ್ದಾರೆ. ಹೀಗಾಗಿ ಮೂರನೇ ಅಲೆ ಗಂಭೀರ ಸ್ವರೂಪ ಪಡೆಯುವ ಸಾಧ್ಯತೆ ಕಡಿಮೆ ಇದೆ' ಎಂದು ಅವರು ಹೇಳಿದ್ದಾರೆ.

'ಭಾರತದಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯವೂ ಚುರುಕಾಗಿ ಸಾಗುತ್ತಿದೆ. ಜನರನ್ನು ಸೋಂಕಿನಿಂದ ರಕ್ಷಣೆ ಮಾಡಲು ಇದೇ ವೇಗದಲ್ಲಿ ಇನ್ನಷ್ಟು ದಿನ ಮುಂದುವರೆಯಬೇಕಿದೆ' ಎಂದು ಸಲಹೆ ನೀಡಿದ್ದಾರೆ.
'ಕೊರೊನಾ ಮೂರನೇ ಅಲೆ ಕುರಿತು ಹಲವು ತಜ್ಞರು ನೀಡುತ್ತಿರುವ ಮಾದರಿಗಳು ಊಹೆಗಳಂತಿವೆ ಹಾಗೂ ಈ ಊಹೆಗಳು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ತಿಳಿಸುತ್ತಿವೆ. ಆದರೆ ಇದಕ್ಕೆ ದತ್ತಾಂಶಗಳು ಎಲ್ಲಿಂದ ದೊರೆಯುತ್ತಿವೆ ಎನ್ನುವ ಮಾಹಿತಿಯಿಲ್ಲ' ಎಂದು ಪ್ರಶ್ನಿಸಿದ್ದಾರೆ.
ಸೆಪ್ಟೆಂಬರ್‌ನಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿ, ಅಕ್ಟೋಬರ್ ವೇಳೆಗೆ ಉತ್ತುಂಗ ತಲುಪಲಿದೆ. ಲಸಿಕಾ ಪ್ರಕ್ರಿಯೆ ಚುರುಕುಗತಿಯಲ್ಲಿ ನಡೆಯದೇ ಇದ್ದರೆ, ದೇಶದಲ್ಲಿ ದಿನನಿತ್ಯ ಆರು ಲಕ್ಷ ಹೊಸ ಪ್ರಕರಣಗಳು ದಾಖಲಾಗಲಿವೆ ಎಂದು ಕೆಲವು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಅಭಿಪ್ರಾಯಗಳ ಬೆನ್ನಲ್ಲೇ ಗಗನ್‌ದೀಪ್ ಈ ಹೇಳಿಕೆ ನೀಡಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ರಚಿಸಿದ ತಜ್ಞರ ಸಮಿತಿಯು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಸೋಂಕಿನ ಸಾಧ್ಯತೆ ಇರುವುದರಿಂದ ಮಕ್ಕಳ ಚಿಕಿತ್ಸೆಗೆ ಸೌಲಭ್ಯಗಳು, ವೈದ್ಯರು, ವೆಂಟಿಲೇಟರ್‌ಗಳು, ಆಂಬುಲೆನ್ಸ್‌ಗಳು ಮುಂತಾದ ಸಾಧನಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದ್ದು, ಪ್ರಧಾನಿ ಕಚೇರಿಗೆ ವರದಿ ಸಲ್ಲಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆ
ಇದರೊಂದಿಗೆ, ದೇಶದಲ್ಲಿ ಹಬ್ಬಗಳು ಸಮೀಪಿಸಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾ ಸೋಂಕಿನ ಹರಡುವಿಕೆ ಕುರಿತು ಜನರಿಗೆ ಎಚ್ಚರಿಕೆ ನೀಡಿದೆ. ಜನರು ತಮ್ಮ ತಮ್ಮ ಮನೆಗಳಲ್ಲೇ ಹಬ್ಬ ಆಚರಿಸಿ. ಕೊರೊನಾ ನಿಯಮಗಳನ್ನು ಪಾಲಿಸಿ ಹಾಗೂ ಕೊರೊನಾ ಲಸಿಕೆಗಳನ್ನು ಪಡೆದುಕೊಳ್ಳಿ ಎಂದು ಸೂಚನೆ ನೀಡಿದೆ.
ಮಾಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಸಾಮೂಹಿಕ ಕೂಟಗಳಂಥ ಸಾರ್ವಜನಿಕ ಸ್ಥಳಗಳು ತೆರೆಯುತ್ತಿದ್ದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಹೆಚ್ಚೆಚ್ಚು ಜನರಿಗೆ ಲಸಿಕೆಯನ್ನು ನೀಡಬೇಕಿದೆ. ಕೊರೊನಾ ನಿಯಮಗಳ ಪಾಲನೆಯನ್ನು ಜನರು ಮಾಡಬೇಕಿದೆ ಎಂದು ಮುಂಬೈ ಮಸೀನಾ ಆಸ್ಪತ್ರೆಯ ಡಾ. ಸೋನಂ ಸೋಲಂಕಿ ವಿವರಿಸಿದ್ದಾರೆ.
ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಯಿತು ಎಂದರೆ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರುವವರ ಹಾಗೂ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದರ್ಥವಲ್ಲ. ಸೂಕ್ತ ಸಮಯದಲ್ಲಿ ಐಸೊಲೇಟ್ ಮಾಡುವ ಮೂಲಕ ಕೊರೊನಾ ಮೂರನೇ ಅಲೆಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆಯುವುದನ್ನು ತಡೆಯಬಹುದಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
ಭಾರತದಲ್ಲಿ ಕೊರೊನಾ ಪ್ರಕರಣಗಳು: ಭಾರತದಲ್ಲಿ ಮಂಗಳವಾರ 31,222 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 42,942 ಮಂದಿ ಚೇತರಿಕೆ ಕಂಡಿದ್ದು,ಒಂದೇ ದಿನದಲ್ಲಿ 290 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3,30,58,843ಕ್ಕೆ ಏರಿದೆ. ಒಟ್ಟಾರೆ ಸಕ್ರಿಯ ಪ್ರಕರಣಗಳು 3,92,864 ಇವೆ.
-
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ












Click it and Unblock the Notifications