ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊರೊನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆ

|
Google Oneindia Kannada News

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಕೊರೊನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 724ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ರಾಜಸ್ಥಾನದ ಭಿಲ್ವಾರಾದಲ್ಲಿ ಎರಡನೇ ಸಾವು ಸಂಭವಿಸಿದೆ. 60 ವರ್ಷದ ವೃದ್ಧೆ ಮೃತಪಟ್ಟಿದ್ದು ಅವರಿಗೆ ರಕ್ತದೊತ್ತಡ ಹಾಗೂ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆ ಇತ್ತು ಎಂದು ತಿಳಿದುಬಂದಿದೆ.

ಅಮೆರಿಕದಲ್ಲಿ ಕೊರೊನಾ ಸೋಂಕಿತರು ಹೆಚ್ಚಿದ್ದರೂ ಸಾವಿನ ಸಂಖ್ಯೆ ಕಡಿಮೆ!ಅಮೆರಿಕದಲ್ಲಿ ಕೊರೊನಾ ಸೋಂಕಿತರು ಹೆಚ್ಚಿದ್ದರೂ ಸಾವಿನ ಸಂಖ್ಯೆ ಕಡಿಮೆ!

ಇದಕ್ಕೂ ಮುನ್ನ ಭಿಲ್ವಾರಾದಲ್ಲಿ 73 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದರು. ಅವರಿಗೂ ಕಿಡ್ನಿ ವೈಫಲ್ಯ ಹಾಗೂ ಮಧುಮೇಹದ ತೊಂದರೆ ಇತ್ತು. ಬಳಿಕ ಅವರಿಗೆ ಮೆದುಳು ಪಾರ್ಶ್ವವಾಯುವಿಗೆ ತುತ್ತಾಗಿ ಕೋಮಾಗೆ ಹೋಗಿದ್ದರು ಬಳಿಕ ಸಾವನ್ನಪ್ಪಿದ್ದರು.

Death Toll Rises To 17 Cases Soar To 724 In India

ಪಿಂಪ್ರಿ ಚಿಂಚವಾಡದಲ್ಲಿ ಕಳೆದ 15 ದಿನಗಳ ಹಿಂದೆ ಮೂರು ಮಂದಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಮೂರು ಮಂದಿಯ ರಿಪೋರ್ಟ್ ನೆಗೆಟಿವ್ ಬಂದಿದೆ. ಮೂರು ಮಂದಿಯನ್ನೂ ಇಂದೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರದಲ್ಲಿ ಒಂದೇ ದಿನ 112 ಕೊರೊನಾ ಪ್ರಕರಣಗಳು ಕಂಡುಬಂದಿದ್ದು ಒಟ್ಟಾರೆ ಇದುವರೆಗೆ 734 ಕೊರೊನಾ ವೈರಸ್‌ ಪ್ರಕರಣಗಳು ದೃಢ ಪಟ್ಟಿವೆ.

ಈ ಪೈಕಿ ಒಟ್ಟು 17 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 55 ಕೋವಿಡ್‌-19 ಪ್ರಕರಣಗಳು ದೃಢ ಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ವಿಶ್ವಾದ್ಯಂತ ಇದುವರೆಗೆ 5,20,000 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ 23,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 1,22,000 ರೋಗಿಗಳು ಗುಣಮುಖರಾಗಿದ್ದಾರೆ.

English summary
The death toll due to the coronavirus epidemic rose to 17 with Rajasthan recording its second death on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X