Breaking: ಭಾರತದಲ್ಲಿ ಒಂದೇ ದಿನ 21,566 ಮಂದಿಗೆ ಕೊರೊನಾ ವೈರಸ್

ನವದೆಹಲಿ, ಜುಲೈ 21: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಮೂರು ತಿಂಗಳ ನಂತರ ಕೋವಿಡ್-19 ಪ್ರಕರಣಗಳ ಸಂಖ್ಯೆಯು 21,000 ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 21566 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 45 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 18,294 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,825,185ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,150,434 ಸೋಂಕಿತರು ಗುಣಮುಖರಾಗಿದ್ದು, 525,870 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 148,881ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಪಾಸಿಟಿವಿಟಿ ದರ ಶೇ. 4.25ರಷ್ಟಿದೆ

ಕೊರೊನಾ ವೈರಸ್ ಪಾಸಿಟಿವಿಟಿ ದರ ಶೇ. 4.25ರಷ್ಟಿದೆ

ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 5,07,360 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,11,60,846 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಈ ಹಂತದಲ್ಲಿ ಕಳೆದ ಒಂದು ದಿನದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ. 4.25ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಲಕ್ಷದಿಂದ ಲಕ್ಷಕ್ಕೆ ಹೇಗಿದೆ ಪ್ರಕರಣಗಳ ಸಂಖ್ಯೆ?

ಭಾರತದಲ್ಲಿ ಲಕ್ಷದಿಂದ ಲಕ್ಷಕ್ಕೆ ಹೇಗಿದೆ ಪ್ರಕರಣಗಳ ಸಂಖ್ಯೆ?

ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ಏಕಾಏಕಿ ಏರಿಕೆಯಾಗದ ಉದಾಹರಣೆಗಳನ್ನೂ ಭಾರತ ಈ ಹಿಂದೆ ಕಂಡಿದೆ. ದೇಶದಲ್ಲಿ 2020ರ ಆಗಸ್ಟ್ 7ರಂದು 20 ಲಕ್ಷ ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದವು. ಅಲ್ಲಿಂದ ಸೋಂಕಿತರ ಸಂಖ್ಯೆಯು ಗಣನೀಯವಾಗಿ ಏರಿಕೆ ಆಯಿತು. ಆಗಸ್ಟ್ 23ರ ಹೊತ್ತಿಗೆ ಈ ಸಂಖ್ಯೆ 30 ಲಕ್ಷ ತಲುಪಿತು. ಸೆಪ್ಟಂಬರ್ 5ರ ವೇಳೆಗೆ 40 ಲಕ್ಷವಾದರೆ, ಅದೇ ಸೆಪ್ಟಂಬರ್ 16ರ ವೇಳೆಗೆ 50 ಲಕ್ಷದ ಗಡಿ ದಾಟಿತು. ಸೆಪ್ಟಂಬರ್ 28ಕ್ಕೆ ಸೋಂಕಿತ ಪ್ರಕರಣಗಳ ಸಂಖ್ಯೆ 60 ಲಕ್ಷದ ಗಡಿ ದಾಟಿತು. ಅಕ್ಟೋಬರ್ 11ಕ್ಕೆ 70 ಲಕ್ಷ ಸೋಂಕಿತ ಪ್ರಕರಣಗಳಾದರೆ, ಆ ಸಂಖ್ಯೆಯು ಅಕ್ಟೋಬರ್ 29ರ ಹೊತ್ತಿಗೆ 80 ಲಕ್ಷ ತಲುಪಿತು. ಅದೇ ರೀತಿ ನವೆಂಬರ್ 20ರ ವೇಳೆಗೆ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 90 ಲಕ್ಷ ತಲುಪಿದರೆ, ಡಿಸೆಂಬರ್ 19ರ ಹೊತ್ತಿಗೆ ಒಂದು ಕೋಟಿಯ ಗಡಿ ದಾಟಿತು.

2021ರ ಮೇ 4ರ ವೇಳೆಗೆ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಒಂದು ಕೋಟಿಯಿಂದ ಎರಡು ಕೋಟಿಗೆ ಜಿಗಿಯಿತು. ಅದೇ ರೀತಿ 2021ರ ಜೂನ್ 23ರ ಹೊತ್ತಿಗೆ ಸೋಂಕಿತ ಪ್ರಕರಣಗಳ ಸಂಖ್ಯೆಯು ಮೂರು ಕೋಟಿ ಗಡಿ ಮುಟ್ಟಿತು ಎಂಬುದನ್ನು ಅಂಕಿ-ಸಂಖ್ಯೆಗಳು ವಿವರಿಸುತ್ತವೆ.

ದೇಶದಲ್ಲಿ ಬೂಸ್ಟರ್ ಡೋಸ್ ಲಸಿಕೆ ಉಚಿತ

ದೇಶದಲ್ಲಿ ಬೂಸ್ಟರ್ ಡೋಸ್ ಲಸಿಕೆ ಉಚಿತ

ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಏರಿಕೆ ಆಗುತ್ತಿರುವುದರ ಹಿನ್ನೆಲೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ದೇಶದಲ್ಲಿ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಅನ್ನು ಸಹ ಉಚಿತವಾಗಿ ನೀಡುವುದಕ್ಕೆ ನಿರ್ಧರಿಸಿದೆ. ಜುಲೈ 15 ರಿಂದ ಮುಂದಿನ 75 ದಿನಗಳವರೆಗೂ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಬೂಸ್ಟರ್ ಡೋಸ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಘೋಷಿಸಿದ್ದಾರೆ.

ದೇಶದಲ್ಲಿ 200 ಕೋಟಿ ಡೋಸ್ ಕೊರೊನಾ ಲಸಿಕೆ ವಿತರಣೆ

ದೇಶದಲ್ಲಿ 200 ಕೋಟಿ ಡೋಸ್ ಕೊರೊನಾ ಲಸಿಕೆ ವಿತರಣೆ

ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 29,12,855 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 200,91,91,969 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+