ಮಹಾರಾಷ್ಟ್ರ, ಕೇರಳ, ತಮಿಳುನಾಡು ಕೋವಿಡ್ ಕೇಸುಗಳ ವಿವರ
ಬೆಂಗಳೂರು, ಜುಲೈ 15 : ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಬುಧವಾರ ಸಾವಿರಾರು ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ ಒಂದೇ ದಿನ 3176 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ.
Recommended Video
ಬುಧವಾರ ಮಹಾರಾಷ್ಟ್ರದಲ್ಲಿ 7975 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ, 233 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,75,640ಕ್ಕೆ ಏರಿಕೆಯಾಗಿದೆ. 3606 ಸೋಂಕಿತರು ಇಂದು ಗುಣಮುಖರಾಗಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ಇಂದು 4,496 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ, 68 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,51,820ಕ್ಕೆ ಏರಿಕೆಯಾಗಿದೆ. ಇವುಗಳಲ್ಲಿ 47,340 ಸಕ್ರಿಯ ಪ್ರಕರಣಗಳು. ರಾಜ್ಯದಲ್ಲಿ ಇದುವರೆಗೂ 2,167 ಜನರು ಮೃತಪಟ್ಟಿದ್ದಾರೆ.

ಕೇರಳದಲ್ಲಿ ಇಂದು 623 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಇವುಗಳಲ್ಲಿ 157 ಪ್ರಕರಣ ತಿರುವನಂತಪುರದಲ್ಲಿಯೇ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9553ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4880.












Click it and Unblock the Notifications