ಕೊರೊನಾ: ದೇಶದಲ್ಲಿ 24 ಗಂಟೆಗಳಲ್ಲಿ 1,553 ಮಂದಿಗೆ ಸೋಂಕು

ನವದೆಹಲಿ, ಏಪ್ರಿಲ್ 20: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,553 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 36 ಮಂದಿ ಬಲಿಯಾಗಿದ್ದು, ಒಟ್ಟು 17 ಸಾವಿರ ಮಂದಿಗೆ ಇದುವರೆಗೆ ಸೋಂಕು ತಗುಲಿದೆ. 543 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ 390 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು 16 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 1,407 ಕೊರೊನಾ ಪ್ರಕರಣಗಳ ಪೈಕಿ 70 ಮಂದಿ ಬಲಿಯಾಗಿದ್ದಾರೆ.

ಆಂಧ್ರಪ್ರದೇಶದಲ್ಲಿ 646 ಪ್ರಕರಣ, 15 ಮಂದಿ ಮೃತಪಟ್ಟಿದ್ದಾರೆ. ತೆಲಂಗಾಣದಲ್ಲಿ 844 ಪ್ರಕರಣಗಳು, 18 ಮಂದಿ ಸಾವಿಗೀಡಾಗಿದ್ದಾರೆ. ಉತ್ತರ ಪ್ರದೇಶದಲ್ಲಿ 1084 ಮಂದಿಗೆ ಸೋಂಕು ದೃಢಪಟ್ಟಿದ್ದು 17 ಮಂದಿ ಸಾವನ್ನಪ್ಪಿದ್ದಾರೆ.

Coronavirus Cases In India Rises To 17,265

ಒಂದೇ ದಿನದಲ್ಲಿ 1500ಕ್ಕೂ ಹೆಚ್ಚು ಕೊವಿಡ್ 19 ಪ್ರಕರಣಗಳು ದೃಢಪಟ್ಟಿವೆ. ಸೋಮವಾರ ಸಂಜೆ 4 ಗಂಟೆಯವರೆಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 17,265ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ತಿಳಿಸಿದ್ದಾರೆ.

ದೇಶಾದ್ಯಂತ ದಾಖಲಾಗಿರುವ ಒಟ್ಟು 17,265 ಕೊರೊನಾ ಪ್ರಕರಗಳಲ್ಲಿ 2546 ಮಂದಿ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ 14,175 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 543 ಮಂದಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ 4203 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 223 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+