Breaking; ಭಾರತದಲ್ಲಿ 7000 ಆಸುಪಾಸಿಗೆ ಬಂದ ಕೊರೊನಾವೈರಸ್!
ನವದೆಹಲಿ, ಸೆಪ್ಟೆಂಬರ್ 3: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 7,000 ಆಸುಪಾಸಿಗೆ ಬಂದು ನಿಂತಿದೆ. ದೈನಂದಿನ ಪಾಸಿಟಿವಿಟಿ ದರವು ಶೇ.1.98ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7219 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 33 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 9,651 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,449,726ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,865,016 ಸೋಂಕಿತರು ಗುಣಮುಖರಾಗಿದ್ದು, 527,965 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 56,745ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಪರೀಕ್ಷೆ:
ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,64,886 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,68,31,141 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೋವಿಡ್-19 ಲಸಿಕೆ ವಿತರಣೆ ಮಾಹಿತಿ:
ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 25,83,815 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 213,01,07,236 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications