• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರು: 28 ಮಂದಿ ಸಾವು

|

ನವದೆಹಲಿ, ಮಾರ್ಚ್ 30: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಒಟ್ಟು 28 ಮಂದಿ ಮೃತಪಟ್ಟಿದ್ದಾರೆ.

ಇದೀಗ ಕೊರೊನಾ ಸೋಂಕಿಗೆ ಪಂಜಾಬ್‌ನಲ್ಲಿ ವೃದ್ಧರೊಬ್ಬರು ಮೃತಪಟ್ಟಿದ್ದು, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.ಬಂಗಾಳ, ತೆಲಂಗಾಣ, ತಮಿಳುನಾಡು, ಪಂಜಾಬ್, ಕರ್ನಾಟಕ, ಕೇರಳ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲಪ್ರದೇಶ ಮತ್ತು ಬಿಹಾರದಲ್ಲಿ ಈ ಸಾವು ಸಂಭವಿಸಿವೆ.

ಕೋವಿಡ್-19: ಧೂಮಪಾನಿಗಳಿಗೆ ಹೆಚ್ಚು ಅಪಾಯ-ಡಾ. ವಿಶಾಲ್ ರಾವ್

ಭಾನುವಾರ ದೇಶದಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ಒಟ್ಟು 21 ದಿನಗಳ ಕಾಲ ಇಡೀ ದೇಶವನ್ನೇ ಲಾಕ್‌ಡೌನ್ ಮಾಡಿದ್ದು ಈ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಡೆದ ಮನ್‌ಕೀ ಬಾತ್‌ನಲ್ಲಿ ದೇಶದ ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1024ಕ್ಕೇರಿದೆ. ಇರಾನ್‌ನಿಂದ 275 ಭಾರತೀಯರು ಜೋಧ್‌ಪುರಕ್ಕೆ ಬಂದಿಳಿದಿದ್ದಾರೆ. ಈ ತಿಂಗಳ ಮೊದಲ ವಾರದಲ್ಲಿ 277 ಮಂದಿ ಇರಾನ್‌ನಿಂದ ಬಂದಿದ್ದು ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ.

ವಿಶ್ವದಾದ್ಯಂತ 33 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇಟಲಿಯೊಂದರಲ್ಲೇ ಮೃತರ ಸಂಖ್ಯೆ 10 ಸಾವಿರಕ್ಕೇರಿದೆ.

English summary
In India overall number of COVID-19 positive people crossed the 1000 mark Death 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X