Breaking; ಭಾರತದಲ್ಲಿ ಮತ್ತೆ ಜಿಗಿತ ಕೊರೊನಾವೈರಸ್ ಸೋಂಕಿತರ ಸಂಖ್ಯೆ!

ನವದೆಹಲಿ, ಆಗಸ್ಟ್ 20: ಭಾರತದಲ್ಲಿ ಕಡಿಮೆ ಆಯ್ತು ಎನ್ನುವಷ್ಟರಲ್ಲೇ ಮತ್ತೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. 13,000ದ ಗಡಿ ದಾಟಿರುವ ಸೋಂಕಿತರ ಸಂಖ್ಯೆ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13272 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 36 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 13,900 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,327,890ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,685,535 ಸೋಂಕಿತರು ಗುಣಮುಖರಾಗಿದ್ದು, 527,289 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 115,066ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 Coronavirus case jumps In india; 13272 New Cases Reported in Last 24 Hours

ಕೊರೊನಾ ವೈರಸ್ ಪರೀಕ್ಷೆ:

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,15,231 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,21,88,283 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೋವಿಡ್-19 ಲಸಿಕೆ ವಿತರಣೆ ಮಾಹಿತಿ:

ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 13,15,536 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 209,40,48,140 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

      ಬೆಂಗಳೂರಿನಲ್ಲೊಂದು ದಾರುಣ ಘಟನೆ: ಕುಟುಂಬವೇ ದುರಂತ ಅಂತ್ಯ | OneIndia

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+