• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ 1,00,000ಕ್ಕೂ ಮೀರಿತು ಕೊರೊನಾ ಸೋಂಕಿತರ ಸಂಖ್ಯೆ!

|

ನವದೆಹಲಿ, ಮೇ.19: ಭಾರತದಲ್ಲಿ ನಾಲ್ಕನೇ ಅವಧಿಯ ಲಾಕ್ ಡೌನ್ ವಿಸ್ತರಣೆಯಾಗಿದ್ದರೂ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಸಾಲು ಸಾಲು ಲಾಕ್ ಡೌನ್ ಘೋಷಿಸಿದ ಭಾರತದಲ್ಲೂ ಕೋವಿಡ್-19 ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲೇ 4,970 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 134 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,139ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 3,163ಕ್ಕೆ ಏರಿದೆ.

ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸೆ ಹೋದ ಕಾರ್ಮಿಕರಿಗೆಂಥಾ ಶಿಕ್ಷೆ?ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸೆ ಹೋದ ಕಾರ್ಮಿಕರಿಗೆಂಥಾ ಶಿಕ್ಷೆ?

ಭಾರತದಲ್ಲಿ 1,01,139 ಕೊರೊನಾ ವೈರಸ್ ಸೋಂಕಿತರ ಪೈಕಿ 39,233 ಮಂದಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಉಳಿದಂತೆ 57,933 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

4 ರಾಜ್ಯಗಳಲ್ಲಿ 10,000 ಗಡಿ ದಾಟಿದ ಸೋಂಕಿರ ಸಂಖ್ಯೆ:

ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಹಾಗೂ ನವದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಈಗಾಗಲೇ 10 ಸಾವಿರದ ಗಡಿ ದಾಟಿದೆ. ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 35,058 ಮಂದಿ ಕೊರೊನಾ ವೈರಸ್ ಸೋಂಕಿತರಿದ್ದು, ಇದೊಂದೇ ರಾಜ್ಯದಲ್ಲಿ ಮಹಾಮಾರಿಗೆ 1,249 ಮಂದಿ ಬಲಿಯಾಗಿದ್ದಾರೆ.

ತಮಿಳುನಾಡಿನಲ್ಲಿ 11,760 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿದ್ದು, 82 ಮಂದಿ ಪ್ರಾಣ ಬಿಟ್ಟಿದ್ದಾರೆ. 11,746 ಸೋಂಕಿತರನ್ನು ಹೊಂದಿರುವ ಗುಜರಾತ್ ನಲ್ಲಿ 694 ಮಂದಿ ಮಹಾಮಾರಿಯಿಂದ ಉಸಿರು ಚೆಲ್ಲಿದ್ದಾರೆ. ನವದೆಹಲಿಯಲ್ಲಿ 10,054 ಮಂದಿಗೆ ಕೊರೊನಾ ವೈರಸ್ ಕನ್ಫರ್ಮ್ ಆಗಿದ್ದು, ಇದುವರೆಗೂ ಕೊವಿಡ್-19ನಿಂದ 160 ಜನ ಮೃತಪಟ್ಟಿದ್ದಾರೆ.

English summary
Coronavirus Infected Cases Cross 1 Lakh In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X