ಭಾರತದಲ್ಲಿ 5 ಲಕ್ಷದ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ
ನವದೆಹಲಿ, ಜೂನ್ 26 : ಶುಕ್ರವಾರ ಒಂದೇ ದಿನ 17 ಸಾವಿರ ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಭಾರತದಲ್ಲಿ ದಾಖಲಾಗಿವೆ. ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ.
Recommended Video
ಒಂದೇ ದಿನ 17,000 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿರುವುದು ಇದೇ ಮೊದಲು. ಮಹಾರಾಷ್ಟ್ರ ರಾಜ್ಯದಲ್ಲಿ ಒಂದೇ ದಿನ 5 ಸಾವಿರ ಪ್ರಕರಣ ದಾಖಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,52,765ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ 3645, ದೆಹಲಿಯಲ್ಲಿ 3,460 ಹೊಸ ಪ್ರಕರಣಗಳು ಶುಕ್ರವಾರ ದಾಖಲಾಗಿವೆ. ಪಶ್ಚಿಮ ಬಂಗಾಳದಲ್ಲಿಯೂ ಒಂದೇ ದಿನ ಹೆಚ್ಚು ಪ್ರಕರಣ ಪತ್ತೆಯಾಗಿದೆ.
ಮಹಾರಾಷ್ಟ್ರದಲ್ಲಿ ಶುಕ್ರವಾರ 175 ಜನರು ಮೃತಪಟ್ಟಿದ್ದಾರೆ. ಕಳೆದ 48 ಗಂಟೆಗಳಲ್ಲಿ 91 ಜನರು ಮೃತಪಟ್ಟಿದ್ದಾರೆ. ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಟಾಪ್ 3 ಸ್ಥಾನದಲ್ಲಿವೆ.
ಗುಜರಾತ್‌ನಲ್ಲಿ ಇಂದು 580 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,106ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ 445 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 11005ಕ್ಕೆ ಏರಿಕೆಯಾಗಿದೆ.












Click it and Unblock the Notifications