Breaking; ಭಾರತದಲ್ಲಿ ಕಡಿಮೆ ಆಯ್ತಾ ಕೊರೊನಾ ಪ್ರಕರಣ?
ನವದೆಹಲಿ, ಆಗಸ್ಟ್ 17: ಭಾರತದಲ್ಲಿ ಕಳೆದ ವಾರಕ್ಕೆ ಹೋಲಿಸಿದರೆ, ಈಗ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ದೇಶದಲ್ಲಿಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9062 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 36 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 15,220 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,286,256ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,654,064 ಸೋಂಕಿತರು ಗುಣಮುಖರಾಗಿದ್ದು, 527,134 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 105,058ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಪರೀಕ್ಷೆ: ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,64,038 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,10,56,541 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೋವಿಡ್-19 ಲಸಿಕೆ ವಿತರಣೆ ಮಾಹಿತಿ: ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 25,90,557 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 208,57,15,251 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications